ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದ ಹೆಬ್ಬಾಳ್ಕರ್‌

Laxmi Hebbalkar: ಧರ್ಮಸ್ಥಳ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಈ ವಿಚಾರವಾಗಿ ಡಿಸಿಎಂ ಅವರ ಹೇಳಿಕೆಗೆ ನನ್ನ ಸಹಮತವಿದೆ. ಎಸ್‌ಐಟಿ ತನಿಖೆ ಬಗ್ಗೆ ಅಧಿಕಾರಿಗಳು, ಗೃಹಸಚಿವರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳ ಕೇಸ್‌ನ ಸತ್ಯಾಸತ್ಯತೆ ತಿಳಿಯಲಿದೆ

-

Profile
Siddalinga Swamy Aug 15, 2025 4:58 PM

ಉಡುಪಿ: ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡುವುದು‌ ಸಲ್ಲ. ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದು ತಿಳಿಸಿದರು.

ಧರ್ಮಸ್ಥಳ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಈ ವಿಚಾರವಾಗಿ ಡಿಸಿಎಂ ಅವರ ಹೇಳಿಕೆಗೆ ನನ್ನ ಸಹಮತವಿದೆ. ಎಸ್‌ಐಟಿ ತನಿಖೆ ಬಗ್ಗೆ ಅಧಿಕಾರಿಗಳು, ಗೃಹಸಚಿವರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು. ‌

ಸಾಮಾಜಿಕ ಜಾಲತಾಣದಲ್ಲಿ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳ ವಿರುದ್ಧ ಅವಹೇಳನ ಮಾಡಲಾಗುತ್ತಿದೆ. ಸೌಜನ್ಯಳಿಗೆ ಅನ್ಯಾಯ ಆಗಿದ್ದರೆ, ನ್ಯಾಯ ಸಿಗಬೇಕು. ಮುಸಕುದಾರಿ ಬೇರೆ ಬೇರೆ ಸ್ಥಳವನ್ನು ಗುರುತು ಮಾಡುತ್ತಿದ್ದಾನೆ. ಇದಕ್ಕೆಲ್ಲಾ ಉತ್ತರ ಸಿಗಬೇಕು ಎಂದೇ ಎಸ್‌ಐಟಿ ರಚನೆಯಾಗಿದೆ. ಆದಷ್ಟು ಬೇಗ ಉತ್ತರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ‌

ಈ ಸುದ್ದಿಯನ್ನೂ ಓದಿ | Cylinder Blast: ಸಿಲಿಂಡರ್ ಸ್ಫೋಟ; ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ