ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sirsi News: ಕಾಂಗ್ರೆಸ್ ವಿರೋಧಿ ಜನಾಕ್ರೋಶ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಚಾಲನೆ

ಸಿಎಂಗೆ ಈ ಸಮುದಾಯಕ್ಕೆ ನ್ಯಾಯ ಕೊಡಬೇಕು ಎನ್ನುವ ಪ್ರಾಮಾಣಿಕ ಕಳಕಳಜಿ ಇಲ್ಲ. ವಿಷಯ ಡೈವರ್ಟ್ ಮಾಡಲು ಜಾತಿ ಗಣತಿ ಬಳಕೆ ಮಾಡಿಕೊಂಡಿದ್ದಾರೆ ಎಂದ ಅವರು, ರಾಜ್ಯ ಸರ್ಕಾರದ ವಿರುದ್ದ ಕಿಡಿ ಕಾರಿದ ವಿಜಯೇಂದ್ರ ಇದು ಬೆಲೆ ಏರಿಕೆ ಸರ್ಕಾರ, ಹಿಂದೂಗಳನ್ನ ಅವಮಾನ ಮಾಡಿರುವ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಈ ಸರ್ಕಾರ ಅನ್ಯಾಯ ಮಾಡಿದೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಗ್ರಾಮ ದೇವಿ ದೇವಸ್ಥಾನದಿಂದ ಕಾಂಗ್ರೆಸ್ ವಿರೋಧಿ ಜನಾಕ್ರೋಶ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ‌ ಕುರ್ಚಿ ಯಾವಾಗ ಅಲ್ಲಾಡುತ್ತದೆ ಯೋ ಆಗ ಜಾತಿ ಜನಗಣತಿ ಸಿಎಂಗೆ ನೆನಪಾಗುತ್ತದೆ ಯಾವಾಗ ಜನರು ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕುತ್ತಾರೋ ಆಗ ನೆನಪಾಗುತ್ತದೆ. ಜಾತಿ ಗಣತಿ ಬೆದರು ಬೊಂಬೆ ತರ ಸಿದ್ದರಾ ಮಯ್ಯ ಸರ್ಕಾರ ಬಳಕೆ ಮಾಡಿಕೊಳ್ಳುತ್ತಿದೆ. ಸಿಎಂಗೆ ಈ ಸಮುದಾಯಕ್ಕೆ ನ್ಯಾಯ ಕೊಡಬೇಕು ಎನ್ನುವ ಪ್ರಾಮಾಣಿಕ ಕಳಕಳಜಿ ಇಲ್ಲ. ವಿಷಯ ಡೈವರ್ಟ್ ಮಾಡಲು ಜಾತಿ ಗಣತಿ ಬಳಕೆ ಮಾಡಿಕೊಂಡಿದ್ದಾರೆ ಎಂದ ಅವರು, ರಾಜ್ಯ ಸರ್ಕಾರದ ವಿರುದ್ದ ಕಿಡಿ ಕಾರಿದ ವಿಜಯೇಂದ್ರ ಇದು ಬೆಲೆ ಏರಿಕೆ ಸರ್ಕಾರ, ಹಿಂದೂಗಳನ್ನ ಅವಮಾನ ಮಾಡಿರುವ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಈ ಸರ್ಕಾರ ಅನ್ಯಾಯ ಮಾಡಿದೆ.

ಅದಕ್ಕಾಗಿ ಜನಾಕ್ರೋಶ ಯಾತ್ರೆ ಮಾಡಲಾಗುತ್ತಿದೆ. ನಮ್ಮ‌ ಹೋರಾಟದ ಎಫೆಕ್ಟ್ ಕಾಂಗ್ರೆಸ್ ಗೆ ತಟ್ಟಿದೆ. ಅದಕ್ಕಾಗಿ ಕೇಂದ್ರದ ವಿರುದ್ದ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ತಕ್ಕ ಉತ್ತರ ನಾವು ಕೊಡುತ್ತೇವೆ. ಕಮಿಷನ್ ಆರೋಪ ಬಿಜೆಪಿ ಸರ್ಕಾರದ ವಿರುದ್ದ ಮಾಡಿದ್ದರು.

ಇದನ್ನೂ ಓದಿ: Sirsi News: ಕೈಗಾ ಅಣುವಿದ್ಯುತ್ ಸ್ಥಾವರದ ಘಟಕ 1 ಅಣು ವಿದ್ಯುತ್ ಸ್ಥಾವರಕ್ಕೆ ಶೀತಕ ಕೊಳವೆ ಮರು ಅಳವಡಿಸುವ ಕಾರಣದಿಂದ ಸ್ಥಗಿತ

ಅದು ರಾಜಕೀಯ ಪ್ರೇರಿತ ಆರೋಪ ಮಾತ್ರ ಆಗಿತ್ತು. ಕರ್ನಾಟಕ‌ ಈಗಿನ ಸರ್ಕಾರ ದೇಶದಲ್ಲಿ‌ ಭ್ರಷ್ಟಾಚಾರದಲ್ಲಿ‌ ನಂಬರ್ ಒನ್‌ ಆಗಿದೆ. ಇದನ್ನ ಸಿಎಂ‌ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಹೇಳಿದ್ದಾರೆ. ಗುತ್ತಿಗೆದಾರರು ಸರ್ಕಾರದ ಕಮಿಷನ್ ದಂದೆ ವಿರುದ್ದ ಧ್ವನಿ ಎತ್ತಿದ್ದಾರೆ.

ಪೊಲೀಸ್ ಇಲಾಖೆಗೆ ಈ ವರೆಗೆ 1 ನೇ ತಾರೀಕೆ ಸಂಬಳ ಆಗುತ್ತಿತ್ತು. ಈಗ 8 ನೇ ತಾರೀಕು ಆದರು ಸಂಭಳ ಹಾಕಲು ಆಗುತ್ತಿಲ್ಲ. ರಾಜ್ಯ ಆರ್ಥಿಕ ಪರಿಸ್ಥಿತಿ ಕುಸಿದಿದೆ. ಅದಕ್ಕಾಗಿ ಬೆಲೆ‌ ಏರಿಕೆ ಮಾಡಲು ಸರ್ಕಾರ ಮುಂದಾಗಿದೆ.

ಸ್ಥಳಿಯ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಗೈರಾಗಿದ್ದರು. ಜಿಲ್ಲೆಯ ಶಾಸಕರು ಮಾಜಿ ಶಾಸಕರು, ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾದರು.