ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

​ಎಸ್ಐಆರ್ ಪ್ರಕ್ರಿಯೆ ಕುರಿತು ಕಾಂಗ್ರೆಸ್ ನಾಯಕರ ಅಪಪ್ರಚಾರ: ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ ಕಿಡಿ

ಚುನಾವಣಾ ಆಯೋಗವು 24 ವರ್ಷಗಳ ನಂತರ ರಾಷ್ಟ್ರದಾದ್ಯಂತ ಅರ್ಹ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ದೃಷ್ಟಿಯಿಂದ ಈ ಪ್ರಕ್ರಿಯೆ ಯನ್ನು ನಡೆಸುತ್ತಿದೆ. ಸುಪ್ರೀಂ ಕೋರ್ಟ್ ಕೂಡ ಇದಕ್ಕೆ ಅನುಮೋದನೆ ನೀಡಿದೆ. ಹೀಗಿದ್ದರೂ, ಕಾಂಗ್ರೆಸ್ ನಾಯಕರು ಜನರಲ್ಲಿ ತಪ್ಪು ಮಾಹಿತಿ ಹರಡುತ್ತಾ, ಬಿಜೆಪಿಯ ಮೇಲೆ ವಿನಾಕಾರಣ ಆರೋಪ ಮಾಡುತ್ತಿರುವುದು ಖಂಡನೀಯ

​ಶಿರಸಿ: ಚುನಾವಣಾ ಆಯೋಗ(Election Commission)ವು ಸಂವಿಧಾನಬದ್ಧವಾಗಿ ನಡೆಸುತ್ತಿರುವ ಎಸ್ಐಆರ್ (SIR) ಪ್ರಕ್ರಿಯೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರ ಸದಾನಂದ ಭಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, "ಚುನಾವಣಾ ಆಯೋಗವು 24 ವರ್ಷಗಳ ನಂತರ ರಾಷ್ಟ್ರದಾದ್ಯಂತ ಅರ್ಹ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ದೃಷ್ಟಿಯಿಂದ ಈ ಪ್ರಕ್ರಿಯೆ ಯನ್ನು ನಡೆಸುತ್ತಿದೆ. ಸುಪ್ರೀಂ ಕೋರ್ಟ್ ಕೂಡ ಇದಕ್ಕೆ ಅನುಮೋದನೆ ನೀಡಿದೆ. ಹೀಗಿದ್ದರೂ, ಕಾಂಗ್ರೆಸ್ ನಾಯಕರು ಜನರಲ್ಲಿ ತಪ್ಪು ಮಾಹಿತಿ ಹರಡುತ್ತಾ, ಬಿಜೆಪಿಯ ಮೇಲೆ ವಿನಾಕಾರಣ ಆರೋಪ ಮಾಡುತ್ತಿರುವುದು ಖಂಡನೀಯ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‌SIR: ನೈಜ ಮತದಾರರಿಗೆ ಜರಡಿ ಹಿಡಿಯಲಿದೆ ಎಸ್‌ʼಐಆರ್

​ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ: ಮಾಜಿ ಸಚಿವ ಹಾಗೂ ಶಾಸಕ ಮಂಕಾಳ ವೈದ್ಯ(MLA Mankala Vaidya) ಮತ್ತು ಶಾಸಕ ಭೀಮಣ್ಣ ನಾಯಕ್(MLA Bhimanna Nayak)ಅವರು ಎಸ್ಐಆರ್ ಪ್ರಕ್ರಿಯೆಯ ಬಗ್ಗೆ ನೀಡಿರುವ ಹೇಳಿಕೆಗಳನ್ನು ಉಲ್ಲೇಖಿಸಿದ ಸದಾನಂದ ಭಟ್, "ಮತದಾರರ ಪಟ್ಟಿಯಿಂದ ಮತದಾರರನ್ನು ಹೊರಗಿಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬುದು ಅವರ ಅಜ್ಞಾನವನ್ನು ತೋರಿಸುತ್ತದೆ. ಮತದಾರ ಪಟ್ಟಿಯ ಪರಿಷ್ಕರಣೆ ಸಂಪೂರ್ಣವಾಗಿ ಚುನಾವಣಾ ಆಯೋಗದ ವ್ಯಾಪ್ತಿಗೆ ಬರುತ್ತದೆ. ಪಡಿತರ ಚೀಟಿ ವಿತರಣೆ ಮತ್ತು ಅದರ ನಿರ್ವಹಣೆ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂಬ ಸಾಮಾನ್ಯ ಜ್ಞಾನವೂ ಕಾಂಗ್ರೆಸ್ಸಿಗರಿಗೆ ಇಲ್ಲದಿರು ವುದು ವಿಪರ್ಯಾಸ" ಎಂದು ಟೀಕಿಸಿದ್ದಾರೆ.

​ಕಾಂಗ್ರೆಸ್ ಸರ್ಕಾರದ ವೈಫಲ್ಯಗಳತ್ತ ತಿರುಗೇಟು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದ ಕುರಿತು ಪ್ರಸ್ತಾಪಿಸಿದ ಭಟ್, "ರಾಜ್ಯದಲ್ಲಿ ಬರಗಾಲ ಮತ್ತು ಅತಿವೃಷ್ಟಿ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಆಡಳಿತದ ಕಡೆಗೆ ಗಮನ ಹರಿಸದೆ, ಮಂತ್ರಿಮಂಡಲ ವಿಸ್ತರಣೆಯನ್ನೂ ಮಾಡಲಾಗದೆ ಕೇವಲ ರಾಜಕೀಯ ಮೇಲಾಟದಲ್ಲಿ ಮಗ್ನವಾಗಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದು, ಗೃಹಲಕ್ಷ್ಮಿ ಯೋಜನೆಯ ಹಣವನ್ನು ನಿರ್ದಿಷ್ಟವಿಲ್ಲದ ಖಾತೆಗಳಿಗೆ ವರ್ಗಾಯಿಸುತ್ತಿರುವುದು ರಾಜ್ಯದ ಇತಿಹಾಸದಲ್ಲೇ ದೊಡ್ಡ ಹಗರಣ ದಂತೆ ಭಾಸವಾಗುತ್ತಿದೆ" ಎಂದು ಆರೋಪಿಸಿದ್ದಾರೆ.

​ಅಲ್ಲದೆ, "ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಪಿಂಚಣಿ ತಲುಪಿಸದೆ, ಅನ್ನಭಾಗ್ಯದ ಅಕ್ಕಿ ಯನ್ನೂ ವಿತರಿಸಲಾಗದೆ, ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರವು ಬಿಜೆಪಿಯ ಮೇಲೆ ಸುಳ್ಳು ಆರೋಪ ಮಾಡುವುದನ್ನು ನಿಲ್ಲಿಸಿ, ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನಹರಿಸಲಿ" ಎಂದು ಸದಾನಂದ ಭಟ್ ಆಗ್ರಹಿಸಿದ್ದಾರೆ.