ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

1.15 ಕೋಟಿ ಹವಾಲಾ ಹಣ ದರೋಡೆ ಪ್ರಕರಣ; ಕಾರವಾರದ ಕಾನ್ಸ್‌ಟೇಬಲ್‌ ಬಂಧನ

ದಾವಣಗೆರೆಯಿಂದ ಮಂಗಳೂರಿಗೆ ಸಾಗಿಸಲಾಗುತ್ತಿದ್ದ ಹವಾಲಾ ಹಣವನ್ನು ದರೋಡೆ ಮಾಡುವ ಉದ್ದೇಶದಿಂದ ವ್ಯಕ್ತಿಯೊಬ್ಬರನ್ನು ಅಪಹರಿಸಿ, 1.15 ಕೋಟಿ ರೂ. ಹಣವನ್ನು ದೋಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕಾರವಾರದ ಸಂಚಾರ ಪೊಲೀಸ್‌ ಪೇದೆಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಕಾರವಾರ: 1.15 ಕೋಟಿ ರೂ. ಹವಾಲಾ ಹಣ ದರೋಡೆ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಪೇದೆಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಾರವಾರ (Karwar) ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಶೈಲ್ ಬಂಧಿತ ಪೊಲೀಸ್ ಪೇದೆ.

ದಾವಣಗೆರೆಯಿಂದ ಮಂಗಳೂರಿಗೆ ಸಾಗಿಸಲಾಗುತ್ತಿದ್ದ ಹವಾಲಾ ಹಣವನ್ನು ದರೋಡೆ ಮಾಡುವ ಉದ್ದೇಶದಿಂದ ಸತ್ಯನಾರಾಯಣ ಎಂಬವರನ್ನು ಅಪಹರಿಸಿ, 1.15 ಕೋಟಿ ರೂ. ಹಣವನ್ನು ದೋಚಲಾಗಿತ್ತು. ಈ ಸಂಬಂಧ ಸತ್ಯನಾರಾಯಣ ಅವರು ನೀಡಿದ ದೂರಿನ ಆಧಾರದ ಮೇಲೆ ಮಂಗಳೂರು ಪೊಲೀಸರು ತನಿಖೆ ಕೈಗೊಂಡಿದ್ದರು.

ತನಿಖೆ ವೇಳೆ ಅಪಹರಣದ ಹಿಂದೆ ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಪೇದೆ ಶ್ರೀಶೈಲ್‌ ಅವರ ಸಂಚು ಇರುವುದು ಬಯಲಾಗಿದೆ ಎನ್ನಲಾಗಿದೆ. ಕಾರವಾರದ ಯುವಕರನ್ನು ಬಳಸಿಕೊಂಡು ಅಪಹರಣಕ್ಕೆ ಯೋಜನೆ ರೂಪಿಸಿದ್ದ ಆರೋಪ ಶ್ರೀಶೈಲ್ ಮೇಲಿದೆ.

ಕಾರವಾರ ತಾಲೂಕಿನ ಕಿನ್ನರ ಗ್ರಾಮದ ಗಣೇಶ ಕೋಳಂಕರ್ ಎಂಬ ಯುವಕನನ್ನು ಈ ಕೃತ್ಯಕ್ಕೆ ಬಳಸಿಕೊಂಡಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ಎಂದು ಹೇಳಲಾಗಿರುವ ಗಣೇಶ ಕೋಳಂಕರ್ ಬಂಧನಕ್ಕಾಗಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ದೀಪಾವಳಿಗೆ ಪತ್ನಿಗೆ ಸೀರೆ ತರಲು ಹೋದವ ಹೆಣವಾಗಿ ಬಂದ: ಡ್ರೈವಿಂಗ್‌ ಕಲಿಯುತ್ತಿದ್ದ ಮಹಿಳೆಯ ಮಹೀಂದ್ರ ಥಾರ್ ಡಿಕ್ಕಿಯಾಗಿ ವ್ಯಕ್ತಿ ಸಾವು

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಕಾರವಾರ ಸಂಚಾರ ಪೊಲೀಸ್ ಠಾಣೆಯ ಪೇದೆ ಶ್ರೀಶೈಲ್ ಅವರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಅವರು ಅಮಾನತುಗೊಳಿಸಿದ್ದಾರೆ.