ಬೆಂಗಳೂರು, ಏಪ್ರಿಲ್ 1: ಬೇಸಿಗೆಯ ಬಿರುಬಿಸಿಲಿನ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಮುಂದಿನ 4 ದಿನ ಗುಡುಗು ಸಹಿತ ಮಳೆಯ ಆರ್ಭಟ (Heavy Rain) ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ (Karnataka Weather Report) ಯೆಲ್ಲೋ ಅಲರ್ಟ್ ಘೋಷಿಸಿದೆ.
ನಾಳೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಏಪ್ರಿಲ್ 1ರಂದು 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯಲ್ಲಿ ಬುಧವಾರ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ. ಸಂಜೆ / ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರುವ ಸಾಧ್ಯತೆ ಇದೆ.
ಏಪ್ರಿಲ್ 4ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ!
ಏಪ್ರಿಲ್ 2ರಂದು ಬೀದರ್, ಕಲಬುರಗಿ, ಬೆಳಗಾವಿ,ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆ ಆರ್ಭಟಿಸುವ ಮುನ್ಸೂಚನೆ ಇದೆ.
ಇನ್ನು ಏಪ್ರಿಲ್ 3ರಂದು ಕೂಡ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದ್ದು, ಗುಡುಗು ಸಹಿತ ಮಳೆಯಾಗಲಿದೆ.
Health Tips: ಮದ್ಯಪಾನ ಬಿಟ್ಟರೂ ಈ ಅಭ್ಯಾಸಗಳು ನಿಮ್ಮನ್ನು ಬೇಗನೆ ವೃದ್ಧಾಪ್ಯದತ್ತ ತಳ್ಳಬಹುದು!
ಏಪ್ರಿಲ್ 4ರಂದು ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ದಕ್ಷಿಣ ಕನ್ನಡ ಸೇರಿ 11 ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.