Drowned: ಈಜಲು ಹೋದ ಬಾಲಕರು ಶವವಾಗಿ ಪತ್ತೆ
Drowned: ಈಜಲು ಹೋದ ಬಾಲಕರು ಶವವಾಗಿ ಪತ್ತೆ
ಹರೀಶ್ ಕೇರ
December 2, 2024
ಉಡುಪಿ: ಡ್ಯಾಮ್ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ (drowned to death) ಘಟನೆ ಉಡುಪಿ (udupi news) ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ನಡೆದಿದೆ.
ಶ್ರೀಶ(13), ಜಯಂತ್(19) ಮೃತ ದುರ್ದೈವಿಗಳು. ರಜೆ ಹಿನ್ನೆಲೆ ಗೆಳೆಯರ ಜೊತೆ ಈಜಲು ಹೋಗಿದ್ದಾಗ ಅವಘಡ ಸಂಭವಿಸಿದೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ನಾಪತ್ತೆಯಾಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆ
ಮೂರು ದಿನದಿಂದ ನಾಪತ್ತೆಯಾಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗದಗ ನಗರದ ಗಂಗಿಮಡಿ ಬಳಿಯ ಜಮೀನೊಂದರಲ್ಲಿ ನಡೆದಿದೆ. ಶಿವಾಜಿ ವಡ್ಡೇಪಲ್ಲಿ (14) ಮೃತ ಬಾಲಕ. ಮೂರು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದ.
ಪೋಷಕರು ಗದಗ ಗ್ರಾಮಾಂತರ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು. ಇಂದು ಕೃಷಿ ಹೊಂಡದಲ್ಲಿ ಶವವಾಗಿ ಬಾಲಕ ಪತ್ತೆಯಾಗಿದ್ದಾನೆ. ಈಜಲು ಹೋಗಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮಗನ ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡದಿತ್ತು.
ಇದನ್ನೂ ಓದಿ: Road accident: ಸೇತುವೆಯಿಂದ ಕೃಷ್ಣಾ ನದಿಗೆ ಬಿದ್ದ ಕಾರು, ಮೂವರು ಸಾವು