ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bhatkal Tragedy: ಭಟ್ಕಳ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

PM Narendra Modi: ಭಟ್ಕಳ ತಾಲೂಕಿನ ತಟ್ಟಿಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ 14 ಮಂದಿ ನೀರಿನಲ್ಲಿ ಸಿಲುಕಿಕೊಂಡಿದ್ದರು. ಈ ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಒಬ್ಬ ವ್ಯಕ್ತಿ ಕಣ್ಮರೆಯಾಗಿದ್ದಾನೆ. ಆತನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟಿಹಕ್ಕಲು ನದಿ ದುರಂತದಲ್ಲಿ (Bhatkal Tragedy) ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪ್ರಧಾನಿ ಮೋದಿ ಅವರು ಪ್ರತಿಕ್ರಿಯಿಸಿದ್ದು, ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ ಕೇಳಿ ತೀವ್ರ ಆಘಾತವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಮೃತರ ವಾರಸುದಾರರಿಗೆ ಪಿ.ಎಂ.ಎನ್.‌ಆರ್.‌ಎಫ್‌ ವತಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.



ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ

ಭಟ್ಕಳ ದುರ್ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ. ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಅವರು, ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಸಾವು ನೋವುಗಳ ಸುದ್ದಿ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಏನಿದು ದುರ್ಘಟನೆ?

ಭಟ್ಕಳ ತಾಲೂಕಿನ ತಟ್ಟಿಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ 14 ಮಂದಿ ನೀರಿನಲ್ಲಿ ಸಿಲುಕಿಕೊಂಡಿದ್ದರು. ಈ ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಒಬ್ಬ ವ್ಯಕ್ತಿ ಕಣ್ಮರೆಯಾಗಿದ್ದಾನೆ. ಆತನ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.

​ಘಟನೆಯಲ್ಲಿ ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯ ​ಉಮೇಶ ನಾಯ್ಕ (30), ​ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ​ಲಕ್ಷ್ಮಿ ಶಿವರಾಮ ನಾಯ್ಕ (49) , ​ಜ್ಯೋತಿ ನಾಗಪ್ಪ ನಾಯ್ಕ (34) , ​ಮಾಲತಿ ನಾಯ್ಕ (38) , ​ಮಾಸ್ತಮ್ಮ ನಾಯ್ಕ ಸೇರಿ 11 ಮಂದಿ ಮೃತರಾಗಿದ್ದಾರೆ.