ಯಕ್ಷಧ್ರುವ ಪಟ್ಲ ಫೌಂಡೇಶನ್‌ಗೆ ಅಮೆರಿಕ ಉದ್ಯಮಿಯಿಂದ 1.25 ಕೋಟಿ ದೇಣಿಗೆ
ಪಾವಂಜೆ ಮೇಳದ ಶ್ರೀ ದೇವಿಮಹಾತ್ಮೆ ಯಕ್ಷಗಾನದ ಸಂದರ್ಭದಲ್ಲಿ ಅಮೆರಿಕ ಉದ್ಯಮಿ ಶ್ರೀ ಶಾರದಾಪ್ರಸಾದ್ ಹಾಗೂ ಶ್ರೀಮತಿ ನಳಿನಿ ಶಾರದಾ ಪ್ರಸಾದ್ ದಂಪತಿಗಳನ್ನು ಗೌರವಿಸಲಾಗಿದೆ. ಈ ವೇಳೆ ಅವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ಗೆ 1.25 ಕೋಟಿ ರೂ. ದೇಣಿಗೆಯನ್ನು ನೀಡಿದ್ದಾರೆ.
ಮಂಗಳೂರು: ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ಪರಮಭಕ್ತರು, ಪಟ್ಲ ಸತೀಶ್ ಶೆಟ್ಟಿ ಅವರ ಕಟ್ಟಾ ಅಭಿಮಾನಿಯಾದ ಶ್ರೀ ಶಾರದಾ ಪ್ರಸಾದ್ ಹಾಗೂ ಧರ್ಮಪತ್ನಿ ಶ್ರೀಮತಿ ನಳಿನಿ ಪ್ರಸಾದ್ ಅವರು, ಪಟ್ಲ ಸತೀಶ್ ಶೆಟ್ಟಿ ಅವರ ಗೃಹ ಪ್ರವೇಶಕ್ಕೆ ಆಗಮಿಸಿ, ಅವರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿದ್ದು, ಇದೇ ವೇಳೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ಗೆ (Yakshadhruva Patla Foundation Trust) 1.25 ಕೋಟಿ ರೂ. ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.
ಸಂಜೆ ನಡೆದ ಪಾವಂಜೆ ಮೇಳದ ಶ್ರೀ ದೇವಿಮಹಾತ್ಮೆ ಯಕ್ಷಗಾನದ ಸಂದರ್ಭದಲ್ಲಿ ಶ್ರೀ ಶಾರದಾಪ್ರಸಾದ್ ಹಾಗೂ ಶ್ರೀಮತಿ ನಳಿನಿ ಶಾರದಾ ಪ್ರಸಾದ್ ದಂಪತಿಗಳನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ಆಡಳಿತ ಮೊಕ್ತೇಸರರು ಶಶೀಂದ್ರ ಕುಮಾರ್, ಪಟ್ಲ ಫೌಂಡೇಶನ್ ಪದಾಧಿಕಾರಿಗಳಾದ ಪಟ್ಲ ಗುತ್ತು ಮಹಾಬಲ ಶೆಟ್ಟಿ, CA ಸುದೇಶ್ ಕುಮಾರ್ ರೈ, CA ದಿವಾಕರ್ ರಾವ್, ಡಾ. ಸತೀಶ್ ಭಂಡಾರಿ, ಪ್ರದೀಪ್ ಆಳ್ವ ಕದ್ರಿ, ಲಕ್ಷ್ಮೀಶ್ ಭಂಡಾರಿ (ಭಂಡಾರಿ ಬಿಲ್ಡರ್ಸ್ ) ಉಪಸ್ಥಿತರಿದ್ದರು.
ಈ ಸುದ್ದಿಯನ್ನೂ ಓದಿ | Ganesh Bhatta Column: ರಥಸಪ್ತಮಿ: ಸೂರ್ಯನ ಮಹತ್ವವನ್ನು ಸಾರುವ ಪರ್ವ