Karnataka Weather: ಆರೆಂಜ್ ಅಲರ್ಟ್; ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!
Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಸೇರಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather) ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನು ನಾಳೆ (ಜುಲೈ 6) ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಆರೆಂಜ್ (Orange alert) ಹಾಗೂ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಬಿರುಸಿನ ಮಳೆಯಾಗುವ ನಿರೀಕ್ಷೆ ಇದೆ.
ಇನ್ನು ಜುಲೈ 6ರಂದು ರಾಯಚೂರು, ವಿಜಯಪುರ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹಾಗೆಯೇ ಬಳ್ಳಾರಿ, ಗದಗ, ಹಾವೇರಿ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಸೇರಿ ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಭಾರಿ ಮಳೆಯಾಗಲಿದೆ.
ಜುಲೈ 7ರಂದು ಕೂಡ ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ರಾಯಚೂರು, ವಿಜಯಪುರ, ಬಳ್ಳಾರಿ, ಗದಗ, ಹಾವೇರಿ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಸೇರಿ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಜುಲೈ 8ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಗುಡುಗುಸಹಿತ ಮಳೆ ಅಬ್ಬರಿಸಲಿದೆ.
ಜುಲೈ 9ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಉತ್ತಮ ಮಳೆಯಾಗಲಿದೆ.
Health Tips: ಹೃದಯದ ಆರೋಗ್ಯಕ್ಕೆ, ತೂಕ ನಿರ್ವಹಣೆಗೆ ಪೂರಕ ಹಲಸಿನ ಹಣ್ಣಿನ ಬೀಜ; ಇದರ ಪ್ರಯೋಜನ ಒಂದೆರಡಲ್ಲ
ಮೀನುಗಾರರಿಗೆ ಎಚ್ಚರಿಕೆ:
ಜುಲೈ 05 ರಿಂದ ಜುಲೈ 9ರವರೆಗೆ ಕರ್ನಾಟಕ ಕರಾವಳಿಯಲ್ಲಿ 40 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಅಲ್ಲದೆ ಭಾರಿ ಅಲೆಗಳು ಏಳುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.