Road Accident: ಕಾರು ಪಲ್ಟಿಯಾಗಿ ಇಬ್ಬರು ಸಾವು; ಕೊನೆಯ ದಿನವಾದ ಹೊಸ ವರ್ಷದ ಮೊದಲ ದಿನ
Road Accident: ಕಾರು ಪಲ್ಟಿಯಾಗಿ ಇಬ್ಬರು ಸಾವು; ಕೊನೆಯ ದಿನವಾದ ಹೊಸ ವರ್ಷದ ಮೊದಲ ದಿನ
ಹರೀಶ್ ಕೇರ
January 1, 2025
ರಾಮನಗರ : ಹೊಸ ವರ್ಷದ ದಿನವೇ ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ (Road Accident) ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರ (Ramanagara News) ಜಿಲ್ಲೆಯಲ್ಲಿ ನಡೆದಿದೆ.
ರಾಮನಗರ ಜಿಲ್ಲೆಯ ತಾವರಕೆರೆ ರಸ್ತೆ ಬಳಿ ಟೀ ಕುಡಿಯಲು ಹೋಗಿದ್ದ ವೇಳೆ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಮಂಜು, ಕಿರಣ್ ಎಂದು ಗುರುತಿಸಲಾಗಿದೆ.
ಇಂದು ನಸುಕಿನ ಜಾವ 3 ಗಂಟೆಗೆ ಅಪಘಾತ ಸಂಭವಿಸಿದ್ದು, ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಉತ್ತರ ಕನ್ನಡದಲ್ಲಿ ಹಾವು ಕಚ್ಚಿ ಬಾಲಕಿ ಸಾವು
ಕಾರವಾರ: ಅಂಗನವಾಡಿಯಲ್ಲಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಹಾವು ಕಚ್ಚಿ (Snkae bite) 4 ವರ್ಷದ ಬಾಲಕಿ ಸಾವನ್ನಪ್ಪಿರುವ (child death) ಘಟನೆ ಉತ್ತರ ಕನ್ನಡ (Uttara Kannada news) ಜಿಲ್ಲೆಯ ಮುಂಡಗೋಡ ಮಾರಿಕಾಂಬಾ ನಗರದ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ನಿನ್ನೆ ಬೆಳಗ್ಗೆ 10.30 ರ ಸುಮಾರಿಗೆ ಹೊರಗೆ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆ ತೆರಳುವ ಮಾರ್ಗದಲ್ಲಿ ಮಗುವಿನ ಕಾಲಿಗೆ ಹಾವು ಕಚ್ಚಿದೆ. ನಂತರ ಮಗುವನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್‌ನಲ್ಲಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯವೇ ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.