ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮುಂಡಗೋಡದಲ್ಲಿ ಹೀನ ಕೃತ್ಯ; ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65 ವರ್ಷದ ವೃದ್ಧ

Mundagodu News: ಬಾಲಕಿಯನ್ನು ಪುಸಲಾಯಿಸಿ ಚಾಕು ತೋರಿಸಿ ಆರೋಪಿ ಲೈಗಿಂಕ ದೌರ್ಜನ್ಯ ಎಸಗಿದ್ದಾನೆ. ಮನೆಯವರಿಗೆ ಹೇಳಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65 ವರ್ಷದ ವೃದ್ಧ

-

Prabhakara R
Prabhakara R Nov 7, 2026 11:33 PM

ಕಾರವಾರ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮುಂಡಗೋಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಲೂಕಿನ ಇಸ್ಮಾಯಿಲ್ ಹುಲಗೂರ (65) ಬಂಧಿತ ಆರೋಪಿ. ಆರನೇ ತರಗತಿಯ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದು, ಆಕೆ ಪರಿಶಿಷ್ಟ ಪಂಗಡಕ್ಕೆ ಸೇರಿದವಳಾಗಿದ್ದಾಳೆ. ಬಾಲಕಿಯನ್ನು ಪುಸಲಾಯಿಸಿ ಚಾಕು ತೋರಿಸಿ ಲೈಗಿಂಕ ದೌರ್ಜನ್ಯ ಎಸಗಿದ್ದಾನೆ. ಮನೆಯವರಿಗೆ ಹೇಳಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಂತ್ರಸ್ತೆ ಈಗ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು, ಇನ್ನೊಂದು ವಾರದಲ್ಲಿ ಹೆರಿಗೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗಳು ಗರ್ಭಿಣಿಯಾಗಿರುವ ಸಂಗತಿ ಮನೆಯವರಿಗೆ ತಿಳಿದೇ ಇರಲಿಲ್ಲ. ಬಾಲಕಿ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ವಿಷಯ ಬಹಿರಂಗವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Bengaluru mass murder: ಬೆಂಗಳೂರು ಹತ್ಯಾಕಾಂಡ ಪ್ರಕರಣ; ತಮಿಳುನಾಡಿನ ಸೇಲಂ ಕಾಡಿನಲ್ಲಿ ಇಬ್ಬರ ಶವ ಪತ್ತೆ!

ಘಟನೆ ಬೆಳಕಿಗೆ ಬರುತ್ತಿದ್ದಂತೆ ದಲಿತ ಹಾಗೂ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇಂತಹ ಹೀನಕೃತ್ಯ ಎಸಗಿದ ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿವೆ.