ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಉತ್ತರ ಕನ್ನಡ ಜನತೆಗೆ ಗುಡ್‌ನ್ಯೂಸ್‌; ಕಾರವಾರದಲ್ಲಿ ನಿರ್ಮಾಣವಾಗಲಿದೆ 200 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

Sidaramaiah: ಉತ್ತರ ಕನ್ನಡ ಭಾಗದ ಜನರ ಬಹು ವರ್ಷಗಳ ಬೇಡಿಕೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಕೋಟಿ ರುಪಾಯಿ ಅಂದಾಜು ಮೊತ್ತದಲ್ಲಿ ಕಾರವಾರದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಸಾಂದರ್ಭಿಕ ಚಿತ್ರ

ಕಾರವಾರ, ಮೇ 21: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸು ನನಸಾಗುತ್ತಿದೆ. ಹೌದು, ಸಿಎಂ ಸಿದ್ದರಾಮಯ್ಯ (Sidaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಉತ್ತರ ಕನ್ನಡ ಭಾಗದ ಜನರ ಬಹು ವರ್ಷಗಳ ಬೇಡಿಕೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಕೋಟಿ ರುಪಾಯಿ ಅಂದಾಜು ಮೊತ್ತದಲ್ಲಿ ಕಾರವಾರದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಲಿದೆ. ಇದರಿಂದ ಜಿಲ್ಲೆಯ ಜನರು ಇನ್ನು ಮುಂದೆ ಗಂಭೀರ ಕಾಯಿಲೆಗಳ ಚಿಕಿತ್ಸೆಗಾಗಿ ಮಂಗಳೂರು, ಮಣಿಪಾಲ ಅಥವಾ ಗೋವಾಕ್ಕೆ ಅಲೆಯುವುದು ತಪ್ಪಲಿದೆ. ಈ ಮೂಲಕ ಸ್ಥಳೀಯರ ಅನೇಕ ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

ಬಜೆಟ್‌ನಲ್ಲಿ ಘೋಷಿಸಿದ್ದ ಸಿದ್ದರಾಮಯ್ಯ

ಉತ್ತರ ಕನ್ನಡ ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಅದರಂತೆ ಈ ವರ್ಷದ ಬಜೆಟ್‌ನಲ್ಲಿ ಸಿದ್ದರಾಮಯ್ಯ ಕಾರವಾರ, ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಘೋಷಣೆ ಮಾಡಿದ್ದರು. ಇದೀಗ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಬೇಕೆಂದು ಹಲವು ವರ್ಷಗಳಿಂದ ಅಲ್ಲಿನ ಸಾರ್ವಜನಿಕರು ಬೇಡಿಕೆ ಇಡುತ್ತಲೇ ಬಂದಿದ್ದರು.

ಕಾರವಾರ, ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಇತರ ಪ್ರಮುಖ ನಿರ್ಣಯಗಳು

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕು ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗಳ 10.61 ಕೋಟಿ ರುಪಾಯಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕಲಬುರಗಿ ಜಿಲ್ಲೆ, ಕಲಬುರಗಿ ತಾಲೂಕು, ಶರಣಸಿರಸಗಿ ಗ್ರಾಮದಲ್ಲಿ 4 ಎಕರೆ ಗೋಮಾಳ ಜಮೀನನ್ನು ಕಲಬುರಗಿ ಜಿಲ್ಲಾ ಆದಿ ವೀರಶೈವ ಬಣಜಿಗ ಸಮಾಜ ಇವರಿಗೆ ಮಂಜೂರು ಮಾಡಲಾಗಿದೆ. ಮೈಸೂರು ಜಿಲ್ಲೆ, ನಂಜನಗೂಡು ತಾಲೂಕಿನ ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟದ ಹತ್ತಿರ ಕಬಿನಿ ನದಿಗೆ ಅಡ್ಡಲಾಗಿ ವಿಯರ್ ನಿರ್ಮಾಣ ಕಾಮಗಾರಿಯನ್ನು 15 ಕೋಟಿ ರುಪಾಯಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿ ಜಿಲ್ಲೆಗೆ 15 ವಿದ್ಯಾರ್ಥಿಗಳಂತೆ 500 ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 15 ಕೋಟಿ ರುಪಾಯಿ ವೆಚ್ಚದಲ್ಲಿ 2 ವರ್ಷಗಳ ವಸತಿ ಸಹಿತ ಪಿ.ಯು.ಸಿ. ಶಿಕ್ಷಣದೊಂದಿಗೆ NEET/ JEE/ CET ಪರೀಕ್ಷಾ ಪೂರ್ವ ತರಬೇತಿ ನೀಡಲು ತೀರ್ಮಾನಿಸಲಾಗಿದೆ.

ರಾಜ್ಯ ಶಿಕ್ಷಣ ನೀತಿ ಅನುಷ್ಠಾನ ಮಾಡಲು ಸಚಿವ ಸಂಪುಟ ಒಪ್ಪಿಗೆ

ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆಯಡಿ ಕೇಂದ್ರ ಸರ್ಕಾರದ ಆರ್ಥಿಕ ವ್ಯವಹಾರಗಳ ಇಲಾಖೆಯ ಸಾಲದ ಮಾತುಕತೆ ಸಿದ್ಧತೆಯ ಮಾನದಂಡಗಳ ಪ್ರಕಾರ 53 ಸರ್ಕಾರಿ ಪದವಿ ಕಾಲೇಜುಗಳು, 14 ಸರ್ಕಾರಿ ಪಾಲಿಟೆಕ್ನಿಕ್‌ಗಳು, 5 ಉತ್ಕೃಷ್ಟತಾ ಕೇಂದ್ರಗಳು ಹಾಗೂ ಯೋಜನಾ ನಿರ್ವಹಣಾ ಘಟಕಕ್ಕೆ ಒಟ್ಟು 802 ಕೋಟಿ ರುಪಾಯಿ ಮೊತ್ತದ ವಸ್ತುಗಳ ಮುಂಗಡ ಖರೀದಿಗೆ ಅನುಮೋದನೆ ನೀಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author