ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka high court: ಗೋಕರ್ಣದ ಗುಹೆಯಲ್ಲಿದ್ದ ರಷ್ಯನ್‌ ಮಹಿಳೆಯನ್ನು ಮರಳಿ ಕಳಿಸಲು ಹೈಕೋ‌ರ್ಟ್ ಸಮ್ಮತಿ

Gokarna: ಉತ್ತರ ಕನ್ನಡದ ಗೋಕರ್ಣ ಸಮುದ್ರ ತೀರದ ರಾಮತೀರ್ಥದ ಹತ್ತಿರದಲ್ಲಿರುವ ಗುಡ್ಡದ ಗುಹೆಯಲ್ಲಿ ರಷ್ಯನ್ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಳು. ರಷ್ಯಾ ಮೂಲದ ನಿನಾ ಕುಟಿನಾ ಮತ್ತು ಆಕೆಯ 6 ಮತ್ತು 4 ವರ್ಷದ ಇಬ್ಬರು ಮಕ್ಕಳೊಂದಿಗೆ ಇದ್ದಿದ್ದು ಕಂಡುಬಂದಿದ್ದು, ಅವರನ್ನು ಪೊಲೀಸರು ಸುರಕ್ಷಿತವಾಗಿ ಕರೆತಂದಿದ್ದರು.

ಗೋಕರ್ಣದ ಗುಹೆಯಲ್ಲಿದ್ದ ರಷ್ಯನ್‌ ಮಹಿಳೆಯ ಮರಳಿ ಕಳಿಸಲು ಹೈಕೋರ್ಟ್ ಸಮ್ಮತಿ

-

ಹರೀಶ್‌ ಕೇರ ಹರೀಶ್‌ ಕೇರ Sep 27, 2025 7:53 AM

ಬೆಂಗಳೂರು: ಚಿಕ್ಕ ಚಿಕ್ಕ ಮಕ್ಕಳೊಂದಿಗೆ ಗೋಕರ್ಣದ (Gokarna) ರಾಮತೀರ್ಥ ಬೆಟ್ಟದ ನಡುವಿನ ಗುಹೆಯೊಂದರಲ್ಲಿ (cave) ವಾಸವಾಗಿದ್ದ ರಷ್ಯಾ ಮಹಿಳೆಯನ್ನು (Russia woman) ವಾಪಸ್ ಅವರ ದೇಶಕ್ಕೆ ಕಳುಹಿಸಲು ಕರ್ನಾಟಕ ಹೈಕೋರ್ಟ್ (Karnataka High Court)​ ಅನುಮತಿ ನೀಡಿದೆ. ರಷ್ಯಾಗೆ ಮರಳುವ ಬಗ್ಗೆ ಮಹಿಳೆಯ ಇಚ್ಛೆ ಪರಿಗಣಿಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದ್ದು, ಮಹಿಳೆಗೆ ಅಗತ್ಯ ದಾಖಲಾತಿ ಒದಗಿಸಲು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಉತ್ತರ ಕನ್ನಡದ ಗೋಕರ್ಣ ಸಮುದ್ರ ತೀರದ ರಾಮತೀರ್ಥದ ಹತ್ತಿರದಲ್ಲಿರುವ ಗುಡ್ಡದ ಗುಹೆಯಲ್ಲಿ ರಷ್ಯನ್ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಳು. ರಷ್ಯಾ ಮೂಲದ ನಿನಾ ಕುಟಿನಾ ಮತ್ತು ಆಕೆಯ 6 ಮತ್ತು 4 ವರ್ಷದ ಇಬ್ಬರು ಮಕ್ಕಳೊಂದಿಗೆ ಇದ್ದಿದ್ದು ಕಂಡುಬಂದಿದ್ದು, ಅವರನ್ನು ಪೊಲೀಸರು ಸುರಕ್ಷಿತವಾಗಿ ಕರೆತಂದಿದ್ದರು.

ಮಾಮೂಲಿನಂತೆ ಗಸ್ತು ತಿರುಗುತ್ತಿದ್ದಾಗ ಪೊಲೀಸರ ಕಣ್ಣಿಗೆ ಆ ದೂರದ ಬೆಟ್ಟದ ಗುಹೆಯ ಹೊರಗೆ ಬಟ್ಟೆ ಒಣಗಿ ಹಾಕಿದ್ದು ಕಾಣಿಸಿತ್ತು. ರೌಂಡ್ಸ್ ನಲ್ಲಿದ್ದ ಪೊಲೀಸರಿಗೆ ಗುಡ್ಡದ ಮೇಲಿನ ಲಿಂಗ ಪೂಜೆ ಮಾಡಿರುವುದು ಕಂಡಿದೆ. ಅನುಮಾನ ಬಂದು ಗುಹೆ ಒಳಗಡೆ ಹೋಗುತ್ತಿದ್ದಂತೆ ಬಟ್ಟೆ ಧರಿಸದ ಪುಟ್ಟ ಮಗು ಓಡಿ ಹೊರ ಬಂದಿದೆ. ಪೊಲೀಸರನ್ನು ನೋಡಿ ಒಳಗೆ ಓಡಿ ಹೋದ ಪುಟ್ಟ ಮಗುವಿನ ಹಿಂದೆ ಹೋದಾಗ ಚಿಕ್ಕ ದೀಪವನ್ನಿಟ್ಟುಕೊಂಡು ತನ್ನ ದೊಡ್ಡ ಮಗುವಿಗೆ ಚಿತ್ರ ಬಿಡಿಸುವುದನ್ನು ಹೇಳಿಕೊಡುತ್ತಿದ್ದ ಮಹಿಳೆ ಕಂಡಿದ್ದಳು.

ಈ ಗುಹೆ ಸಂಪೂರ್ಣವಾಗಿ ಕತ್ತಲಾಗಿದ್ದು ಗುಹೆಯ ಸುತ್ತ ಸಾಕಷ್ಟು ಹಾವುಗಳಿವೆ. ಆ ಪ್ರದೇಶದಲ್ಲಿ ಟ್ರೆಕ್ಕಿಂಗ್ ಕೂಡ ನಿಷೇಧಿಸಿ ಸುತ್ತಲೂ ಫೆನ್ಸಿಂಗ್ ಹಾಕಲಾಗಿದೆ. ಹೀಗಿದ್ದರೂ ಮಹಿಳೆ ವಾಸವಾಗಿದ್ದಾಳೆಂದು ಪೊಲೀಸರಿಗೆ ಅಚ್ಚರಿ ಆಗಿತ್ತು. ಇನ್ನು ಫೆನ್ಸಿಂಗ್ ಇದ್ದರೂ ಪಕ್ಕದ ಗುಡ್ಡದಿಂದ ಗುಹೆ ಒಳಗಡೆ ಹೋಗಿ ನೆಲೆಸಿದ್ದ ರಷ್ಯಾದ‌ ಮಹಿಳೆ ಈ ಹಿಂದೆಯೂ ಬಹಳಷ್ಟು ಬಾರಿ ಈ ಗುಹೆಯಲ್ಲಿ ಬಂದು ನೆಲೆಸಿರುವುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಳು.

ಇದನ್ನೂ ಓದಿ: Russian woman rescued: ಗೋಕರ್ಣದ ದಟ್ಟಾರಣ್ಯದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ರಷ್ಯಾ ಮಹಿಳೆಯ ರಕ್ಷಣೆ!