ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Sharjah murder Case: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಕೊಲೆ; ಕಾರಿನ ಡಿಕ್ಕಿಯಲ್ಲಿ ತುಂಡು ತುಂಡಾದ ಶವ ಪತ್ತೆ!

ಯುಎಇಯ ಶಾರ್ಜಾದಲ್ಲಿ ಪತ್ನಿ ಹಾಗೂ ಪುತ್ರನೊಂದಿಗೆ ವಾಸವಾಗಿದ್ದ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಕೊಲೆ ನಡೆದಿದೆ. ಕೊಲೆಯ ಬಳಿಕ ಮೃತನ ಪತ್ನಿ ಹಾಗೂ ಅಪ್ರಾಪ್ತ ವಯಸ್ಸಿನ ಪುತ್ರ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸಂಬಂಧ ಶಾರ್ಜಾ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಕೊಲೆ!

‌ಮೃತ ಪ್ರಕಾಶ್‌ ಕುಂದರ್. -

Prabhakara R
Prabhakara R Sep 22, 2026 4:40 PM

ಉಡುಪಿ: ಯುಎಇಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ (Sharjah murder Case) ಮಾಡಿರುವ ಘಟನೆ ನಡೆದಿದೆ. ಪ್ರಕಾಶ್ ಕುಂದರ್ (Prakash Kundar) ಕೊಲೆಯಾದ ದುರ್ದೈವಿ. ಜುಲೈ ತಿಂಗಳಲ್ಲಿ ಕೊಲೆ ನಡೆದಿದ್ದು, ಎರಡು ತಿಂಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಕೊಲೆಮಾಡಿ, ಶವವನ್ನು 9 ತುಂಡುಗಳನ್ನಾಗಿ ಮಾಡಿ, ಅವರದ್ದೇ ಕಾರಿನ ಡಿಕ್ಕಿಯಲ್ಲಿ ತುಂಬಿದ್ದರು ಎಂದು ತಿಳಿದುಬಂದಿದೆ.

ಶಾರ್ಜಾದಲ್ಲಿ ಪತ್ನಿ ಹಾಗೂ ಪುತ್ರನೊಂದಿಗೆ ಪ್ರಕಾಶ್‌ ವಾಸವಾಗಿದ್ದರು. ಕೊಲೆಯ ಬಳಿಕ ಮೃತನ ಪತ್ನಿ ಟೀನಾ ಹಾಗೂ ಅಪ್ರಾಪ್ತ ವಯಸ್ಸಿನ ಪುತ್ರ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪತ್ನಿಯೇ ಕೊಲೆ ಮಾಡಿಸಿದ್ದಾರೆಯೇ? ಅಥವಾ ಬೇರೆಯವರ ಸಹಾಯದಿಂದ ಕೃತ್ಯ ಎಸಗಲಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಪತ್ನಿ ಮತ್ತು ಪುತ್ರ ಭಾರತಕ್ಕೆ ಬಂದಿರುವ ಶಂಕೆ ಕೂಡ ವ್ಯಕ್ತವಾಗಿದೆ. ಈ ಸಂಬಂಧ ಶಾರ್ಜಾ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಜು.20 ರಂದು ಸಹೋದರನನ್ನು ಸಂಪರ್ಕಿಸಲು ಪ್ರಶಾಂತ್ ಕುಂದರ್ ಯತ್ನಿಸಿದ್ದರು. ಯಾವಾಗಲೂ ಪ್ರಕಾಶ್ ವಾಯ್ಸ್ ಮೆಸೇಜ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದರು. ಈ ಬಾರಿ ಟೆಕ್ಸ್ಟ್ ಮೆಸೇಜ್ ಮೂಲಕ ಉತ್ತರ ನೀಡಿದ್ದರು. ಕುಟುಂಬಸ್ಥರು ಕರೆ ಮಾಡುವಂತೆ ಒತ್ತಾಯಿಸಿದ ನಂತರ ಸಂಪರ್ಕ ಕಡಿತಗೊಂಡಿತ್ತು ಎಂದು ತಿಳಿದುಬಂದಿದೆ.

ಸಂಬಂಧಿಕರು ಪ್ರಕಾಶ್ ಕೆಲಸ ಮಾಡುತ್ತಿದ್ದ ಕಂಪನಿಯನ್ನು ಸಂಪರ್ಕಿಸಿದ್ದರು. ಆಗ ಅವರು ಭಾರತಕ್ಕೆ ಹೋಗಿರುವುದಾಗಿ ಕಂಪನಿ ತಿಳಿಸಿತ್ತು. ಆದರೆ ಭಾರತಕ್ಕೆ ಬಾರದೇ ಇರುವುದರಿಂದ ಶಾರ್ಜಾದಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು ಹುಡುಕಾಟ ನಡೆಸಿದಾಗ ಕಾರಿನ ಡಿಕ್ಕಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಮೃತದೇಹಕ್ಕಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ.