ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA Bhimanna Naik: ನಾನು ಯಾವುದೇ ಸಂದರ್ಭದಲ್ಲೂ ಸ್ಥಾನಕ್ಕಾಗಿ ಹಠ ಹಿಡಿದವನಲ್ಲ: ಶಾಸಕ ಭೀಮಣ್ಣ ನಾಯ್ಕ್

ಕಳೆದ ಐದು ವರ್ಷಗಳಲ್ಲಿ ಮೂರ್ನಾಲ್ಕು ಚುನಾವಣೆಗಳನ್ನು ಎದುರಿಸಿದ್ದೇವೆ. ಪ್ರತಿಯೊಂದು ಚುನಾವಣೆಯಲ್ಲೂ ಪಕ್ಷದ ಬಲವರ್ಧನೆಗಾಗಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಪಕ್ಷದ ವರಿಷ್ಠರು ಮತ್ತು ರಾಜ್ಯ ಅಧ್ಯಕ್ಷರ ಸೂಚನೆಯಂತೆ ಎಲ್ಲರೊಂದಿಗೆ ಚರ್ಚಿಸಿ, ಒಮ್ಮತದ ನಿರ್ಧಾರಗಳ ಮೂಲಕ ಕೆಲಸ ಮಾಡಲಾಗಿದೆ.

ಶಿರಸಿ: ನಾನು ಯಾವುದೇ ಸಂದರ್ಭದಲ್ಲೂ ಸ್ಥಾನಕ್ಕಾಗಿ ಹಠ ಹಿಡಿದವನಲ್ಲ. ಜಿಲ್ಲಾಧ್ಯಕ್ಷನಾಗಿ ಸುದೀರ್ಘ 13 ವರ್ಷಗಳ ಕಾಲ ಎಲ್ಲ ಹಿರಿಯ, ಕಿರಿಯ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ಒಟ್ಟಿಗೆ ಕರೆದೊಯ್ಯುವ ಮೂಲಕ ಪಕ್ಷವನ್ನು ಸಂಘಟಿಸಿದ್ದೇನೆ ಎಂದು ಶಾಸಕ ಭೀಮಣ್ಣ ನಾಯ್ಕ್( MLA Bhimanna Naik) ತಿಳಿಸಿದ್ದಾರೆ.

​ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಮ್ಮ ರಾಜಕೀಯ ನಡೆ ಮತ್ತು ಪಕ್ಷದ ಜವಾಬ್ದಾರಿಗಳ ಕುರಿತು ಮಹತ್ವದ ವಿಷಯಗಳನ್ನು ಹಂಚಿಕೊಂಡರು.

ಕಳೆದ ಐದು ವರ್ಷಗಳಲ್ಲಿ ಮೂರ್ನಾಲ್ಕು ಚುನಾವಣೆಗಳನ್ನು ಎದುರಿಸಿದ್ದೇವೆ. ಪ್ರತಿಯೊಂದು ಚುನಾವಣೆಯಲ್ಲೂ ಪಕ್ಷದ ಬಲವರ್ಧನೆಗಾಗಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಪಕ್ಷದ ವರಿಷ್ಠರು ಮತ್ತು ರಾಜ್ಯ ಅಧ್ಯಕ್ಷರ ಸೂಚನೆಯಂತೆ ಎಲ್ಲರೊಂದಿಗೆ ಚರ್ಚಿಸಿ, ಒಮ್ಮತದ ನಿರ್ಧಾರಗಳ ಮೂಲಕ ಕೆಲಸ ಮಾಡಲಾಗಿದೆ. ಜನರ ಸಹಕಾರದೊಂದಿಗೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ತಂದು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲೂ ಕ್ಷೇತ್ರದ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ, ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲು ಬದ್ಧನಾಗಿದ್ದೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: MLA Bhimanna Naik: 1.80 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ

ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಮೂರು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ಆಡಳಿತ ನಡೆಸಿದ್ದಾರೆ. ಎಲ್ಲಾ ಇಲಾಖೆಗಳ ಮುಖಾಂತರ ಹಣವನ್ನು ಬಿಡುಗಡೆ ಮಾಡುವ ಮೂಲಕ ರಾಜ್ಯದಲ್ಲಿ ಉತ್ತಮ ಆಡಳಿತ ಮತ್ತು ಜನಪರ ಅಭಿವೃದ್ಧಿಯನ್ನು ತಂದಿದ್ದಾರೆ. ನಾನು ಶಾಸಕನಾಗಿ ಬಂದ ಈ 14 ತಿಂಗಳಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಮುಹೂರ್ತ ಹಾಗೂ ಪೂಜೆಗಳನ್ನು ನೆರವೇರಿಸಿ, ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸರ್ಕಾರದಿಂದ ಹಣವನ್ನು ತಂದು, ಅದಕ್ಕೆ ಅನುಮೋದನೆ ಪಡೆದು, ಟೆಂಡರ್ ಪ್ರಕ್ರಿಯೆ ಮುಗಿದ ನಂತರವೇ ಈ ಎಲ್ಲ ಕಾಮಗಾರಿಗಳನ್ನು ಆರಂಭಿಸಲಾಗಿದೆ.

​ಸ್ವಾಭಾವಿಕವಾಗಿ ನಮ್ಮ ವರಿಷ್ಠರಾದ ಎಐಸಿಸಿ ನಾಯಕರ ತೀರ್ಮಾನದಂತೆ ಮತ್ತೊಬ್ಬರಿಗೆ ಅವಕಾಶ ನೀಡಬೇಕೆಂಬ ಉದ್ದೇಶದಿಂದ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ರಾಜ್ಯದ ಜನತೆ ಬಯಸಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಇನ್ನು ಹೆಚ್ಚಿನ ಅನುದಾನವನ್ನು ತಂದು, ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತಗೆದುಕೊಂಡು ಉತ್ತಮ ಕೆಲಸ ಮಾಡಲಿದ್ದೇವೆ. ನಮ್ಮ ಸರ್ಕಾರ ಮೊದಲ ಹಂತದಲ್ಲಿ ಯಶಸ್ವಿಯಾಗಿ ಕೆಲಸ ಮುಗಿಸಿದ್ದು, ಮುಂದಿನ ಹಂತದ ಕಾರ್ಯಗಳತ್ತ ಹೆಜ್ಜೆ ಇಡುತ್ತಿದೆ. ಈಗಿರುವ ಸರ್ಕಾರವು ಎಲ್ಲರನ್ನೂ ಒಟ್ಟಾಗಿ ಸೇರಿಸಿಕೊಂಡು ಅತ್ಯಂತ ಜವಾಬ್ದಾರಿಯುತವಾಗಿ ಮುನ್ನಡೆಯುತ್ತಿದೆ ಎಂದರು.