Sirsi News: ಮಳೆ ಮಾಪನ ಕೇಂದ್ರಗಳ ವೈಫಲ್ಯ: ಹವಾಮಾನ ಆಧಾರಿತ ಬೆಳೆ ವಿಮೆ ವಂಚನೆ ಖಂಡಿಸಿ ಶಿರಸಿಯಲ್ಲಿ ರಾಜ್ಯಪಾಲರಿಗೆ ಮನವಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ಉಂಟಾ ಗಿರುವ ತೀವ್ರ ಅವ್ಯವಸ್ಥೆ ಹಾಗೂ ಮಳೆ ಮಾಪನ ಕೇಂದ್ರಗಳ ದುರಸ್ತಿಯನ್ನು ಖಂಡಿಸಿ, ರೈತರಿಗೆ ನ್ಯಾಯಬದ್ಧ ವಿಮೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಶಿರಸಿ ಉಪವಿಭಾಗದ ಹಾಯಕ ಆಯುಕ್ತರ ಮೂಲಕ ಮನವಿ ಸಲ್ಲಿಸಲಾಯಿತು.
-
ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ಉಂಟಾ ಗಿರುವ ತೀವ್ರ ಅವ್ಯವಸ್ಥೆ ಹಾಗೂ ಮಳೆ ಮಾಪನ ಕೇಂದ್ರಗಳ ದುರಸ್ತಿಯನ್ನು ಖಂಡಿಸಿ, ರೈತರಿಗೆ ನ್ಯಾಯಬದ್ಧ ವಿಮೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಶಿರಸಿ ಉಪವಿಭಾಗದ ಹಾಯಕ ಆಯುಕ್ತರ ಮೂಲಕ ಮನವಿ ಸಲ್ಲಿಸಲಾಯಿತು.
ರೈತ ಬಾಂಧವರು ಹಾಗೂ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಒಟ್ಟಾಗಿ ಈ ಮನವಿ ನೀಡಿದರು.
ಕಳೆದ ಎರಡು-ಮೂರು ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಯ ರೈತ ಸಮುದಾಯವು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಗಂಭೀರ ಲೋಪದೋಷಗಳಿಂದ ತೀವ್ರ ಸಂಕಷ್ಟ ಎದುರಿಸು ತ್ತಿದೆ. ಜಿಲ್ಲೆಯಾದ್ಯಂತ ಸ್ಥಾಪಿಸಲಾದ ಇದರಿಂದಾಗಿ ಮಳೆಯ ನಿಖರ ಮಾಹಿತಿ ಲಭ್ಯವಾಗುತ್ತಿಲ್ಲ.
ಮಳೆ ಮಾಪನ ಕೇಂದ್ರಗಳ ನಿರ್ವಹಣೆಯ ಹೊಣೆಗಾರಿಕೆ ರಾಜ್ಯ ಸರ್ಕಾರದ ಮೇಲಿದ್ದರೂ, ಸರ್ಕಾರ ತನ್ನ ಕರ್ತವ್ಯದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ. ಇದರ ಪರಿಣಾಮವಾಗಿ ನಿಜವಾಗಿಯೂ ಬೆಳೆ ಹಾನಿಗೊಳಗಾದ ನೂರಾರು ರೈತರು ವಿಮೆ ಪರಿಹಾರದಿಂದ ವಂಚಿತರಾಗಿದ್ದು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಈ ನಿರ್ಲಕ್ಷ್ಯ ಹಾಗೂ ಆಡಳಿ ತಾತ್ಮಕ ವೈಫಲ್ಯವನ್ನು ರೈತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯ ಸರ್ಕಾರವು ಕೂಡಲೇ ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿಯ ಮೂಲಕ ಒತ್ತಾಯಿಸಲಾಗಿದೆ.
ಜಿಲ್ಲೆಯ ಎಲ್ಲಾ ಮಳೆ ಮಾಪನ ಕೇಂದ್ರಗಳನ್ನು ತಕ್ಷಣವೇ ದುರಸ್ತಿಗೊಳಿಸಿ, ಅವು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು. ವಿಶೇಷ ಪರಿಶೀಲನೆ: ಕಳೆದ ಕೆಲವು ವರ್ಷಗಳಲ್ಲಿ ಮಳೆ ಮಾಹಿತಿಯ ದೋಷಗಳಿಂದ ವಿಮೆ ಪರಿಹಾರ ವಂಚಿತರಾದ ರೈತರ ಕುರಿತು ವಿಶೇಷ ಪರಿಶೀಲನೆ ನಡೆಸಬೇಕು.
ಅರ್ಹ ರೈತರಿಗೆ ತಕ್ಷಣವೇ ನ್ಯಾಯಬದ್ಧ ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡಬೇಕು.
ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ಸಂಪೂರ್ಣ ಪಾರದರ್ಶಕತೆ ಹಾಗೂ ಜವಾ ಬ್ದಾರಿಯುತ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ರೈತರಿಗೆ ಆಗಿರುವ ಅನ್ಯಾಯದ ಕುರಿತು ಹೊಣೆಗಾರರಾದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಪಂಚಾಯತ್‌ವಾರು ಪ್ರತಿ ತಿಂಗಳ ಮಳೆ ಮಾಪನದ ವರದಿಯು ತಾಲೂಕಿನ ತೋಟಗಾರಿಕೆ ಕಚೇರಿಯಲ್ಲಿ ರೈತರಿಗೆ ಸುಲಭವಾಗಿ ಸಿಗುವಂತಾಗಬೇಕು.
ಸರ್ಕಾರವು ಕೂಡಲೇ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ಕೈಗೊಂಡು ನ್ಯಾಯ ಒದಗಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಮಾಧ್ಯಮ ವಕ್ತಾರ ಸದಾನಂದ ಭಟ್ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಅನಂತ ಮೂರ್ತಿ ಹೆಗಡೆ, ರವಿ ಹೆಗಡೆ, ಪ್ರಸಾದ ಹೆಗಡೆ, ಸದಾನಂದ ಭಟ್, ರಾಘವೇಂದ್ರ ಭಟ್, ಆರ್ ಡಿ ಹೆಗಡೆ, ನರಸಿಂಹ ಹೆಗಡೆ ಮುಂತಾದವರಿದ್ದರು.