#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

PM Narendra Modi: ಯಲ್ಲಾಪುರ ಅಪಘಾತ; 11 ಮಂದಿ ಸಾವಿಗೆ ಪ್ರಧಾನಿ ಮೋದಿ, ಅಮಿತ್‌ ಶಾ ಸಂತಾಪ, ಕೇಂದ್ರದಿಂದ 2 ಲಕ್ಷ ಪರಿಹಾರ

PM Narendra Modi: ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು 2 ಲಕ್ಷ ರೂ. ಘೋಷಿಸಿದೆ.

ಯಲ್ಲಾಪುರ ಅಪಘಾತ; 11 ಮಂದಿ ಸಾವಿಗೆ ಪ್ರಧಾನಿ ಮೋದಿ, ಅಮಿತ್‌ ಶಾ ಸಂತಾಪ, ಕೇಂದ್ರದಿಂದ 2 ಲಕ್ಷ ಪರಿಹಾರ

Profile Prabhakara R Jan 22, 2025 8:18 PM

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟಿರುವುದಕ್ಕೆ (Yellapur accident) ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ.

ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.



ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಉತ್ತರ ಕನ್ನಡದ ಯಲ್ಲಾಪುರದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಮೂಲ್ಯ ಜೀವಗಳು ಬಲಿಯಾಗಿದ್ದು, ಘಟನೆಯಿಂದ ಬಹಳ ದುಃಖವಾಗಿದೆ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು ಹಾಗೂ ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಘೋಷಿಸಿದೆ.



ಎರಡು ಪ್ರತ್ಯೇಕ ಅಪಘಾತಗಳಲ್ಲಿ 14 ಮಂದಿ ಸಾವು; ಮೃತರ ಕುಟುಂಬಕ್ಕೆ 3 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು, ಜ.22: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ (Road Accident) ಮೃತಪಟ್ಟ ಒಟ್ಟು 14 ಜನರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ತಲಾ 3 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಯಲ್ಲಾಪುರದಲ್ಲಿ ಲಾರಿ ಪಲ್ಟಿಯಾಗಿ ಮೃತಪಟ್ಟ 10 ಮಂದಿ ಹಾಗೂ ರಾಯಚೂರಿನ ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ 4 ಮಂದಿ ಮೃತಪಟ್ಟಿರುವುದಕ್ಕೆ ಸಿಎಂ ಸಂತಾಪ ಸೂಚಿಸಿ, ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಅವರು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.