Karnataka Weather: ಇಂದು ದಕ್ಷಿಣ ಕನ್ನಡ, ಉಡುಪಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ
Karnataka Weather: ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ಆಕಾಶ ಇರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ.
Prabhakara R
December 24, 2024
ಬೆಂಗಳೂರು: ಡಿ.24ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.
ಇನ್ನು ಡಿ.25ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಹೊರತುಪಡಿಸಿ, ರಾಜ್ಯದಾದ್ಯಂತ ಒಣ ಹವೆ ಹೆಚ್ಚಾಗಿರಲಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರಲಿದೆ.
ಡಿ. 26ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆಯಿದೆ.
ಡಿ. 27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮತ್ತು ವಿಜಯಪುರ ಹಾಗೂ ಗದಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆಯಿದೆ. ಇನ್ನು ಡಿ. 28 ಮತ್ತು 29ರಂದು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆಯಿದೆ.
ತಾಪಮಾನದ ಮುನ್ಸೂಚನೆಉತ್ತರ ಒಳನಾಡಿನಲ್ಲಿ ಮುಂದಿನ 3 ದಿನಗಳವರೆಗೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 °C ರಷ್ಟು ಕಡಿಮೆ ಇರುತ್ತದೆ. ನಂತರ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.
ಡಿ.25 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ಆಕಾಶ ಇರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ° C ಮತ್ತು 19 ° C ಇರುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Drone Pratap: ಕೃಷಿ ಹೊಂಡದಲ್ಲಿ ಸ್ಫೋಟ, ಡ್ರೋನ್ ಪ್ರತಾಪ್‌ಗೆ ಜಾಮೀನು ನೀಡಿದ ಕೋರ್ಟ್