ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Car Fire Accident: ಗುರುತು ಸಿಗದಂತೆ ಸುಟ್ಟು ಕರಕಲಾದ ಕಾರು, ಇಬ್ಬರ ಶವ ಪತ್ತೆ

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರು ಮರಕ್ಕೆ ಡಿಕ್ಕಿ ಹೊಡೆದು ಪಕ್ಕದ ಕಂದಕಕ್ಕೆ ಬಿದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬೆಂಕಿಯ ತೀವ್ರತೆಗೆ ಕಾರಿನ ನಂಬರ್ ಪ್ಲೇಟ್ ಕೂಡ ಸಂಪೂರ್ಣವಾಗಿ ಸುಟ್ಟು ಕಾಣೆಯಾಗಿದ್ದು, ವಾಹನದ ನೋಂದಣಿ ವಿವರ ಪತ್ತೆ ಕಷ್ಟವಾಗಿದೆ.

ಗುರುತು ಸಿಗದಂತೆ ಸುಟ್ಟು ಕರಕಲಾದ ಕಾರು, ಇಬ್ಬರ ಶವ ಪತ್ತೆ

ಗೇರುಸೊಪ್ಪ–ಸುಳೆಮುರ್ಕಿ ಬಳಿ ಸುಟ್ಟುಹೋದ ಕಾರು -

ಹರೀಶ್‌ ಕೇರ
ಹರೀಶ್‌ ಕೇರ Jan 7, 2026 11:43 AM

ಶಿರಸಿ, ಜ.07: ಉತ್ತರ ಕನ್ನಡದ (Uttara Kannada) ಹೊನ್ನಾವರ ತಾಲೂಕಿನ ಗೇರುಸೊಪ್ಪ–ಸುಳೆಮುರ್ಕಿ ಕ್ರಾಸ್ ಸಮೀಪ ತಡರಾತ್ರಿ ಭೀಕರ ದುರ್ಘಟನೆ ನಡೆದಿದೆ. ಡಿಕ್ಕಿಯ (Accident) ಬಳಿಕ ಕಾರೊಂದು ಬೆಂಕಿಗೆ (Car fire accident) ಆಹುತಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡಿದ್ದಾರೆ. ಘಟನೆಯಲ್ಲಿ ಕಾರು ಹಾಗೂ ಅದರೊಳಗಿನ ಇಬ್ಬರ ದೇಹಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಸಾಧ್ಯವಾಗದ ಸ್ಥಿತಿಯಲ್ಲಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರು ಮರಕ್ಕೆ ಡಿಕ್ಕಿ ಹೊಡೆದು ಪಕ್ಕದ ಕಂದಕಕ್ಕೆ ಬಿದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬೆಂಕಿಯ ತೀವ್ರತೆಗೆ ಕಾರಿನ ನಂಬರ್ ಪ್ಲೇಟ್ ಕೂಡ ಸಂಪೂರ್ಣವಾಗಿ ಸುಟ್ಟು ಕಾಣೆಯಾಗಿದ್ದು, ವಾಹನದ ನೋಂದಣಿ ವಿವರ ಪತ್ತೆ ಕಷ್ಟವಾಗಿದೆ.

ಮಾಹಿತಿ ದೊರಕುತ್ತಿದ್ದಂತೆ ಸ್ಥಳಕ್ಕೆ ಹೊನ್ನಾವರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕಾರು ಹಾಗೂ ಮೃತಪಟ್ಟವರ ಗುರುತು ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ. ಘಟನೆಯ ನಿಖರ ಕಾರಣ ಹಾಗೂ ಹಿನ್ನೆಲೆ ತನಿಖೆಯ ಬಳಿಕವೇ ತಿಳಿಯಲಿದೆ.

ಆಟೋ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು

ಹಾಸನ: ಹಾಸನ ನಗರದ ಸಾಲಗಾಮೆ ರಸ್ತೆ ಸುಬೇದಾರ್ ನಾಗೇಶ್ ವೃತ್ತದಲ್ಲಿ ಆಟೋ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಸಿಗ್ನಲ್ ಬಳಿ ನಡೆದುಕೊಂಡು ಹೊರಟಿದ್ದ ರಾಜ್‌ಕುಮಾರ್​ಗೆ ಡಿಕ್ಕಿ ಹೊಡೆದು ಆಟೋ ಸಮೇತ ಚಾಲಕ ಪರಾರಿ ಆಗಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರ ಗ್ರಾಮದ ರಾಜ್‌ಕುಮಾರ್(51) ಮೃತ ವ್ಯಕ್ತಿ. ದಾಸರಕೊಪ್ಪಲಿನಲ್ಲಿ ಕುಟುಂಬದ ಜೊತೆ ವಾಸವಿದ್ದರು. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.