ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pralhad Joshi: ರನ್ಯಾ ರಾವ್‌ ಪ್ರಕರಣ ಸಿಬಿಐಗೆ ವಹಿಸಿ: ಜೋಶಿ ಆಗ್ರಹ

Pralhad Joshi: ಗೋಲ್ಡ್ ಸ್ಮಗ್ಲಿಂಗ್ ಆರೋಪಿ ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರೂ ಕೇಳಿ ಬರುತ್ತಿದೆ ಎನ್ನಲಾಗುತ್ತಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ರನ್ಯಾ ರಾವ್‌ ಪ್ರಕರಣ ಸಿಬಿಐಗೆ ವಹಿಸಿ: ಜೋಶಿ ಆಗ್ರಹ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ.

Profile Siddalinga Swamy Mar 15, 2025 10:09 PM

ಉಡುಪಿ: ಗೋಲ್ಡ್ ಸ್ಮಗ್ಲಿಂಗ್ ಆರೋಪಿ ರನ್ಯಾ ರಾವ್‌ಗೆ ರಾಜ್ಯ ಸರ್ಕಾರದ ಅಧಿಕಾರಿಗಳೇ ಎಸ್ಕಾರ್ಟ್ ಕೊಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ದುಬೈನಿಂದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ತೊಡಗಿದ್ದ ರನ್ಯಾ ರಾವ್‌ಗೆೆ ಇಲ್ಲಿನ ಅಧಿಕಾರಿಗಳು ಪ್ರೊಟೋಕಾಲ್ ವ್ಯವಸ್ಥೆ ಮಾಡಿ ತಪಾಸಣೆ ಇಲ್ಲದೆ ಬಿಟ್ಟಿದ್ದಾರೆ ಎಂದು ಆರೋಪಿಸಿದರು. ಈ ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರೂ ಕೇಳಿ ಬರುತ್ತಿದೆ ಎನ್ನಲಾಗುತ್ತಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಗೃಹ ಸಚಿವ ಪರಮೇಶ್ವರ್ ಪ್ರಕರಣವನ್ನು ಮೊದಲು ಸಿಐಡಿ ತನಿಖೆಗೆ ಕೊಟ್ಟರು. ರಾಮಚಂದ್ರ ರಾವ್ ಡಿಜಿಐ ಆಗಿದ್ದಾರೆ ಎಂದು ಅಡಿಷನಲ್ ಚೀಫ್ ಸೆಕ್ರೇಟರಿಗೆ ಕೊಟ್ಟಿದ್ದೇವೆ ಎನ್ನುತ್ತಾರೆ. ಕಸ್ಟಮ್ ತಪ್ಪಿಸಿ ಪ್ರೊಟೋಕಾಲ್ ಮೂಲಕ ಹೇಗೆ ಕರೆತಂದಿರಿ? ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನೂ ಓದಿ | Karnataka Weather: ಮಾ.18, 19ರಂದು ರಾಜ್ಯದ ಉತ್ತರ ಒಳನಾಡಿನಲ್ಲಿ ಬಿಸಿ ಗಾಳಿ ಎಚ್ಚರಿಕೆ

ಸಮಾಜ ವಿದ್ರೋಹಿ ಕೃತ್ಯಕ್ಕೆ ಬಳಕೆ ಆತಂಕ

ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ಬರುವವರೆಗೂ ನಿಮ್ಮ ಇಂಟೆಲಿಜೆನ್ಸ್ ಏನು ಮಾಡುತ್ತಿತ್ತು? ಎಂಬಂತಹ ಅನೇಕ ಪ್ರಶ್ನೆಗಳಿವೆ. ಸ್ಮಗ್ಲಿಂಗ್‌ನ ಬಂಗಾರ ಮತ್ತು ಅಂತಹ ಹಣ ಸಮಾಜ ವಿದ್ರೋಹಿ ಕೃತ್ಯಕ್ಕೆ ಬಳಕೆಯಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದರು.