Earthquake: ಪಶ್ಚಿಮ ಘಟ್ಟದಲ್ಲಿ ಭೂಕಂಪದ ಅನುಭವ, ಜನ ಭಯಭೀತ

Earthquake: ಪಶ್ಚಿಮ ಘಟ್ಟದಲ್ಲಿ ಭೂಕಂಪದ ಅನುಭವ, ಜನ ಭಯಭೀತ

Profile ಹರೀಶ್‌ ಕೇರ December 2, 2024
ಕಾರವಾರ: ಪಶ್ಚಿಮ ಘಟ್ಟ (Western Ghats) ಪ್ರದೇಶಗಳ ಶಿರಸಿ, ಕುಮಟಾ ಸೇರಿ ಹಲವೆಡೆ ನಿನ್ನೆ ರಾತ್ರಿ ಭೂಕಂಪನದ (Earthquake) ಅನುಭವ ಆಗಿದ್ದು, ಜನ ಭಯಭೀತರಾಗಿದ್ದಾರೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ, ಶಿರಸಿಯ ಹಲವು ಕಡೆಗಳಲ್ಲಿ ಭಾನುವಾರ ಭೂಕಂಪನದ ಅನುಭವವಾಗಿದ್ದು ಜನ ಭಯಭೀತರಾಗಿದ್ದಾರೆ. ಕುಮಟಾ ತಾಲೂಕಿನ ಪಶ್ಚಿಮ ಘಟ್ಟ ಪ್ರದೇಶದ ದೇವಿಮನೆ ಘಟ್ಟ, ಶಿರಸಿ ತಾಲೂಕಿನ ರಾಗಿಹೊಸಹಳ್ಳಿ, ಕಸಗೆ ಮತ್ತು ಬಂಡಳದಲ್ಲಿ ಭೂಕಂಪನದ ಅನುಭವವಾಗಿದೆ. 3 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ್ದು ಜನ ಒಂದು ಕ್ಷಣ ಕಂಗಾಲಾಗಿದ್ದಾರೆ. ಕುಮಟಾ-ಶಿರಸಿ ನಡುವೆ ರಾಷ್ಟ್ರೀಯ ಹೆದ್ದಾರಿ ಕೆಲಸ ನಡೆಯುತ್ತಿದ್ದು, ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು ಕೊರೆಯುತ್ತಿರುವುದರಿಂದ ಬಂಡೆ ಕಲ್ಲುಗಳನ್ನು ಸಿಡಿಸಿರಬಹುದು ಎಂದು ಆರಂಭದಲ್ಲಿ ಅಂದುಕೊಳ್ಳಲಾಗಿತ್ತು. ಆದರೆ ಇದು ಭೂಕಂಪನ ಎನ್ನುವುದು ಬಳಿಕ ತಿಳಿದುಬಂದಿದೆ. ಹಿಂದೂ ಮಹಾಸಾಗರದಲ್ಲಿ 10 ಕಿಲೋಮೀಟರ್ ಆಳದ ರಿಡ್ಜ್‌ ಮಧ್ಯದಲ್ಲಿ ಭೂಕಂಪನವಾಗಿದ್ದು ಅದರ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ಕಂಪನದ ಅನುಭವವಾಗಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. Uttara Kannada ghats specifically Sirsi and Siddapura felt earthquake or shake for 2-5seconds with big sound. Not sure abt the event but everyone felt it. Scary times as we are carrying ‘KAIGA’ a cruse with us 😔 any damage, can’t imagine what will happen 🙃#Sirsi— Gurumoorti hegde (@guru3ti) December 1, 2024 ಇದೇ ಪ್ರದೇಶದಲ್ಲಿ ಕೈಗಾ ಅಣುವಿದ್ಯುತ್ ಸ್ಥಾವರ ಇರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಪಶ್ಚಿಮಘಟ್ಟದಂತಹ ಸೂಕ್ಷ್ಮ ಪ್ರದೇಶದಲ್ಲಿ ಅಣುವಿದ್ಯುತ್ ಘಟಕ ಸ್ಥಾಪನೆ ಮಾಡಿರುವುದು, ಅದರ ಜೊತೆಗೆ ಇತ್ತೀಚೆಗೆ ನಡೆಯುತ್ತಿರುವ ಭೂಕುಸಿತದಂತ ಘಟನೆಗಳು ಇಲ್ಲಿನ ಜನರನ್ನು ಮತ್ತಷ್ಟು ಆತಂಕಗೊಳ್ಳುವಂತೆ ಮಾಡಿವೆ. ಗುರುಮೂರ್ತಿ ಹೆಗ್ಡೆ ಎನ್ನುವವರು ಎಕ್ಸ್ ಖಾತೆಯಲ್ಲಿ ಭೂಕಂಪನದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. "ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ಧಾಪುರ ಭಾಗದ ಘಟ್ಟಪ್ರದೇಶಗಳಲ್ಲಿ ದೊಡ್ಡ ಶಬ್ದದೊಂದಿಗೆ 2ರಿಂದ 5 ಸೆಕೆಂಡ್‌ಗಳ ಕಾಲ ಭೂಕಂಪನದ ಅನುಭವವಾಗಿದೆ. ಇದು ಏನು ಎಂದು ಯಾರಿಗೂ ಗೊತ್ತಿಲ್ಲವಾದರೂ, ಎಲ್ಲರಿಗೂ ಭೂಕಂಪನ ಅನುಭವಕ್ಕೆ ಬಂದಿದೆ. 'ಕೈಗಾ ಅಣುಸ್ಥಾವರ ಇಲ್ಲೇ ಇದ್ದು ಆತಂಕದಲ್ಲೇ ಬದುಕುವಂತಾಗಿದೆ, ಏನಾದರೂ ಅನಾಹುತ ಸಂಭವಿಸಿದರೆ ಮುಂದೇನಾಗುತ್ತದೆ ಎನ್ನುವುದನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: IPS officer Dies: ಹಾಸನದಲ್ಲಿ ಟಯರ್ ಸ್ಫೋಟಗೊಂಡು ಜೀಪ್ ಪಲ್ಟಿ; ಪ್ರೊಬೆಷನರಿ ಐಪಿಎಸ್ ಅಧಿಕಾರಿ ಸಾವು
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ