ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Udupi shootout case: ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡ, ಗ್ರಾಪಂ ಮಾಜಿ ಅಧ್ಯಕ್ಷನ ಕೊಲೆ!

Udupi News: ಉಡುಪಿ ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿರು ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಕಾಂಗ್ರೆಸ್‌ ಮುಖಂಡನ ನೇಲೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಉದ್ಯಮಿ, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಉಡುಪಿ: ಜಿಲ್ಲೆಯ (Udupi) ಮುದರಂಗಡಿಯಲ್ಲಿ ಹಾಡಹಗಲೇ ಗುಂಡಿನ ಸದ್ದು ಮೊಳಗಿದೆ. ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಉದ್ಯಮಿ ಪ್ರಿನ್ಸ್ ಪಾಯಿಂಟ್ ಡೇವಿಡ್ ಡಿಸೋಜಾ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದಾರೆ.

ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಅವರ ಕಚೇರಿಯ ಬಳಿ ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಒಂದು ಗುಂಡು ಹಣೆಗೆ ತಗುಲಿದ್ದರೆ, ಎರಡು ಗುಂಡುಗಳು ಕೈಗೆ ತಗುಲಿದೆ. ತೀವ್ರವಾಗಿ ಗಾಯಗೊಂಡಿದ್ದ ಡೇವಿಡ್ ಡಿಸೋಜ ಅವರು ಆಸ್ಪತ್ರೆಗೆ ಕರೆದೊಯ್ಯುವ ದಾರಿಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತದೇಹವನ್ನು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಂದು ಬಳಿಕ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಪಡುಬಿದ್ರೆ ಮತ್ತು ಶಿರ್ವ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಎಸ್ಪಿ ಹರಿರಾಂ ಶಂಕರ್ ಸಹಿತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಆರೋಪಿಗಳ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.

Bengaluru News: ಸಲಿಂಗ ಪ್ರೀತಿಗೆ ಮನೆಯವರ ವಿರೋಧ; ಮನನೊಂದು ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರು!

ಇತ್ತೀಚೆಗೆ ಕುಂದಾಪುರದ ಚರ್ಚ್ ರಸ್ತೆಯಲ್ಲಿ ಬಾರ್ಕೂರಿನ ಐವನ್ ರಿಚರ್ಡ್ ಮಸ್ಕರೇನಸ್ (45) ಎಂಬುವವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಪ್ರಕರಣದ ಆರೋಪಿ ಡೆರಿಕ್ ಕ್ರಾಸ್ತ (55) ಎಂಬಾತನನ್ನು ಕುಂದಾಪುರ ಪೊಲೀಸರು ಬಂಧಿಸಿ, ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಸ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರು. ಈ ಪ್ರಕರಣದ ಬೆನ್ನಲ್ಲೇ ಉಡುಪಿಯಲ್ಲಿ ಶೂಟೌಟ್‌ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.