Karwar News: ಪ್ರೀತಿಸುವಂತೆ ಜೆಡಿಎಸ್ ನಾಯಕಿಯ ಪುತ್ರನ ಕಿರುಕುಳ; ಯುವತಿ ಆತ್ಮಹತ್ಯೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳದಿಂದಲೇ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಯುವತಿ ರಿಶೆಲ್ ಮತ್ತು ಕಿರುಕುಳ ಕೊಟ್ಟ ಆರೋಪಿ ಚಿರಾಗ್. -
ಕಾರವಾರ, ಜ.10: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ಉತ್ತರ ಕನ್ನಡ ಜಿಲ್ಲೆಯ ಕಾರವಾರ (Karwar News) ತಾಲೂಕಿನ ಕದ್ರಾ ಗ್ರಾಮದಲ್ಲಿ ನಡೆದಿದೆ. ರಿಶೆಲ್ ಡಿಸೋಜಾ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಚೈತ್ರಾ ಕೋಠಾರಕರ ಪುತ್ರ ಚಿರಾಗ್ ಪ್ರೀತಿಸುವಂತೆ ಯುವತಿಗೆ ಪೀಡಿಸುತ್ತಿದ್ದ. ಇದರಿಂದಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೈತ್ರಾ ಕೋಠಾರಕರ ಪುತ್ರ ಚಿರಾಗ್, ಕದ್ರಾ ಗ್ರಾಮದ ಕೆಪಿಸಿಎಲ್ ಕಾಲೋನಿ ನಿವಾಸಿ ರಿಶೆಲ್ ಡಿಸೋಜಾಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಕಳೆದ ಕೆಲ ದಿನಗಳಿಂದ ಯುವತಿ ಮನೆ ಬಳಿ ಬಂದು ಹೋಗುತ್ತಿದ್ದ. ಪ್ರೀತಿ ಮಾಡಲು ಯುವತಿ ನಿರಾಕರಿಸಿದ್ದಕ್ಕೆ ಬೇಗ ಸತ್ತು ಹೋಗು ಎಂದು ಚಿರಾಗ್ ಹೇಳಿದ್ದ. ಇದರಿಂದ ನೊಂದ ರಿಶಾಲ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ರಿಶಾಲ್ ತಂದೆ ಕ್ರಿಸ್ತೋದ್ ಫ್ರಾನ್ಸಿಸ್ ದೂರಿನ ಮೇರೆಗೆ ಚಿರಾಗ್ ವಿರುದ್ಧ ಕದ್ರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ ಡೆಲಿವರಿ ಬಾಯ್ ಬಂಧನ
ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದವನನ್ನು ಬೆಂಗಳೂರಿನ (Bengaluru news) ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಆರೋಪಿ ಮುನಿರುದ್ದೀನ್ ಖಾನ್ ಬಂಧಿತ ಆರೋಪಿ. ಈತ ನಗರದ ಕೊತ್ತನೂರಿನಲ್ಲಿ ಡೆಲಿವರಿ ಬಾಯ್ (Delivery Boy) ಆಗಿ ಕೆಲಸ ಮಾಡಿಕೊಂಡಿದ್ದ ಎಂದು ಗೊತ್ತಾಗಿದೆ.
ಮನೆಯ ಮುಂದೆ ಬಿದ್ದಿದ್ದ ಬಾಕ್ಸ್‌ನ್ನು ಯುವತಿ ತೆಗೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಯುವಕ ರಸ್ತೆಯಲ್ಲಿ ಬಟ್ಟೆಬಿಚ್ಚಿ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ. ಇದಕ್ಕೆ ಪ್ರತಿರೋಧಿಸಿದ್ದಕ್ಕೆ ಯುವತಿಯ ಕೆನ್ನೆಗೆ ಹೊಡೆದಿದ್ದಾನೆ. ಬಳಿ ಯುವತಿ ಕಿರುಚಾಡಿದಾಗ ಕಾಮುಕ ಮುನಿರುದ್ದೀನ್ ಖಾನ್ ಅಲ್ಲಿಂದ ಪರಾರಿಯಾಗಿದ್ದ.
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಅನುಚಿತವಾಗಿ ಸ್ಪರ್ಶಿಸಿದ ಯುವಕ; ಆಘಾತಕಾರಿ ವಿಡಿಯೊ ವೈರಲ್
ಘಟನೆ ಬಳಿಕ ಯುವತಿ ಕೊತ್ತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಮುನಿರುದ್ದೀನ್ ಖಾನ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.