ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಆಹಾರದ ಜಾಗೃತಿಗಾಗಿ 'ಅನ್ನಬ್ರಹ್ಮ ಚಾತುರ್ಮಾಸ್ಯ': ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ

Sri Raghaveshwara Bharathi Swamiji: ಚಾತುರ್ಮಾಸ್ಯ ವ್ರತ ಗುರುಗಳಿಗಾದರೆ, ಶಿಷ್ಯಭಕ್ತರಿಗೆ ಇದು ಹಬ್ಬ. ಈ ಹಿನ್ನೆಲೆಯಲ್ಲಿ ಜ್ಞಾನೋದ್ದೀಪನದ ಜತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿಗೆ ಈ ಚಾತುರ್ಮಾಸ್ಯವನ್ನು ಬಳಸಿಕೊಳ್ಳಲಾಗುತ್ತಿದೆ. ಅನ್ನವನ್ನು ವ್ಯರ್ಥ ಮಾಡಬಾರದು. ಇಂದು ಶ್ರೀಮಂತಿಕೆ ಹೆಚ್ಚಾದಷ್ಟು ಅನ್ನವನ್ನು ವ್ಯರ್ಥಮಾಡುವ ದುರಾಚಾರ ಹೆಚ್ಚಾಗುತ್ತಿದೆ. ಇವೆಲ್ಲವುಗಳ ಹಿನ್ನೆಲೆಯಲ್ಲಿ ಆಹಾರದ ಕುರಿತಾದ ಜನಜಾಗೃತಿ ಮೂಡಿಸುವ ಕಾರ್ಯ ಇಲ್ಲಿ ನಡೆಯಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಲೋಕಾರ್ಪಣೆಗೊಳಿಸಿದರು.

ಗೋಕರ್ಣ, ಜೂ.18: ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ (Sri Raghaveshwara Bharathi Swamiji) ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ಬುಧವಾರ 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ ಗುರುಗಳಿಗಾದರೆ, ಶಿಷ್ಯಭಕ್ತರಿಗೆ ಇದು ಹಬ್ಬ. ಈ ಹಿನ್ನೆಲೆಯಲ್ಲಿ ಜ್ಞಾನೋದ್ದೀಪನದ ಜತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿಗೆ ಈ ಚಾತುರ್ಮಾಸ್ಯವನ್ನು ಬಳಸಿಕೊಳ್ಳಲಾಗುತ್ತಿದೆ. ಅನ್ನವನ್ನು ವ್ಯರ್ಥ ಮಾಡಬಾರದು. ಇಂದು ಶ್ರೀಮಂತಿಕೆ ಹೆಚ್ಚಾದಷ್ಟು ಅನ್ನವನ್ನು ವ್ಯರ್ಥಮಾಡುವ ದುರಾಚಾರ ಹೆಚ್ಚಾಗುತ್ತಿದೆ. ಇವೆಲ್ಲವುಗಳ ಹಿನ್ನೆಲೆಯಲ್ಲಿ ಆಹಾರದ ಕುರಿತಾದ ಜನಜಾಗೃತಿ ಮೂಡಿಸುವ ಕಾರ್ಯ ಇಲ್ಲಿ ನಡೆಯಲಿದೆ ಎಂದರು.

ಪ್ರಾಣಿ - ಮನುಷ್ಯ: ಪ್ರಾಣಿ ಪಕ್ಷಿಗಳು ಹೆಚ್ಚಿನ ಸಮಯವನ್ನು ಆಹಾರ ಹೊಡುಕಿಕೊಂಡೇ ಜೀವನ ನಡೆಸುವುದನ್ನು ನೋಡುತ್ತೇವೆ. ಆದರೆ ಅವು ಸರಿಯಾದ ಆಹಾರವನ್ನು ಮಾತ್ರ ಸ್ವೀಕರಿಸುವುದನ್ನು ಕಾಣುತ್ತೇವೆ. ಆದರೆ ಮನುಷ್ಯ ಹಾಗಲ್ಲ. ಯೋಗ್ಯವಲ್ಲದ ಅಹಾರವನ್ನು ಹೇಗೆ ಹೇಗೋ ಸ್ವೀಕರಿಸುತ್ತಿರುವ ಪ್ರವೃತ್ತಿಯನ್ನು ನೋಡುತ್ತಿದ್ದೇವೆ. ಆಹಾರ ಜೀವನದ ಬಹುಮುಖ್ಯ ಅಂಗವಾಗಿದ್ದು, ಇಂದು ಆಹಾರದ ಹಿನ್ನೆಲೆ, ಆಹಾರದ ತಯಾರಿ, ಸೇವನೆಗೆ ಸಮರ್ಪಕ ಪ್ರಾಮುಖ್ಯತೆ ನೀಡದೇ ಇರುವುದು ವಿಷಾದಕರ ಎಂದರು.

ಈ ಸಂದರ್ಭದಲ್ಲಿ ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು, ಡಿ.ಡಿ ಶರ್ಮಾ, ಪ್ರದೀಪ್ ನಾಯಕ್, ಮಹೇಶ್ ಶೆಟ್ಟಿ, ಆರ್.ಎಸ್. ಹೆಗಡೆ ಹರಗಿ, ಮಂಜುನಾಥ ಸುವರ್ಣಗದ್ದೆ, ಪ್ರವೀಣ್ ಭೀಮನಕೋಣೆ, ಚಾತುರ್ಮಾಸ್ಯದ ಪ್ರಧಾನ ಸಂಯೋಜಕ ಚಂದನ್ ಶಾಸ್ತ್ರಿ ಸೇರಿದಂತೆ ಚಾತುರ್ಮಾಸ್ಯದ ಸಂಯೋಜಕರು ಹಾಗೂ ಎಲ್ಲಾ ಭಾಗಗಳ ಪ್ರಮುಖರು ಉಪಸ್ಥಿತರಿದ್ದರು.

ಅನ್ನಬ್ರಹ್ಮ ಚಾತುರ್ಮಾಸ್ಯ

ಗೋಕರ್ಣದ ಅಶೋಕೆಯ ಪರಿಸರದಲ್ಲಿ ಈ ವರ್ಷದ ಚಾತುರ್ಮಾಸ್ಯ ನಡೆಯುತ್ತಿದ್ದು, ಜುಲೈ 29ರಿಂದ ಸೆಪ್ಟೆಂಬರ್‌ 26 ರವರೆಗೆ ಆಹಾರದ ಕುರಿತಾದ ಜಾಗೃತಿಯ 'ಅನ್ನಬ್ರಹ್ಮ ಚಾತುರ್ಮಾಸ್ಯ' ನಡೆಯಲಿದೆ. ಚಾತುರ್ಮಾಸ್ಯ ವ್ರತ ಗುರುಗಳಿಗಾದರೆ, ಶಿಷ್ಯಭಕ್ತರಿಗೆ ಇದು ಹಬ್ಬ ಎಂಬ ಪರಿಕಲ್ಪನೆಯಲ್ಲಿ ಪ್ರತಿವರ್ಷದ ಚಾತುರ್ಮಾಸ್ಯವನ್ನು ಸಮೂಹದ ಒಳಿತಿಗೆ ಪೂರಕವಾಗಿ ಯೋಜಿಸುತ್ತಾ ಬಂದಿದ್ದು, ಪ್ರತಿವರ್ಷ ಒಂದೊಂದು ವಿಷಯಾಧಾರಿತವಾಗಿ ಚಾತುರ್ಮಾಸ್ಯದಲ್ಲಿ ಸಮಾಜ ಜಾಗೃತಿಯನ್ನು ಮೂಡಿಸುತ್ತಿರುವುದು ಶ್ರೀರಾಮಚಂದ್ರಾಪುರ ಮಠದ ವಿಶೇಷತೆಯಾಗಿದೆ.

Astro Tips: ಪೂಜೆಯಲ್ಲಿ ತೆಂಗಿನಕಾಯಿ ಅರ್ಪಿಸುವುದಕ್ಕೂ ಇದೆ ನಿಯಮ; ಯಾವ ದೇವರಿಗೆ ಹೇಗೆ ಸಮರ್ಪಿಸಬೇಕು?; ಇಲ್ಲಿದೆ ಮಾಹಿತಿ

ಈ ಚಾತುರ್ಮಾಸ್ಯದ ಸಮಯದಲ್ಲಿ ಆಹಾರದ ಕುರಿತಾಗಿ ಜಾಗೃತಿ ಮೂಡಿಸುವ ಅನೇಕ ಕಾರ್ಯಕ್ರಮಗಳು ಇರಲಿದ್ದು, ಭೋಜನವೆಂಬ ತಪಸ್ಸು, ಆಹಾರ ಯಾವಾಗ ಸ್ವೀಕರಿಸಿದರೆ ಹಿತ? ಜಲಪಾನದ ನಿಯಮಗಳು, ಆಹಾರದ ಉದ್ದೇಶ, ಉಪವಾಸ, ಭೋಜನದ ಬಳಿಕ ಪಾಲಿಸಬೇಕಾದ ನಿಯಮಗಳು, ಭೋಜನ ಪಾತ್ರೆಗಳು ಸೇರಿದಂತೆ ಅನೇಕ ವಿಶಿಷ್ಟ ಪ್ರವಚನ ಮಾಲಿಕೆಗಳನ್ನು ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಅನುಗ್ರಹಿಸಲಿದ್ದಾರೆ. ಜ್ಞಾನೋದ್ದೀಪನದ ಜತೆಗೆ ಪ್ರಾಚೀನ ವಿಧಾನದ ಆಹಾರವೂ ಈ ಚಾತುರ್ಮಾಸ್ಯದಲ್ಲಿ ಇರಲಿವೆ.