LPG cylinder Blast: ಶಿರಸಿಯಲ್ಲಿ ಘೋರ ಅವಘಡ; ಸಿಲಿಂಡರ್ ಸ್ಫೋಟಗೊಂಡು ಯುವತಿ ಸಾವು
Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮರ್ಕಿಕೊಡ್ಲು ಗ್ರಾಮದಲ್ಲಿ ಅವಘಡ ನಡೆದಿದೆ. ಮನೆಯಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಶಿರಸಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

-

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತ (LPG cylinder Blast) ಸಂಭವಿಸಿದೆ. ಮನೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಯುವತಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮರ್ಕಿಕೊಡ್ಲು ಗ್ರಾಮದಲ್ಲಿ ನಡೆದಿದೆ.
ರಂಜಿತಾ ನಾಗಪ್ಪ ದೇವಾಡಿಗ (21) ಮೃತ ಯುವತಿ. ಮನೆಯಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ. ಅನಾರೋಗ್ಯದಿಂದ ಮನೆಯಲ್ಲೇ ಉಳಿದಿದ್ದ ರಂಜಿತಾ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಶಿರಸಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಇಟ್ಟ ಹಿಂದೂ ಕಾರ್ಯಕರ್ತರು
ಬೆಳಗಾವಿ: ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಹಿಂದೂ ಕಾರ್ಯಕರ್ತರು ಬೆಂಕಿ ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಬಳಿ ನಡೆದಿದೆ. ಗೋಮಾಂಸ ತುಂಬಿದ್ದ 4 ಲಾರಿಗಳು, ಕುಡಚಿ ಪಟ್ಟಣದಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದವು. 4 ವಾಹನಗಳನ್ನು ತಡೆದು ಪರಿಶೀಲಿಸಿದಾಗ ಗೋಮಾಂಸ ಸಾಗಾಟ (Illegal Beef Transport) ಬಯಲಾಗಿದೆ. ಇದರಿಂದ ರೊಚ್ಚಿಗೆದ್ದ ಹಿಂದೂ ಕಾರ್ಯಕರ್ತರು, ಗೋಮಾಂಸ ಸಮೇತ ಲಾರಿಗೆ ಬೆಂಕಿ ಇಟ್ಟು ಆಕ್ರೋಶ ಹೊರಹಾಕಿದ್ದಾರೆ.
ನಾಲ್ಕು ಲಾರಿಗಳಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಹೀಗಾಗಿ ಪರಿಶೀಲಿಸಿದಾಗ KA71 2045 ನೋಂದಣಿ ಸಂಖ್ಯೆಯ ಲಾರಿಯಲ್ಲಿ 5 ಟನ್ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಭಾರಿ ಪ್ರಮಾಣದ ಗೋಮಾಂಸ ಕಂಡು ರೊಚ್ಚಿಗೆದ್ದ ಕಾರ್ಯಕರ್ತರು, ಲಾರಿಗೆ ಬೆಂಕಿ ಇಟ್ಟಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಸುದ್ದಿಯನ್ನೂ ಓದಿ | Bengaluru Woman Murder: ಅಕ್ರಮ ಸಂಬಂಧ ಶಂಕೆ; ಮಗಳೆದುರೇ ಪತ್ನಿಗೆ 11 ಬಾರಿ ಚಾಕುವಿನಿಂದ ಇರಿದು ಕೊಂದ 2ನೇ ಗಂಡ!
ಸ್ಥಳಕ್ಕೆ ಅಥಣಿ ಡಿವೈಎಸ್‌ಪಿ, ಕಾಗವಾಡ ಪೊಲೀಸರು ಭೇಟಿ ನೀಡಿ, ಲಾರಿಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಲಾರಿಯ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ.
ಇನ್ನು ಈ ಘಟನೆಗೆ ಸಂಬಂಧಿಸಿ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಅಡಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲ್ಲದೆ ಮಾಂಸವನ್ನು ಅಕ್ರಮವಾಗಿ ಸಾಗಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.