ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fake Notes: ದಾಂಡೇಲಿಯ ಮನೆಯೊಂದರಲ್ಲಿ 14 ಕೋಟಿ ಮೌಲ್ಯದ ಖೋಟಾ ನೋಟು ಪತ್ತೆ!

Fake Notes: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬುವರ ಮನೆಯಲ್ಲಿ 500 ರೂ. ಮೌಲ್ಯದ 14 ಕೋಟಿ ನಕಲಿ ನೋಟುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಪೊಲೀಸರು ಕೇಸ್‌ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ದಾಂಡೇಲಿಯ ಮನೆಯೊಂದರಲ್ಲಿ 14 ಕೋಟಿ ಮೌಲ್ಯದ ಖೋಟಾ ನೋಟು ಪತ್ತೆ!

Profile Prabhakara R Apr 8, 2025 8:36 PM

ಕಾರವಾರ: ಜಿಲ್ಲೆಯ ಮನೆಯೊಂದರಲ್ಲಿ 500 ರೂಪಾಯಿ ಮುಖಬೆಲೆಯ ಬರೋಬ್ಬರಿ 14 ಕೋಟಿ ಖೋಟಾ ನೋಟುಗಳು (Fake Notes) ಪತ್ತೆಯಾಗಿನೆ. ಈ ನಕಲಿ ನೋಟುಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬುವರ ಮನೆಯಲ್ಲಿ 500 ರೂ ಮೌಲ್ಯದ 14 ಕೋಟಿ ನಕಲಿ ನೋಟುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರ ಠಾಣೆಯ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿ ನಕಲಿ ನೋಟುಗಳು ಹಾಗೂ ಹಣ ಏಣಿಕೆ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನೂರ್‌ಜಾನ್ ಜುಂಜುವಾಡ್ಕರ ಎಂಬುವರ ಗಾಂಧಿನಗರದಲ್ಲಿರುವ ಮನೆಯಲ್ಲಿ ಗೋವಾ ಮೂಲದವನು ಎನ್ನಲಾದ ಅರ್ಷದ್ ಖಾನ್ ಬಾಡಿಗೆದಾರನಾಗಿ ವಾಸ್ತವ್ಯವಿದ್ದನು. ಕಳೆದ ಒಂದು ತಿಂಗಳಿನಿಂದ ಈತ ಮನೆಯಲ್ಲಿ ಇಲ್ಲದೇ ಇರುವುದನ್ನು ಗಮನಿಸಿ, ಮತ್ತು ಆ ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ನಗರ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ನಕಲಿ ನೋಟುಗಳು ಪತ್ತೆಯಾಗಿವೆ.

500 ರೂ. ನೋಟಿನ ಮೇಲೆ ಮುಖಬೆಲೆಯ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇದ್ದು, ಗವರ್ನರ್ ಸಹಿ ಇಲ್ಲದೆ, ಸಂಖ್ಯೆಗಳಿರುವ ಜಾಗದಲ್ಲಿ ಸೊನ್ನೆಯನಷ್ಟೇ ನಮೂದಿಸಲಾಗಿದೆ. ಮೂವಿ ಶೂಟಿಂಗ್ ಪರ್ಪಸ್ ಓನ್ಲಿ ಎಂದು ಬರೆದಿರುವ ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಈ ಸುದ್ದಿಯನ್ನೂ ಓದಿ | ಎಟಿಎಂಗಳಲ್ಲಿ ನಗದು ಲಭ್ಯವಿಲ್ಲದಿದ್ದರೆ ಬ್ಯಾಂಕ್‌ಗಳಿಗೆ ದಂಡ: ಭಾರತೀಯ ರಿಸರ್ವ್ ಬ್ಯಾಂಕ್

ಈ ನಕಲಿ ನೋಟಿಗೆ ಸಂಬಂಧಪಟ್ಟ ಆ ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್ ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಈ ನಕಲಿ ನೋಟುಗಳನ್ನು ಯಾತಕ್ಕಾಗಿ ದಾಸ್ತಾನಿಡಲಾಗಿತ್ತು, ಯಾವ ಉದ್ದೇಶಕ್ಕಾಗಿ ಇದನ್ನು ಬಳಕೆ ಮಾಡಲು ಇಡಲಾಗಿತ್ತು. ಇದರ ಹಿಂದಿರುವ ಮರ್ಮವೇನು ಎನ್ನುವುದರ ಬಗ್ಗೆ ಸಮಗ್ರ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಹಗರಣ: ಮಾಜಿ ಅಧ್ಯಕ್ಷ ಮಂಜುನಾಥ್‌ ಗೌಡ ಮನೆ ಸೇರಿ 3 ಕಡೆ ಇಡಿ ದಾಳಿ

ಬೆಂಗಳೂರು: ಶಿವಮೊಗ್ಗದ ಡಿಸಿಸಿ ಬ್ಯಾಂಕ್‌ನಲ್ಲಿ (Shivamogga DCC bank scam) ನಡೆದ ಚಿನ್ನಾಭರಣ ಅಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ (Bengaluru) ಜಾರಿ ನಿರ್ದೇಶನಾಲಯ (ED raid) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಜುನಾಥ ಗೌಡರಿಗೆ ಇಡಿ ದಾಳಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಅವರ ನಿವಾಸಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಗೌಡರನ್ನು ಅಧಿಕಾರಿಗಳು ಆಪೆಕ್ಸ್ ಬ್ಯಾಂಕ್ ಗೆಸ್ಟ್ ಹೌಸ್‌ನಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳಿಂದ ಮಂಜುನಾಥ ಗೌಡ ವಿಚಾರಣೆ ನಡೆಯುತ್ತಿದೆ.

2014ರಲ್ಲಿ ಶಿವಮೊಗ್ಗದ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನ ಅಡವು ಇಟ್ಟುಕೊಂಡು 62 ಕೋಟಿ ರೂಪಾಯಿ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಳಿ ನಡೆದಿದೆ. ಅಂದು ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಮನೆ ಮೇಲೆ ಕೂಡ ಇಡಿ ದಾಳಿ ಮಾಡಿದೆ. ಶಿವಮೊಗ್ಗದ ಗೋಪಾಲ ಗೌಡ ಬಡಾವಣೆಯಲ್ಲಿರುವ ಶೋಭಾ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. 8ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆದಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

2014ರ ಜೂನ್‌ನಲ್ಲಿ ಶಿವಮೊಗ್ಗದ ಗಾಂಧಿ ಬಜಾರ್ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಹಗರಣ ನಡೆದಿತ್ತು. ಆ ವೇಳೆ ಡಿಸಿಸಿ ಬ್ಯಾಂಕ್ ಶಾಖೆಯ ಮ್ಯಾನೇಜರ್ ಶೋಭಾ ಆಗಿದ್ದರು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ತನಿಖೆ ನಡೆಸಿ ಪೊಲೀಸರು 2014ರ ಅ.18ರಂದು ಚಾರ್ಜ್​ಶೀಟ್​ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯಕ್ಕೆ ಮೊದಲ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಜುನಾಥ್ ಗೌಡಗೆ ಇಡಿ ಸಮನ್ಸ್ ಜಾರಿಗೊಳಿಸಿತ್ತು. ಕಳೆದ ವಾರವಷ್ಟೇ ಇಡಿ ಸಮನ್ಸ್ ಪ್ರಶ್ನಿಸಿದ್ದ ಮಂಜುನಾಥ್ ಗೌಡ ಮೇಲ್ಮನವಿಯನ್ನು ಹೈಕೋರ್ಟ್​ ವಜಾಗೊಳಿಸಿತ್ತು.

ಬ್ಯಾಂಕಿನ ವಾಹನ ಚಾಲಕನಾಗಿದ್ದ ಶಿವಕುಮಾರ್ ಮನೆಯ ಮೇಲೂ ಇಡಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳ ತಂಡ ಇದೀಗ ಪರಿಶೀಲನೆ ನಡೆಸುತ್ತಿದೆ.