ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ʼʼರಾಜ್ಯ ಸರ್ಕಾರ ಮೀನುಗಾರರ ಪರʼʼ: ಲಕ್ಷ್ಮೀ ಹೆಬ್ಬಾಳ್ಕರ್

ಮೀನುಗಾರರು ಸುರಕ್ಷಿತವಾಗಿ ಸಮುದ್ರಕ್ಕಿಳಿದು ಮೀನುಗಾರಿಕೆ ಮಾಡಬೇಕು. ಕಳೆದ 5 ವರ್ಷಗಳಲ್ಲಿ ‌140 ಜನರು ಪ್ರಾಣ‌ ಕಳೆದುಕೊಂಡಿದ್ದಾರೆ. ಮೀನುಗಾರಿಕೆ ಎಂದರೆ ಬೆಂಕಿ‌ ಜತೆ ಸರಸವಾಡಿದಂತೆ, ಜೀವ ರಕ್ಷಕಗಳನ್ನು ಸೂಕ್ತವಾಗಿ ಬಳಸಿಕೊಂಡು ಮೀನುಗಾರಿಕೆ ಮಾಡಬೇಕು. ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗಲೂ ಮೀನುಗಾರರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರು. ಈಗಲೂ ಸರ್ಕಾರ ಮೀನುಗಾರರ ಪರ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ಕೊಡುಗೆ ಅಪಾರ: ಲಕ್ಷ್ಮೀ ಹೆಬ್ಬಾಳ್ಕರ್

Profile Siddalinga Swamy Aug 14, 2025 8:33 PM

ಉಡುಪಿ: ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಕೂಡಾ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಹೇಳಿದರು. ಉಡುಪಿ ಜಿಲ್ಲಾಡಳಿತ ಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಮೀನುಗಾರಿಕೆಯಲ್ಲಿ ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸುವ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‌ಮೀನುಗಾರರು ತಮ್ಮ ಜೀವದ ಹಂಗನ್ನೇ ತೊರೆದು‌ ಸಮುದ್ರಕ್ಕಿಳಿದು ಮೀನುಗಾರಿಕೆ ಮಾಡುತ್ತಾರೆ ಎಂದರು.

ಮೀನುಗಾರರು ಕಡಲಿನಲ್ಲಿ ಹಗಲೂ ರಾತ್ರಿ ಲೆಕ್ಕಿಸದೆ ತಮ್ಮ ಜೀವವನ್ನು ಪಣಕಿಟ್ಟು ದುಡಿದು ತಮ್ಮ ಕುಟುಂಬವನ್ನು ಸಾಕುವುದಕ್ಕಾಗಿ ನೈಸರ್ಗಿಕ ಸಂಪನ್ಮೂಲಗಳ ಸಧ್ಬಳಕೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವು ಹಲವು ಯೋಜನೆಗಳಡಿ ಮೀನುಗಾರರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದೆ. ಇದರ ಸದುಪಯೋಗವನ್ನು ಮೀನುಗಾರರು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ‌

ಮಳೆಗಾಲದ ಸಮಯದಲ್ಲಿ ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಮೀನುಗಾರರ ಕುಟುಂಬಗಳಿಗೆ ಜೀವನೋಪಾಯಕ್ಕಾಗಿ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ರಾಜ್ಯದ ವಂತಿಗೆಯನ್ನು ದ್ವಿಗುಣಗೊಳಿಸಲಾಗಿದೆ. ಮೀನುಗಾರರಿಗೆ ಪ್ರತೀ ವರ್ಷ ಜೀವರಕ್ಷಕ ಸಾಧನಗಳಾದ ಲೈಫ್‌ ಬಾಯ್‌ & ಲೈಫ್‌ ಜಾಕೆಟ್‌ಗಳನ್ನು ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದೆ ಎಂದರು.

ಮೀನುಗಾರರು ಸುರಕ್ಷಿತವಾಗಿ ಸಮುದ್ರಕ್ಕಿಳಿದು ಮೀನುಗಾರಿಕೆ ಮಾಡಬೇಕು, ಕಳೆದ 5 ವರ್ಷಗಳಲ್ಲಿ ‌140 ಜನರು ಪ್ರಾಣ‌ ಕಳೆದುಕೊಂಡಿದ್ದಾರೆ. ಮೀನುಗಾರಿಕೆ ಎಂದರೆ ಬೆಂಕಿ‌ ಜತೆ ಸರಸವಾಡಿದಂತೆ, ಜೀವ ರಕ್ಷಕಗಳನ್ನು ಸೂಕ್ತವಾಗಿ ಬಳಸಿಕೊಂಡು ಮೀನುಗಾರಿಕೆ ಮಾಡಬೇಕು. ಸಿದ್ದರಾಮಯ್ಯನವರು ಈ ಹಿಂದೆ ಸಿಎಂ ಆಗಿದ್ದಾಗಲೂ ಮೀನುಗಾರರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರು, ಈಗಲೂ ಸರ್ಕಾರ ಮೀನುಗಾರರ ಪರ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಇದೇ ವೇಳೆ ಮೀನುಗಾರರಿಗೆ ನಿವೇಶನ ಹಕ್ಕು ಪತ್ರ ಹಾಗೂ ಮನೆ ಮಂಜೂರಾತಿ ಹಕ್ಕು ಪತ್ರವನ್ನು ಸಚಿವರು ವಿತರಿಸಿದರು.‌ ‌ಜತೆಗೆ ಉಳಿತಾಯ ಪರಿಹಾರ ಯೋಜನೆಯಡಿ ಫಲಾನುಭವಿಗಳಿಗೆ ತಲಾ ಮೂರು ಸಾವಿರದಂತೆ ಚೆಕ್ ವಿತರಣೆ, ಜೀವರಕ್ಷಕ ಸಾಧನಗಳನ್ನು ವಿತರಿಸಿದರು.‌‌

ಈ ಸುದ್ದಿಯನ್ನೂ ಓದಿ | Independence Day Fashion 2025: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ- ಸಿಂಪಲ್ ಕುರ್ತಾಗಳಿಗೆ ಹೆಚ್ಚಿದ ಬೇಡಿಕೆ

ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೆರೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ‌ರಮೇಶ್ ಕಾಂಚನ್, ರಾಜ್ಯ ಸಂಕಷ್ಟ ಪರಿಹಾರ ಸಮಿತಿ ಸದಸ್ಯ ಮದನ್ ಕುಮಾರ್, ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ‌ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್‌, ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ‌ವಿವೇಕ್ ಮತ್ತಿತರರು ಉಪಸ್ಥಿತರಿದ್ದರು.