ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕಾರವಾರದಲ್ಲಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಬಾಲಕ ಸಾವು, ಮೂವರಿಗೆ ಗಂಭೀರ ಗಾಯ

Karwar Accident: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪ ಭೀಕರ ಅಪಘಾತ ನಡೆದಿದೆ. ಕಂಟೇನರ್ ಚಾಲಕ ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದಲ್ಲಿ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಅಲ್ಲದೇ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಬಾಲಕ ಸಾವು, 3 ಮಂದಿಗೆ ಗಾಯ

ಕಾರವಾರದ ಬಳಿ ಕಾರಿನ ಮೇಲೆ ಕಂಟೇನರ್‌ ಪಲ್ಟಿಯಾಗಿರುವುದು. -

Prabhakara R
Prabhakara R Mar 9, 2026 7:54 PM

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ (Karwar Accident) ಸಮೀಪದ ಅರಗಾ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ. ಕಾರಿನ ಮೇಲೆ ಕಂಟೇನರ್‌ ಪಲ್ಟಿಯಾಗಿ ಪುಟ್ಟ ಬಾಲಕನೊಬ್ಬ ಮೃತಪಟ್ಟು, ದಂಪತಿ ಹಾಗೂ ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಂಟೇನರ್ ಚಾಲಕ ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ. ಕಂಟೇನರ್ ಚಾಲಕ ರಸ್ತೆ ಮಧ್ಯೆ ವಾಹನ ಅಡ್ಡಗಟ್ಟಿ ಜನರ ಜತೆ ಗಲಾಟೆ ಮಾಡಿದ್ದು, ನಂತರ ಸಿಟ್ಟಿನಿಂದ ಕಂಟೇನರ್ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಮಹಾರಾಷ್ಟ್ರ ಕಾರಿನ ಮೇಲೆ ಕಂಟೇನರ್ ಬಿದ್ದು ಕಾರಿನಲ್ಲಿದ್ದ 8 ವರ್ಷದ ಮಗು ಮೃತಪಟ್ಟಿದೆ.

ಕಾರಿನಲ್ಲಿದ್ದ ದಂಪತಿ ಹಾಗೂ ಮತ್ತೊಬ್ಬ ಬಾಲಕನಿಗೆ ಗಾಯಗಳಾಗಿದ್ದು, ಅವರನ್ನು ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಕಂಟೇನರ್ ಚಾಲಕನನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ದುರ್ಮರಣ

ರಾಯಚೂರು: ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಸಮೀಪದ ಯಲಗಟ್ಟಾ ಗ್ರಾಮದಲ್ಲಿ ನಡೆದಿದೆ. ಯಲಗಟ್ಟಾದ ದ್ಯಾವಪ್ಪ ಸುಗೂರು (38) ಹಾಗೂ ಪತ್ನಿ ಶಿವಮ್ಮ (32) ಮೃತರು.

Kolar news: ಕಾರು ಕೆರೆಗೆ ಉರುಳಿ ರೈತ ಸಂಘದ ಜಿಲ್ಲಾಧ್ಯಕ್ಷ ಸಾವು, ಅಪಘಾತದ ಬಗ್ಗೆ ಅನುಮಾನ!

ರೆಡ್ಡೆಪ್ಪ ಅವರು ಮನೆ ನಿರ್ಮಾಣ ಕಾಮಗಾರಿ ಕೈಗೊಂಡಿದ್ದರು. ಮನೆ ಮೇಲಕ್ಕೆ ಹೋಗುತ್ತಿದ್ದಾ ಮೆಟ್ಟಿಲುಗಳು ಕುಸಿದು ದುರ್ಘಟನೆ ನಡೆದಿದೆ. ಮೃತ ದೇಹಗಳನ್ನು ಮರಣೋತ್ತರ ಪರಿಕ್ಷೆಗಾಗಿ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಹಟ್ಟಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.