ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MLA Bhimanna Naik: 1.80 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು. ಕ್ಷೇತ್ರದ ಜನತೆಯ ಆಶೀರ್ವಾದ ದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಜನತೆಯ ಸೇವೆ ಮಾಡುವುದು ನನ್ನ ಮುಖ್ಯ ಗುರಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವ ದಲ್ಲಿ ನೀಡಿದ್ದ 5 ಗ್ಯಾರೆಂಟಿಯನ್ನು ಒಂದು ವರ್ಷದಲ್ಲಿ ಪೂರೈಸಿ, ಅಭಿವೃದ್ಧಿಗೂ ಹಣ ನೀಡುತ್ತಿದೆ.

ಶಿರಸಿ ತಾಲೂಕಿನ ವಿವಿಧ ಭಾಗಗಳ ರಸ್ತೆ ಅಭಿವೃದ್ಧಿಗೆ 1.80 ಕೋಟಿ ರೂ. ಅನುದಾನ

Profile Ashok Nayak Apr 7, 2025 4:17 PM

ಶಿರಸಿ: ತಾಲೂಕಿನ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಮಂಜೂರಾದ 1.80 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಭೂಮಿಪೂಜೆ ನೆರವೇರಿಸಿದರು. ತಾಲೂಕಿನ ಕುಳವೆ ಗ್ರಾಮ ಪಂಚಾಯತದ ಅರಸಿಕೇರಿಯ ಮೊಗೇರ ಕೇರಿ ರಸ್ತೆಗೆ 15 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಭೀಮಣ್ಣ, ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿದ್ದ ಆಶ್ವಾಸನೆಯಂತೆ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿಸಿದ್ದೇನೆ. ಶಿರಸಿ ತಾಲೂಕಿನ ವಿವಿಧ ಭಾಗಗಳ ರಸ್ತೆ ಅಭಿವೃದ್ಧಿಗೆ 1.80 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುಣಮಟ್ಟದ ಕೆಲಸ ನಿರ್ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರನಿಗೆ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: Sirsi Breaking: ತಿಂಡಿ ಕೊಡುವುದಾಗಿ ಪುಸಲಾಯಿಸಿ ಪಾಳುಬಿದ್ದ ದೇವಸ್ಥಾನಕ್ಕೆ ಕರೆದೊಯ್ದು ಅತ್ಯಾಚಾರ

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು. ಕ್ಷೇತ್ರದ ಜನತೆಯ ಆಶೀರ್ವಾದ ದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಜನತೆಯ ಸೇವೆ ಮಾಡುವುದು ನನ್ನ ಮುಖ್ಯ ಗುರಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದ್ದ 5 ಗ್ಯಾರೆಂಟಿಯನ್ನು ಒಂದು ವರ್ಷದಲ್ಲಿ ಪೂರೈಸಿ, ಅಭಿವೃದ್ಧಿಗೂ ಹಣ ನೀಡುತ್ತಿದೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ., ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ವ್ಯಕ್ತಿಗೆ ತಿಂಗಳಿಗೆ 15 ಕೆ.ಜಿ ಅಕ್ಕಿ, ಪದವಿ ಪಡೆದ ನಿರುದ್ಯೋಗಿ ಯುವಕರಿಗೆ ಯುವ ನಿಧಿ ಯೋಜನೆಯಲ್ಲಿ ಮಾಸಿಕ 1,500 ರೂ. ನೀಡಲಾಗುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣದ ಜತೆ ಸರ್ಕಾರದ ಸೌಲಭ್ಯ ದೊರಕಿಸಲಾಗುತ್ತಿದೆ ಎಂದರು.

WhatsApp Image 2025-04-07 at 11.02.03

ಕುಳವೆ ಗ್ರಾಪಂ ಸದಸ್ಯ ಸಂದೇಶ ಭಟ್ಟ ಬೆಳಖಂಡ ಮಾತನಾಡಿ, ಅರಸಿಕೇರಿಯ ಮೊಗೇರ ಕೇರಿಯ ರಸ್ತೆಗೆ ನಿರ್ಮಾಣವು ಹಲವು ವರ್ಷದ ಬೇಡಿಕೆಯಾಗಿತ್ತು. ಭೀಮಣ್ಣ ನಾಯ್ಕ ಶಾಸಕರಾಗುವ ಪೂರ್ವದಲ್ಲಿ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ನೀಡು ತ್ತೇನೆ ಎಂಬ ಭರವಸೆ ನೀಡಿದ್ದರು. ಅದರಂತೆ ೧೫ ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿ ನುಡಿದಂತೆ ನಡೆದಿದ್ದಾರೆ. ಅಲ್ಲದೇ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೂ ಸಹಕರಿಸಿ ದ್ದಾರೆ ಎಂದರು.

ಈ ವೇಳೆ ಕುಳವೆ ಗ್ರಾಪಂ ಅಧ್ಯಕ್ಷೆ ರಂಜಿತಾ ಹೆಗಡೆ, ಯಡಳ್ಳಿ ಗ್ರಾಪಂ ಅಧ್ಯಕ್ಷ ಭಾಸ್ಕರ ಶೆಟ್ಟಿ ಗಿಡಮಾವಿನಕಟ್ಟೆ, ಮುಖಂಡ ಎಸ್.ಕೆ.ಭಾಗ್ವತ್, ಘಟಕಾಧ್ಯಕ್ಷ ಎಂ.ಜಿ.ಭಟ್ಟ ಬೆಳಖಂಡ, ಪ್ರಮುಖರಾದ ನಾಗೇಶ ಹೆಗಡೆ ಕೆಂಚಗದ್ದೆ, ರವಿ ಹೆಗಡೆ ಕೆಂಚಗದ್ದೆ ಮತ್ತಿತರರು ಇದ್ದರು. ಬಳಿಕ ಯಡಳ್ಳಿ, ಶಿವಳ್ಳಿ, ದೇವನಹಳ್ಳಿ, ಮಂಜಗುಣಿ ಗ್ರಾಮ ಪಙಚಾಯತ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಕಾಮಗಾರಿಗೆ ಚಾಲನೆ ನೀಡಲಾಯಿತು.

*

ಕ್ಷೇತ್ರದಾದ್ಯಂತ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ತೆಗೆದು ಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಗತ್ಯವಿದ್ದಲ್ಲಿ ಹೆಚ್ಚಿನ ಅನುದಾನ ನೀಡುತ್ತೇನೆ.

-ಭೀಮಣ್ಣ ನಾಯ್ಕ, ಶಾಸಕ