ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಉತ್ತರ ಒಳನಾಡಿನಲ್ಲಿ ತೀವ್ರ ಶೀತಗಾಳಿ; ಬೀದರ್‌ನಲ್ಲಿ ರಾಜ್ಯದಲ್ಲೇ ಅತಿ ಕನಿಷ್ಠ ಉಷ್ಣಾಂಶ ದಾಖಲು

ಕರ್ನಾಟಕ ಹವಾಮಾನ ವರದಿ: ಕಳೆದ ಎರಡು ವಾರದಿಂದ ಕರ್ನಾಟಕದಲ್ಲಿ ಹಿಂಗಾರು ಮಳೆ ಆರ್ಭಟ ಕಡಿಮೆಯಾಗಿದೆ. ಈ ನಡುವೆ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ. ಇನ್ನು ಮುಂದಿನ ಆರು ದಿನ ರಾಜ್ಯದ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿದೆ.

ಮಂಜು ಮುಸುಕಿದ ವಾತಾವರಣ (ಸಾಂದರ್ಭಿಕ ಚಿತ್ರ)

ಬೆಂಗಳೂರು, ನ.15: ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ (Karnataka Weather) ಹೆಚ್ಚಾಗಿದ್ದು, ಸಮತಟ್ಟಾದ ಪ್ರದೇಶಗಳಲ್ಲಿ ಬೀದರ್‌ನಲ್ಲಿ ಶನಿವಾರ ಮುಂಜಾನೆ ಅತಿ ಕನಿಷ್ಠ ಉಷ್ಣಾಂಶ 10.0 ಡಿಗ್ರಿ ಸೆ. ದಾಖಲಾಗಿದೆ. ಹಾಗೆಯೇ ಇನ್ನೂ ಎರಡು ದಿನ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ತೀವ್ರ ಶೀತಗಾಳಿ (Cold Wave) ಬೀಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (India Meteorological Department) ಮಾಹಿತಿ ನೀಡಿದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 17 ಡಿಗ್ರಿ ಸೆಲ್ಸಿಯಸ್ ಆಗಿರಬಹುದು.

ದಕ್ಷಿಣ ಶ್ರೀಲಂಕಾ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈರುತ್ಯ ಬಂಗಾಳಕೊಲ್ಲಿ ಮೇಲಿನ ವಾಯು ಚಂಡಮಾರುತ ಪರಿಣಾಮ ಶ್ರೀಲಂಕಾ ಕರಾವಳಿಯ ಆಗ್ನೆಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದೆ. ಇದರಿಂದ ವಾಯು ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ವಿಸ್ತರಿಸಿದ್ದು, ಎತ್ತರದೊಂದಿಗೆ ನೈರುತ್ಯಕ್ಕೆ ಓರೆಯಾಗಿದೆ. ಇದು ಮುಂದಿನ 24 ಗಂಟೆಗಳಲ್ಲಿ ನಿಧಾನವಾಗಿ ಪಶ್ಚಿಮ-ಉತ್ತರ ಪಶ್ಚಿಮಕ್ಕೆ ಚಲಿಸುವ ಸಾಧ್ಯತೆಯಿದೆ. ದಕ್ಷಿಣ ಕೇರಳ ಕರಾವಳಿಯ ಆಗ್ನೆಯ ಅರೇಬಿಯನ್ ಸಮುದ್ರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ. ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 6 ದಿನ ಹವಾಮಾನ ಹೇಗಿರಲಿದೆ?

ನ.16ರಂದು ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ.

ನ.17ರಂದು ಕರಾವಳಿ ಮತ್ತು ಉತ್ತರ ಒಳನಡಿನಲ್ಲಿ ಒಣ ಹವೆ ಇರಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನ.18ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ನ.19ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲೂ ಇದೇ ರೀತಿಯ ಸ್ಥಿತಿ ಇರಲಿದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸುದ್ದಿಯನ್ನೂ ಓದಿ | Monsoon Shopping Styling Tips: ಮಾನ್ಸೂನ್ ಸೀಸನ್ ಶಾಪಿಂಗ್ ಸ್ಟೈಲಿಂಗ್‌ಗೆ ಇಲ್ಲಿದೆ 5 ಐಡಿಯಾ

ನ.20 ಮತ್ತು 21ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.