ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪ್ರದೀಪ್‌ ಪೂಜಾರಿ ಆತ್ಮಹತ್ಯೆ: ಮಧ್ಯ ಪ್ರದೇಶದಲ್ಲಿ ಇಬ್ಬರ ಬಂಧನ

Pradeep Poojary Case: ಉಡುಪಿಯ ಪ್ರದೀಪ್‌ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಮಧ್ಯ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿರುವ ಇಬ್ಬರನ್ನು ಪೊಲೀಸರು ಉಡುಪಿಗೆ ಕರೆ ತರುತ್ತಿದೆ.

ಪ್ರದೀಪ್‌ ಪೂಜಾರಿ ಆತ್ಮಹತ್ಯೆ: ಇಬ್ಬರ ಬಂಧನ

ಪ್ರದೀಪ್‌ ಪೂಜಾರಿ ಮತ್ತು ಹರಿರಾಮ್ ಶಂಕರ್ -

Ramesh Ballamoole
Ramesh Ballamoole Nov 4, 2026 11:33 AM

ಉಡುಪಿ, ನ. 4: ಕರಾವಳಿಯನ್ನೇ ನಡುಗಿಸಿದ ಪ್ರದೀಪ್‌ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದೆ (Pradeep Poojary Case). ಇದೀಗ ಮಧ್ಯ ಪ್ರದೇಶದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಮಧ್ಯ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿರುವ ಇಬ್ಬರನ್ನು ಪೊಲೀಸರು ಉಡುಪಿಗೆ ಕರೆ ತರುತ್ತಿದ್ದು, ಇಲ್ಲಿಗೆ ಕರೆತಂದ ಬಳಿಕ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ಸಾವಿಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದಡಿ ಸಹೋದರ, ಪೆರ್ಡೂರಿನ ದಿಲೀಪ್ ಕುಮಾರ್ ನೀಡಿದ ದೂರಿನಂತೆ ಹೊರ ರಾಜ್ಯದ ಇಬ್ಬರು ಕಾರ್ಮಿಕರು ಸೇರಿ 10ಕ್ಕೂ ಮಿಕ್ಕಿ ಆರೋಪಿಗಳ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಣಿ ಆತ್ಮಹತ್ಯೆಗೆ ಮತ್ತೊಂದು ಸೇರ್ಪಡೆ; ಗದಗದಲ್ಲಿ ‌ಇಂಜಿನಿಯರ್ ಆತ್ಮಹತ್ಯೆ

ಏನಿದು ಪ್ರಕರಣ?

ಪ್ರೇಮದ ವಿಚಾರಕ್ಕೆ ಸಂಬಂಧಿಸಿ ಯುವತಿಯ ಕಡೆಯವರು ಹಲ್ಲೆ ನಡೆಸಿದ್ದರಿಂದ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಪೆರ್ಡೂರು ನಾಯರ್ ಕೋಡಿಯ ಪ್ರದೀಪ್ ಪೂಜಾರಿ ಇತ್ತೀಚೆಗೆ ಆಸ್ಪತ್ರೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರದೀಪ್ ಸಾವಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಶ್ರಾವ್ಯಾ ಶೆಟ್ಟಿ, ಪ್ರಸನ್ನ ಶೆಟ್ಟಿ, ಸುಧೀರ್, ಶೈಲೇಶ್, ಶಶಾಂಕ್, ಕೃಷ್ಣ, ಸುಜಯ, ಸನತ್, ಹೊರ ರಾಜ್ಯದ ಇಬ್ಬರು ಕಾರ್ಮಿಕರು ಮತ್ತು ಇತರರ ವಿರುದ್ಧ ದಿಲೀಪ್‌ ಕುಮಾರ್ ದೂರು ನೀಡಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ʼಅಕ್ಟೋಬರ್‌ 27ರಂದು ರಾತ್ರಿ ಪ್ರದೀಪ್ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಶ್ರಾವ್ಯಾ ಶೆಟ್ಟಿಯ ಸಹೋದರರಾದ ಪ್ರಸನ್ನ ಶೆಟ್ಟಿ, ಸುಧೀ‌ರ್ ಶೆಟ್ಟಿ, ಶೈಲೇಶ್ ಶೆಟ್ಟಿ, ಸನತ್, ಕೃಷ್ಣ, ಸುಜಯ್ ಮತ್ತಿತರರು ಬಲವಂತವಾಗಿ ತಮ್ಮ ಮನೆಗೆ ಕರೆದೊಯ್ದಿದ್ದಾರೆ. ಅಲ್ಲಿ ಪ್ರದೀಪ್‌ಗೆ ಬೆತ್ತ, ಮರದ ದೊಣ್ಣೆಗಳಿಂದ ಹೊಡೆದು ಗಾಯಗೊಳಿಸಲಾಗಿದೆ. ಅಕ್ಟೋಬರ್‌ 28ರಂದು ಚಿಕಿತ್ಸೆಗಾಗಿ ಪ್ರದೀಪ್‌ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿತ್ತು. ಮನನೊಂದು ಪ್ರದೀಪ್ ಅಕ್ಟೋಬರ್‌ 30ರಂದು ಜಿಲ್ಲಾಸ್ಪತ್ರೆಯ ಶೌಚಾಲಯದೊಳಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರುʼʼ ಎಂದು ದಿಲೀಪ್‌ ದೂರಿನಲ್ಲಿ ವಿವರಿಸಿದ್ದಾರೆ.

ಪ್ರದೀಪ್‌ ಅವರ ಗಾಯವನ್ನು ತೋರಿಸುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿತ್ತು. ಜತೆಗೆ ಈ ಪ್ರಕರಣ ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿತ್ತು. ಮದುವೆಯಾಗುವಂತೆ ನಿರಂತರ ಕಿರುಕುಳ ನೀಡುತ್ತಿರುವುದಾಗಿ ಈ ಹಿಂದೆ ಯುವತಿ ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸರು ಪ್ರದೀಪ್‌ ಅವರನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

ಅಂಗಡಿ ಮುಚ್ಚುವಂತೆ ಹಲ್ಲೆ ನಡೆಸಿದ ವಿಡಿಯೋ ಗಳು ವೈರಲ್: ಹಲ್ಲೆ, ಒತ್ತಾಯದ ಬಂದ್ ಗೆ ಜನಾಕ್ರೋಶ

ನಿಷ್ಪಕ್ಷಪಾತ ತನಿಖೆಗೆ ಮನವಿ

ಪ್ರದೀಪ್‌ ಪೂಜಾರಿ ಸಾವಿನ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಆಗ್ರಹಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್‌ ಎಂ. ಪೂಜಾರಿ ಅವರ ನೇತೃತ್ವದಲ್ಲಿ ಉಡುಪಿಯ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ವಿಶೇಷ ಸಭೆ ನಡೆಯಿತು. ಸಭೆಯ ಬಳಿಕ ನಿಯೋಗವು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.