ಚಿಕ್ಕಬಳ್ಳಾಪುರ: ತನ್ನನ್ನು ಬಿಟ್ಟು ಬೇರೊಬ್ಬಳ ಜೊತೆ ಯಾವಾಗಲೂ ಚಾಟಿಂಗ್ ಮಾಡುತ್ತಿರುತ್ತಾನೆ ಎಂದು ನೊಂದ ನವವಿವಾಹಿತೆಯೊಬ್ಬಳು (newsly married) ಆತ್ಮಹತ್ಯೆ (Self harming) ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗುಡಿಬಂಡೆ ತಾಲೂಕಿನ ಕೊಂಡವಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಶ್ರೀ ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ. ತವರು ಮನೆಯಲ್ಲಿ ಮನೆಯ ಹೊರಭಾಗದ ಶೌಚಾಲಯದಲ್ಲಿ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕೊಂಡವಾಲಹಳ್ಳಿ ನಿವಾಸಿ ಜಯಶ್ರೀಯನ್ನು ಕಳೆದ 6 ತಿಂಗಳ ಹಿಂದೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಹಳ್ಳಿಯ ನಿವಾಸಿ ಚಂದ್ರಶೇಖರ್ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಆದರೆ ಗಂಡ ಆಕೆಯ ಜೊತೆ ಮಾತನಾಡುವುದು ಬಿಟ್ಟು ಯಾವಾಗಲೂ ಬೇರೆ ಯುವತಿಯ ಜೊತೆಯಲ್ಲಿ ಚಾಟಿಂಗ್- ಟಾಕಿಂಗ್ ಆಂತ ಕಾಲ ಕಳೆಯುತ್ತಿದ್ದ. ಇದೇ ವಿಚಾರವಾಗಿ ಗಂಡ ಹೆಂಡತಿ ಮಧ್ಯೆ ಮನಸ್ತಾಪ ಉಂಟಾಗಿ ಜಗಳವೂ ಆಗಿದೆ.
ಇದನ್ನೂ ಓದಿ: Self Harming: ಬೆಂಗಳೂರಿನ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳ ಆತ್ಮಹತ್ಯೆ!
ಮನನೊಂದ ಜಯಶ್ರೀ ತನ್ನ ನೋವನ್ನು ತನ್ನ ಫೇಸ್ ಬುಕ್ ಖಾತೆಯಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಯಶ್ರೀ ತಂದೆ ಶ್ರೀಧರ್ ನೀಡಿದ ದೂರಿನ ಮೇರೆಗೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಹಾಗೂ ಯುವತಿ ಬಿಂದು ಎಂಬಾಕೆಯ ವಿರುದ್ಧ ದೂರು ದಾಖಲಾಗಿದೆ. ಆತ್ಮಹತ್ಯೆಗೆ ಮುನ್ನ ಜಯಶ್ರೀ, ತನ್ನ ಫೇಸ್ ಬುಕ್ ಖಾತೆಯಲ್ಲಿ, ನನ್ನ ಸಾವಿಗೆ ಆ ಹುಡುಗಿ ಮತ್ತು ನನ್ನ ಗಂಡ ಕಾರಣ ಎಂದು ಬರೆದಿದ್ದಾಳೆ. ಹೀಗಾಗಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದ್ದು ಗಂಡ ಹಾಗೂ ಯುವತಿಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್, ಯುವಕ ಆತ್ಮಹತ್ಯೆ
ಕಾರ್ಕಳ: ಖಾಸಗಿ ವಿಡಿಯೋ ಇಟ್ಟುಕೊಂಡು ಗೆಳೆಯರು ಮಾಡುತ್ತಿದ್ದ ಬ್ಲ್ಯಾಕ್‌ಮೇಲ್‌ನಿಂದ (Blackmail) ಆಘಾತಗೊಂಡು ಯುವಕನೊಬ್ಬ ಆತ್ಮಹತ್ಯೆಗೆ (Self Harming) ಶರಣಾದ ಘಟನೆ ಉಡುಪಿ (Udupi news) ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಳಣ್ಣಿನ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ನಿಟ್ಟೆ ಗ್ರಾಮದ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಪ್ರೀತಿಸಿದ ಯುವತಿ ಜತೆಗಿದ್ದ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಗೆಳೆಯರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಅಭಿಷೇಕ್ ಆಚಾರ್ಯ ಬರೆದಿಟ್ಟ ಡೆತ್ ನೋಟ್‌ನಲ್ಲಿ ಬ್ಲ್ಯಾಕ್‌ಮೇಲ್ ಮಾಡಿದ ನಾಲ್ವರು ಸ್ನೇಹಿತರ ಹೆಸರು ಉಲ್ಲೇಖಿತವಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಮೃತ ಯುವಕನ ಮೊಬೈಲ್ ಮತ್ತು ತಾಂತ್ರಿಕ ಆಯಾಮದಲ್ಲಿ ಪರಿಶೀಲನೆ ನಡೆಯುತ್ತಿದೆ. ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹೆಸರಿಸಿದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.