ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Ankola News: ಅಂಕೋಲಾ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೆಸ್ತೀನ್‌ ಧ್ವಜ; ವಶಕ್ಕೆ ಪಡೆದ ಪೊಲೀಸರು

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಘಟನೆ ನಡದಿದೆ. ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪ್ಯಾಲೆಸ್ತೀನ್‌ ಧ್ವಜವನ್ನು ಮುಸ್ಲಿಂ ಯುವಕನೊಬ್ಬ ಪ್ರದರ್ಶನ ಮಾಡಿದ್ದಾನೆ. ಇದಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.ಪೊಲೀಸರು ಯುವಕನಿಂದ ಪ್ಯಾಲೆಸ್ತೀನ್‌ ಧ್ವಜ ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.

‌ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಬುಧವಾರ ಪ್ಯಾಲೆಸ್ತೀನ್‌ ಧ್ವಜ (Palestinian flag) ಹಾರಾಡಿದ್ದು, ಇದಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ. ಪಟ್ಟಣದಲ್ಲಿ (Ankola) ಬುಧವಾರ ಮೆರವಣಿಗೆ ವೇಳೆ ಮುಸ್ಲಿಂ ಯುವಕನೊಬ್ಬ ಪ್ಯಾಲೆಸ್ತೀನ್‌ ಧ್ವಜ ಹಿಡಿದು ಹೋಗುತ್ತಿದ್ದ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪೊಲೀಸರು ಯುವಕನಿಂದ ಪ್ಯಾಲೆಸ್ತೀನ್‌ ಧ್ವಜ ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.

ಕುಡಚಿ ಇರಾನ್ ರಾಷ್ಟ್ರಧ್ವಜ ಹಾರಾಟ; ಕ್ರಮಕ್ಕೆ ಆಗ್ರಹ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಹೊರವಲಯದಲ್ಲಿ ಇರಾನ್ ರಾಷ್ಟ್ರಧ್ವಜ ಹಾರಿಸಿರುವ ಘಟನೆ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ನಡೆದ ಈ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ವಿದೇಶಿ ರಾಷ್ಟ್ರಧ್ವಜ ಹಾರಿಸುವುದು ಕಾನೂನುಬಾಹಿರವಾಗಿದ್ದು, ಇದನ್ನು ಪ್ರಚೋದನಾತ್ಮಕ ಕೃತ್ಯವೆಂದು ಪರಿಗಣಿಸಲಾಗುತ್ತದೆ. ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.