ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಹೊನ್ನಾವರದ ಮಂಕಿ ಠಾಣೆ ಪಿಎಸ್‌ಐ ಬಂಧನ

ಯಲ್ಲಾಪುರ ಮೂಲದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಂಕಿ ಠಾಣೆ ಪಿಎಸ್‌ಐ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಭಟ್ಕಳ ನಗರ ಠಾಣೆ ಪೊಲೀಸರು, ಪಿಎಸ್‌ಐ ಅಭಿನಂದನ್ ಅವರನ್ನು ಬಂಧಿಸಿದ್ದಾರೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಪಿಎಸ್‌ಐ ಬಂಧನ

-

Prabhakara R
Prabhakara R Jul 5, 2026 3:11 PM

ಕಾರವಾರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿ ಠಾಣೆಯ ಪಿಎಸ್‌ಐ ಅಭಿನಂದನ್ ಗೌಡ (PSI Abhinandan Gowda) ಅವರನ್ನು ಬಂಧಿಸಲಾಗಿದೆ. 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಭಟ್ಕಳಕ್ಕೆ ಕರೆತಂದು ಲಾಡ್ಜ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಂತ್ರಸ್ತ ಬಾಲಕಿ ದೂರಿನ ಮೇಲೆ ಪಿಎಸ್‌ಐನ ಅರೆಸ್ಟ್‌ ಮಾಡಲಾಗಿದೆ.

ಬಂಧಿತ ಪಿಎಸ್‌ಐ ಅಭಿನಂದನ್‌ ಗೌಡ ರಾಮನಗರ ಜಿಲ್ಲೆಯ ಕನಕಪುರ ಮೂಲದವರು. ಕೆಲವು ತಿಂಗಳ ಹಿಂದೆಯಷ್ಟೇ ಮಂಕಿ ಠಾಣೆಗೆ ಎಲ್‌ಎನ್‌ಓ ಆಗಿ ವರ್ಗಾವಣೆಗೊಂಡಿದ್ದರು. ಆರೋಪಿಯನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ವಿಜಯಪುರದಲ್ಲಿ ರಾಡ್‌ನಿಂದ ಹೊಡೆಯ ವ್ಯಕ್ತಿಯ ಭೀಕರ ಕೊಲೆ

ವಿಜಯಪುರ: ಸ್ನೇಹಿತರೊಂದಿಗೆ ಸೇರಿ ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ಸಂಭವಿಸಿದೆ. ನಗರದ ಚಪ್ಪರಬಂದ್ ಗಲ್ಲಿಯ ನಿವಾಸಿ ಉಮರ್ ಸಾಬ್ ಪಟೇಲ್ (36) ಕೊಲೆಯಾದ ವ್ಯಕ್ತಿ.

ಆರೋಪಿಗಳು ಉಮರ್ ಸಾಬ್‌ನನ್ನು ಕಬ್ಬಿಣದ ರಾಡ್‌ನಿಂದ ಮನಬಂದಂತೆ ಥಳಿಸಿದ್ದಾರೆ. ಅಷ್ಟಕ್ಕೇ ನಿಲ್ಲದ ಹಂತಕರು ಸ್ಕ್ರೂ ಡ್ರೈವರ್‌ನಿಂದ ಆತನ ದೇಹದ ಹಲವು ಭಾಗಗಳಿಗೆ ಬೇಕಾಬಿಟ್ಟಿ ಚುಚ್ಚಿ ಅತ್ಯಂತ ಅಮಾನುಷವಾಗಿ ಕೊಂದಿದ್ದಾರೆ.

ಮೂಲಗಳ ಪ್ರಕಾರ, ಚಪ್ಪರಬಂದ್ ಗಲ್ಲಿಯ ನಿರ್ಜನ ಪ್ರದೇಶದಲ್ಲಿ ಉಮರ್ ಸಾಬ್ ಪಟೇಲ್ ಹಾಗೂ ಆತನ ಪರಿಚಯಸ್ಥರು ಸೇರಿ ತಡರಾತ್ರಿ ಪಾರ್ಟಿ ಆಯೋಜಿಸಿದ್ದರು. ಆರಂಭದಲ್ಲಿ ನಗುವಿನಿಂದಲೇ ಕೂಡಿದ್ದ ಪಾರ್ಟಿ, ಸಮಯ ಕಳೆದಂತೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಯಾವುದೋ ಹಳೆಯ ದ್ವೇಷ ಅಥವಾ ಪಾರ್ಟಿ ವೇಳೆ ನಡೆದ ಮಾತಿನ ಚಕಮಕಿ ಜೋರಾಗಿ, ಕೊನೆಯಲ್ಲಿ ಅದು ರಕ್ತಪಾತಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಲಾಗುತ್ತಿದೆ.

ವಿಜಯನಗರ ಕ್ಲಬ್ ಮಾಜಿ ಕಾರ್ಯದರ್ಶಿ ನಾಗಚಂದ್ರ ಸಾವು ಪ್ರಕರಣಕ್ಕೆ ಹೊಸ ತಿರುವು: ಪತ್ನಿ ವಿರುದ್ಧ ಎಫ್‌ಐಆರ್

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ವಿಜಯಪುರ ನಗರ ಠಾಣೆಯ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.