ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karwar News: ಸಮುದ್ರವನ್ನು ತ್ಯಾಜ್ಯ ಮುಕ್ತಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ : ಡಾ.ದಿಲೀಷ್ ಶಶಿ

ಜಗತ್ತಿನಲ್ಲಿ ಜೀವಿಗಳ ಉದಯ ಸಮುದ್ರದಿಂದಲೇ ಆಗಿದೆ ಆದರೆ ಪ್ರಸ್ತುತ ಮಾನವನಿಂದಲೇ ಸಮುದ್ರವು ಅತೀ ಹೆಚ್ಚು ಮಲಿನಗೊಳ್ಳುತ್ತಿದೆ. ಸಮುದ್ರಕ್ಕೆ ಸೇರುತ್ತಿರುವ ಮೈಕ್ರೋ ಪ್ಲಾಸಿಕ್ಟ್ ವಸ್ತುಗಳು ಸಮುದ್ರ ಜೀವಿಗಳ ಮೂಲಕ ನಮ್ಮ ಮನೆಗಳಿಗೆ ತಲುಪುತ್ತಿದೆ. ಪ್ಲಾಸ್ಟಿಕ್ ಬಳಕೆ ತಡೆಯುವುದು ಯಾವುದೋ ಒಂದು ಇಲಾಖೆಯ ಕರ್ತವ್ಯವಾಗದೇ, ಪ್ರತೀ ಮನೆಗಳಿಂದಲೂ ಸ್ವಚ್ಚತೆಯ ಪಾಠ ಆರಂಭವಾಬೇಕು.

ಸಮುದ್ರವನ್ನು ತ್ಯಾಜ್ಯ ಮುಕ್ತಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ

-

Ashok Nayak Ashok Nayak Sep 21, 2025 9:52 AM

ಕಾರವಾರ: ಸಮುದ್ರದಲ್ಲಿನ ಪ್ಲಾಸ್ಟಿಕ್ ತ್ಯಾಜ್ಯ(Plastic free Sea) ವನ್ನು ಮೀನು ಮತ್ತಿತರ ಕಡಲ ಜೀವಿಗಳು ಸೇವಿಸುವುದರಿಂದ, ಆಹಾರಕ್ಕಾಗಿ ಇವುಗಳನ್ನು ಉಪಯೋಗಿಸುವ ಮಾನವನ ಆರೋಗ್ಯದ ಮೇಲೆಯೂ ಇದರ ದುಷ್ಪರಿಣಾಮಗಳು ಉಂಟಾಗುತ್ತಿದ್ದು, ಸಮುದ್ರ ಮತ್ತು ಸಮುದ್ರ ತೀರವನ್ನು ಸ್ವಚ್ಛವಾಗಿಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ಹೇಳಿದರು.

ಅವರು ಭಾನುವಾರ ರವೀಂದ್ರನಾಥ್ ಠಾಗೂರ್ ಬೀಚ್ (RavindraNath Tagore Beach)ನಲ್ಲಿ ಭಾರತೀಯ ಕೋಸ್ಟ್ ಗಾರ್ಡ್ (Indian Coast Guard) ವತಿಯಿಂದ, ಅಂತಾರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನ(International Beach Cleanup Day) ದ ಅಂಗವಾಗಿ ಆಯೋಜಿಸಿದ್ದ ಬೀಚ್ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಗತ್ತಿನಲ್ಲಿ ಜೀವಿಗಳ ಉದಯ ಸಮುದ್ರದಿಂದಲೇ ಆಗಿದೆ ಆದರೆ ಪ್ರಸ್ತುತ ಮಾನವನಿಂದಲೇ ಸಮುದ್ರವು ಅತೀ ಹೆಚ್ಚು ಮಲಿನಗೊಳ್ಳುತ್ತಿದೆ. ಸಮುದ್ರಕ್ಕೆ ಸೇರುತ್ತಿರುವ ಮೈಕ್ರೋ ಪ್ಲಾಸಿಕ್ಟ್ ವಸ್ತುಗಳು ಸಮುದ್ರ ಜೀವಿಗಳ ಮೂಲಕ ನಮ್ಮ ಮನೆಗಳಿಗೆ ತಲುಪುತ್ತಿದೆ. ಪ್ಲಾಸ್ಟಿಕ್ ಬಳಕೆ ತಡೆಯುವುದು ಯಾವುದೋ ಒಂದು ಇಲಾಖೆಯ ಕರ್ತವ್ಯವಾಗದೇ, ಪ್ರತೀ ಮನೆಗಳಿಂದಲೂ ಸ್ವಚ್ಚತೆಯ ಪಾಠ ಆರಂಭವಾಬೇಕು. ಸಮುದ್ರ ತೀರವನ್ನು ಮಲಿನಗೊಳಿಸದೇ , ಸ್ವಚ್ಚತೆಯನ್ನು ಕಾಪಾಡಬೇಕು. ಜಿಲ್ಲೆಯಲ್ಲಿ ಸೆಪ್ಟಂಬರ್ 17 ರಿಂದ ಅಕ್ಟೋಬರ್ 2 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ನಡೆಯುತ್ತಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದು ಜಿಲ್ಲೆಯಾದ್ಯಂತ ಸ್ವಚ್ಚತಾ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು.

ಇದನ್ನೂ ಓದಿ: Sirsi News: ಶಿರಸಿಯಲ್ಲಿ ಬಾಲಗೋಪಾಲ ಫೋಟೋ ಸ್ಪರ್ಧೆ-2025; ವಿಜೇತರಿಗೆ ಬಹುಮಾನ ವಿತರಣೆ

ಕಡಲ ತೀರವನ್ನು ಸ್ವಚ್ಛವಾಗಿಡುವ ಕುರಿತಂತೆ ಪ್ರತಿಯೊಬ್ಬರೂ ಪ್ರಮಾಣ ಸ್ವೀಕರಿಸಬೇಕು. ಮನೆಯಲ್ಲಿಯೇ ತ್ಯಾಜ್ಯವನ್ನು ನಿಯಂತ್ರಿಸುವ ಮೂಲಕ ಸ್ವಚ್ಛತೆಯನ್ನು ಕಾಪಾಡಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.

ಕೋಸ್ಟ್ ಗಾರ್ಡ್ ಕಮಾಂಡೆoಟ್ ಕಿರಣ್ ಕುಮಾರ್ ಸಿನ್ಹಾ ಮಾತನಾಡಿ , ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಯಂತ್ರಿಸಿ ಅದಕ್ಕೆ ಪರ್ಯಾಯವಾಗಿರುವ ಇತರೇ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು. ಕಡಲತೀರ ಸ್ವಚ್ಛತೆಯನ್ನು ಕಾಪಾಡುವಲ್ಲಿ ಯುವ ಜನತೆಯ ಪಾತ್ರ ಪ್ರಮುಖ ವಾಗಿದ್ದು, ಸಾರ್ವಜನಿಕರೆಲ್ಲರೂ ಇದರಲ್ಲಿ ಕೈಜೋಡಿಸಬೇಕಿದೆ ಎಂದರು.

ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ನೌಕಾಪಡೆಯ ಅಧಿಕಾರಿ ರಜತ್ ಕುಮಾರ್, ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರವೀಂದ್ರ ತಾಳೇಕರ್, ಗ್ರಾಸಿಂ ಇಂಡಸ್ಟಿಯ ಕುಶ್ ಶರ್ಮಾ , ಕೋಸ್ಟ್ ಗಾರ್ಡ್ ನ ಡೆಪ್ಯುಟಿ ಕಮಾಂಡೆoಟ್ ವಿವೇಕ್ ದೀಕ್ಷಿತ್ ಮತ್ತಿತರರು ಉಪಸ್ಥಿತರಿದ್ದರು.

ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಕೋಸ್ಟ್ ಗಾರ್ಡ್ ಸಿಬ್ಬಂದಿಗಳು, ಮೀನುಗಾರರು ಹಾಗೂ ಸಾರ್ವಜನಿಕರು ಬೀಚ್ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.