Earthquake: ಪಶ್ಚಿಮಘಟ್ಟ ಪ್ರದೇಶದಲ್ಲಿ ಕಂಪಿಸಿದ ಭೂಮಿ; ಸ್ಥಳೀಯರಲ್ಲಿ ಆತಂಕ

Earthquake: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಶಿರಸಿ ತಾಲೂಕಿನಲ್ಲಿ ಭೂಮಿ ಕಂಪಿಸಿದ್ದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.

Profile Prabhakara R December 1, 2024
ಕಾರವಾರ: ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂಕಂಪನದ (Earthquake) ಅನುಭವವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿ ಮನೆ ಘಟ್ಟ, ಶಿರಸಿ ತಾಲೂಕಿನ ರಾಗಿಹೊಸಳ್ಳಿ ಕಸಗೆ, ಬಂಡಳದಲ್ಲಿ ಭೂಮಿ ಕಂಪಿಸಿದ್ದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. 2 ತಾಲೂಕುಗಳ ಹಲವು ಪ್ರದೇಶಗಳಲ್ಲಿ 3 ಸೆಕೆಂಡ್‌ಗಳವರೆಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಒಂದೆಡೆ ಫೆಂಗಲ್ ಚಂಡಮಾರುತ ಅಬ್ಬರದಿಂದ ತಮಿಳುನಾಡು ಮಾತ್ರವಲ್ಲದೆ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ನಡುವೆ ಪಶ್ಚಿಮಘಟ್ಟಗಳಲ್ಲಿ ಭೂಮಿ ಕಂಪಿಸಿದ್ದರಿಂದ ಜನರು ಆತಂಕಗೊಂಡಿದ್ದಾರೆ. ಪಶ್ಚಿಮ ಘಟ್ಟಗಳು ಅತ್ಯಂತ ಸ್ಥಿತ ಪ್ರದೇಶ ಎಂದು ಹೇಳಲಾಗುತ್ತದೆ. ಆದರೆ, ಅರಣ್ಯ ಮತ್ತು ಕಣಿವೆಗಳ ನಾಶದಿಂದ ಭೂ ಕುಸಿತಕ್ಕೆ ಹೆಚ್ಚು ಪ್ರಶಸ್ತ ತಾಣವಾಗಿ ಮಾರ್ಪಟ್ಟಿದೆ. ಭಾರತದಲ್ಲಿ ಹಿಮಾಲಯ ಪರ್ವತಗಳ ನಂತರ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚು ಭೂಕುಸಿತಗಳು ಸಂಭವಿಸುತ್ತಿವೆ. ಈ ಸುದ್ದಿಯನ್ನೂ ಓದಿ | Naxal Encounter: ಟಾಪ್‌ ಕಮಾಂಡರ್‌ ಸೇರಿ 7 ನಕ್ಸಲರು ಎನ್‌ಕೌಂಟರ್‌ಗೆ ಬಲಿ ಗ್ಯಾಸ್‌ ಸಿಲಿಂಡರ್‌ ಬ್ಲಾಸ್ಟ್‌; ಮನೆಗಳು ಛಿದ್ರ! ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಗ್ಯಾಸ್‌ ಸಿಲಿಂಡರ್ ಸ್ಫೋಟ(Gas cylinder Blast) ಸಂಭವಿಸಿದ್ದು, ಮನೆಗಳು ಛಿದ್ರಗೊಂಡಿವೆ. ಈ ದುರ್ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಡಿಜೆ ಹಳ್ಳಿಯಲ್ಲಿ ಘಟನೆ ನಡೆದಿದೆ. ಸ್ಪೋಟದ ತೀವ್ರತೆಗೆ ಮೂರು ಮನೆಗಳು ಛಿದ್ರವಾಗಿವೆ. ಡಿಜೆ ಹಳ್ಳಿಯ ಆನಂದ ಥಿಯೇಟರ್ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದಾರೆ. ನಜೀರ್, ಅವರ ಪತ್ನಿ ಕಲ್ಸುಮ್, ಇಬ್ಬರು ಮಕ್ಕಳು ಗಾಯಗೊಂಡಿದ್ದು, ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 11.30ರ ಸುಮಾರಿಗೆ ರೆಗ್ಯುಲೇಟರ್ ಆನ್ ಆಗಿದ್ದರಿಂದ ಗ್ಯಾಸ್ ಸೋರಿಕೆಯಾಗಿದ್ದು, ಭೀಕರ ಸ್ಫೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಮೂರು ಮನೆಗಳು ಛಿದ್ರವಾಗಿವೆ. ಡಿಜೆ ಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ತಿಂಗಳು ಉಡುಪಿಯಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಪಾರ್ಟಿ (Party) ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ (Gas Cylinder Blast) ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್‌ವೊಂದರಲ್ಲಿ ನಡೆದಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್‌ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆದ ಪರಿಣಾಮ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಗೋಡೆಯಲ್ಲಾ ಛಿದ್ರ ಛಿದ್ರವಾಗಿವೆ. ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಸ್ಫೋಟ ಸಂಭವಿಸುವ ವೇಳೆ ಮನೆಯಲ್ಲಿ ಮಕ್ಕಳ ಸಹಿತ 8 ಮಂದಿ ಮನೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಸಿಲಿಂಡರ್ ಸ್ಫೋಟದ ಬಳಿಕ ತಕ್ಷಣವೇ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ