Karnataka Weather: ನಾಳೆ ಬಾಗಲಕೋಟೆ, ಬೆಳಗಾವಿ ಸೇರಿ ಹಲವೆಡೆ ಲಘು ಮಳೆ ಸಾಧ್ಯತೆ
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ಆಕಾಶ. ಕೆಲವು ಪ್ರದೇಶಗಳಲ್ಲಿ ಲಘು ಮಳೆ ಸಾಧ್ಯತೆ ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆ ಇದೆ.
Prabhakara R
December 26, 2024
ಬೆಂಗಳೂರು: ಡಿ.27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣ ಹವಾಮಾನ ಇರುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆಯಿದೆ ಇದೆ ಎಂದು ಭಾರತ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.
ಮುಂದಿನ 2 ದಿನಗಳ ಕಾಲ ರಾಜ್ಯದಲ್ಲಿ ಯಾವುದೇ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿಲ್ಲ. ಇನ್ನು ಡಿ.28, 29, 30, 31 ಹಾಗೂ ಜ.1ರವರೆಗೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.
ಡಿ. 29ರ ಬೆಳಗ್ಗೆವರೆಗಿನ ಬೆಂಗಳೂರು, ಸುತಮುತ್ತಲಿನ ಪ್ರದೇಶಗಳ ಮುನ್ಸೂಚನೆ:ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ಆಕಾಶ. ಕೆಲವು ಪ್ರದೇಶಗಳಲ್ಲಿ ಲಘು ಮಳೆ ಸಾಧ್ಯತೆ ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26° C ಮತ್ತು 20° C ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27ನೇ C ಮತ್ತು 20ನೇ C ಇರುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Karnataka Weather: ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ