Self Harming: ಮೈಕ್ರೋ ಫೈನಾನ್ಸ್ ಸಾಲಬಾಧೆ ತಾಳಲಾರದೆ ಕೂಲಿ ಕಾರ್ಮಿಕ ನೇಣಿಗೆ ಶರಣು
ಮೃತ ವ್ಯಕ್ತಿ ಕಳೆದ ಎರಡು ವರ್ಷಗಳಿಂದ ಮೈಕ್ರೋ ಫೈನಾನ್ಸ್ಗಳಲ್ಲಿ ಸುಮಾರು 13 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದನಂತೆ. ಸಾಲ ತೀರಿಸಲಾಗದೆ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದ್ದು ಮೃತರಿಗೆ ಒಂದೂವರೆ ವರ್ಷದ ಮಗಳಿದ್ದಾಳೆ ಎನ್ನಲಾಗಿದೆ
ಗುಡಿಬಂಡೆ : ಮೈಕ್ರೋ ಫೈನಾನ್ಸ್ ಹಾವಳಿಯಿಂದ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಗಿರೀಶ್ (26) ಎಂಬ ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ವಿವಿಧ ಸಂಸ್ಥೆಗಳಲ್ಲಿ ಸುಮಾರು 13 ಲಕ್ಷ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಮೃತ ಗಿರೀಶ್ ಕಳೆದ ೨ ವರ್ಷಗಳಿಂದ ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಮಾಡಿಕೊಂಡು ಸಾಲದ ಸುಳಿಯಲ್ಲಿ ಸಿಲುಕಿದ್ದ ಎನ್ನಲಾಗಿದೆ. ಫೆ.೨ ರ ರಾತ್ರಿ ಸುಮಾರು ೨ ಗಂಟೆ ಸಮಯದಲ್ಲಿ ನೇಣಿಗೆ ಶರಣಾಗಿದ್ದಾನೆ.
ಇದನ್ನೂ ಓದಿ: Chikkabalapur Crime: ಪೋಕ್ಸೋ ಕಾಯ್ದೆಯಡಿ 20 ವರ್ಷ ಕಠಿಣ ಶಿಕ್ಷೆ
ಮೃತ ವ್ಯಕ್ತಿ ಕಳೆದ ಎರಡು ವರ್ಷಗಳಿಂದ ಮೈಕ್ರೋ ಫೈನಾನ್ಸ್ಗಳಲ್ಲಿ ಸುಮಾರು ೧೩ ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದನಂತೆ. ಸಾಲ ತೀರಿಸಲಾಗದೆ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದ್ದು ಮೃತರಿಗೆ ಒಂದೂವರೆ ವರ್ಷದ ಮಗಳಿದ್ದಾಳೆ ಎನ್ನಲಾಗಿದೆ.
ಈ ಕುರಿತು ಗ್ರಾಮದ ಹಿರಿಯ ಮುಖಂಡ ಅಶ್ವತ್ಥಪ್ಪ ಮಾತನಾಡಿ ಮೃತ ಗಿರೀಶ್ ಮೈಕ್ರೋ ಫೈನಾ ನ್ಸ್ಗಳಲ್ಲಿ ಸಾಲ ಮಾಡಿಕೊಂಡಿದ್ದು ಸಾಲ ತೀರಿಸಲು ತುಂಬಾನೇ ಕಷ್ಟ ಪಡುತ್ತಿದ್ದ. ಹೆಂಡತಿ ಹೆಸರಿ ನಲ್ಲಿ ಮೊಬೈಲ್ ಖರೀದಿಗಾಗಿ ಸಾಲ, ತಾಯಿಯ ಹೆಸರಿನಲ್ಲಿ ಟ್ರಾಕ್ಟರ್ ಖರೀದಿ ಮಾಡಲು ಸಾಲ ಮಾಡಿದ್ದ. ಸಾಲ ಕಟ್ಟಲು ಆಗದೆ ಟ್ರಾಕ್ಟರ್ ಸಹ ಸೀಜ್ ಮಾಡಲಾಗಿರುತ್ತದೆ. ಈ ಎಲ್ಲ ಕಾರಣ ಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಊಹೆ ಮಾಡಲಾಗಿದೆ.
ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.