ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಚಿವ ಮಂಕಾಳ ವೈದ್ಯ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ರಾಯಪ್ಪ ಹುಲೇಕಲ್ ಕಾಲೇಜ್ ಹತ್ತಿರ ಇಂದು ಇಂದಿರಾ ಕ್ಯಾಂಟಿನ್ ಅನ್ನು ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಸಚಿವ ಮಂಕಾಳ ವೈದ್ಯ, ನಮ್ಮ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ನಗರದ ವಾರ್ಡ್ ಗಳಲ್ಲಿಯೂ ಇದನ್ನು ಮಾಡಲು ನಾವು ಸಿದ್ದರಿದ್ದೇವೆ ಎಂದರು

ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಚಿವ ಮಂಕಾಳ ವೈದ್ಯ

Ashok Nayak Ashok Nayak Aug 25, 2025 4:42 PM

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ರಾಯಪ್ಪ ಹುಲೇಕಲ್ ಕಾಲೇಜ್ ಹತ್ತಿರ ಇಂದು ಇಂದಿರಾ ಕ್ಯಾಂಟಿನ್ ಅನ್ನು ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಸಚಿವ ಮಂಕಾಳ ವೈದ್ಯ, ನಮ್ಮ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ನಗರದ ವಾರ್ಡ್ ಗಳಲ್ಲಿಯೂ ಇದನ್ನು ಮಾಡಲು ನಾವು ಸಿದ್ದರಿದ್ದೇವೆ ಎಂದರು.

ಇದನ್ನೂ ಓದಿ: Indira Canteens: ನಿರ್ಮಾಣ ಕಾರ್ಯ ಮುಗಿದ ಇಂದಿರಾ ಕ್ಯಾಂಟೀನ್‌ಗಳನ್ನು ವಾರದೊಳಗೆ ಆರಂಭಿಸಿ: ಸಿಎಂ ಆದೇಶ

ಶಾಸಕ ಭೀಮಣ್ಣ ನಾಯ್ಕ ಉಪಸ್ಥಿತರಿದ್ದು ಮಾತನಾಡಿ, ಆರುವರ್ಷಗಳ ನೆನೆಗುದಿಗೆ ಬಿದ್ದಿರುವ ಈ ಕ್ಯಾಂಟೀನ್ ಅನ್ನು ಆರಂಭಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದು ನಾವು ಜನಪರ ಈ ಕಾರ್ಯಕ್ಕೆ ಚಾಲನೆ ನೀಡಿದ್ದೇವೆಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಮಾಜಿ ಅಧ್ಯಕ್ಷ ಪ್ರದೀಪ ಶೆಟ್ಟಿ ಉಪಸ್ಥಿತರಿದ್ದರು.