ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Yellapur News: ಯಲ್ಲಾಪುರದಲ್ಲಿ ಆಲದ ಮರ ಬಿದ್ದು 5 ತಿಂಗಳ ಗರ್ಭಿಣಿ ಸಾವು, ನಾಲ್ವರು ಮಕ್ಕಳಿಗೆ ಗಾಯ

Yellapur News: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಡೊಮಗೇರಿ-ಕಿರವತ್ತಿಯಲ್ಲಿ ಘಟನೆ ನಡೆದಿದೆ. ಅಂಗನವಾಡಿಯಲ್ಲಿದ್ದ ಕೆಲಸವನ್ನು ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ರಸ್ತೆಯ ಬದಿಯಲ್ಲಿದ್ದ ಹಳೆಯ ಆಲದ ಮರ ಬಿದ್ದು ಗರ್ಭಿಣಿ ಮೃತಪಟ್ಟಿದ್ದಾರೆ. ಅವರೊಂದಿಗೆ ಇದ್ದ 4 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಯಲ್ಲಾಪುರದಲ್ಲಿ ಆಲದ ಮರ ಬಿದ್ದು 5 ತಿಂಗಳ ಗರ್ಭಿಣಿ ಸಾವು

-

Prabhakara R Prabhakara R Sep 8, 2025 10:32 PM

ಯಲ್ಲಾಪುರ: ಅಂಗನವಾಡಿಯಿಂದ ಮನೆಗೆ ಮರಳುತ್ತಿದ್ದಾಗ ಏಕಾಏಕಿ ಆಲದ ಮರ ಬಿದ್ದ ಪರಿಣಾಮ 5 ತಿಂಗಳ ಗರ್ಭಿಣಿ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ (Yellapur News) ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಡೊಮಗೇರಿ-ಕಿರವತ್ತಿಯಲ್ಲಿ ನಡೆದಿದೆ.

ಡೊಮಗೇರಿ-ಕಿರವತ್ತಿ ಗ್ರಾಮದ 28 ವರ್ಷದ ಸಾವಿತ್ರಿ ಬಾಬು ಖರಾತ್ ಎಂಬ ಗರ್ಭಿಣಿ ಅಂಗನವಾಡಿಯಲ್ಲಿದ್ದ ಕೆಲಸವನ್ನು ಮುಗಿಸಿಕೊಂಡು ಮನೆಗೆ ಮರಳುತ್ತಿದ್ದರು. ಈ ವೇಳೆ ರಸ್ತೆಯ ಬದಿಯಲ್ಲಿದ್ದ ಹಳೆಯ ಆಲದ ಮರ ಇದ್ದಕ್ಕಿದ್ದಂತೆ ಅವರ ಮೇಲೆ ಕುಸಿದು ಬಿದ್ದಿದೆ. ಇದರಿಂದ ಗರ್ಭಿಣಿ ಸ್ಥಳದಲ್ಲೇ ಮೃತಪಟ್ಟಿದ್ದು, ಅವರೊಂದಿಗೆ ಇದ್ದ 4 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದ ಮೂವರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಂಭೀರ ಗಾಯಗೊಂಡವರಲ್ಲಿ ಸ್ವಾತಿ ಬಾಬು ಖರಾತ್ (17), ಘಾಟು ಲಕ್ಕು ಕೊಕರೆ (5), ಶ್ರಾವಣಿ ಬಾಬು ಖರಾತ್ (2), ಮತ್ತು ಶಾಂಭವಿ ಬಾಬು ಖರಾತ್ (4) ಸೇರಿದ್ದಾರೆ. ಗಾಯಾಳುಗಳನ್ನು ಕೂಡಲೇ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆಯ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

K.C.Veerendra Puppy: ಅಕ್ರಮ ಬೆಟ್ಟಿಂಗ್ ಪ್ರಕರಣ: ಶಾಸಕ ವೀರೇಂದ್ರ ಪಪ್ಪಿಗೆ 14 ದಿನ ನ್ಯಾಯಾಂಗ ಬಂಧನ

ಸ್ಥಳಕ್ಕೆ ಪಿಐ ರಮೇಶ್ ಹಾನಾಪುರ ಅವರ ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.