Uttara Kannada Rains: ಭಾರಿ ಮಳೆ; ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
Karnataka Rains: ಆ.27 ಮತ್ತು 28ರವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.


ಬೆಂಗಳೂರು: ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ (Uttara Kannada Rains) 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಆ.28) ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಆ.27 ಮತ್ತು 28ರವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಆದೇಶದಲ್ಲಿ ತಿಳಿಸಿದ್ದಾರೆ.