ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ, ಒಬ್ಬ ವಿದ್ಯಾರ್ಥಿ ಸಾವು, 26 ಮಕ್ಕಳಿಗೆ ಗಾಯ

Uttara Kannada News: ಮೈಸೂರಿನ (Mysuru) ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಉತ್ತರ ಕನ್ನಡದ ಹೊನ್ನಾವರದ ಬಳಿಯ ಸುಳೆ ಮುರ್ಕಿ ಕ್ರಾಸ್ ಬಳಿ ಬಸ್‌ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಕನ್ನಡದಲ್ಲಿ ಶಾಲಾ ಮಕ್ಕಳ ಪ್ರವಾಸದ ಬಸ್‌ ಅಪಘಾತ

ಕಾರವಾರ, ಡಿ.1: ಉತ್ತರ ಕನ್ನಡ ಜಿಲ್ಲೆಯ (Uttara Kannada) ಹೊನ್ನಾವರದ (Honnavar) ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ (road Accident) ಪಲ್ಟಿಯಾಗಿದೆ. ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ. ಮೈಸೂರಿನ (Mysuru) ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳ ಪ್ರವಾಸ ದುರಂತದಲ್ಲಿ ಕೊನೆಗೊಂಡಿದೆ.

ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.

ಮೈಸೂರಿನ (Mysuru) ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಉತ್ತರ ಕನ್ನಡದ ಹೊನ್ನಾವರದ ಸಮೀಪದ ಸುಳೆ ಮುರ್ಕಿ ಕ್ರಾಸ್ ಬಳಿ ಬಸ್‌ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಡುಪಿ ಅಪಘಾತ; ಟೆಂಪೋ ಪಲ್ಟಿಯಾಗಿ ಐವರ ದುರ್ಮರಣ

ಬೆಂಗಳೂರು – ಚೆನ್ನೈ ಹೈವೇಯಲ್ಲಿ ಸರಣಿ ಅಪಘಾತ, ಐವರಿಗೆ ತೀವ್ರ ಗಾಯ

ಆನೇಕಲ್: ಹೊಸೂರು ಸಮೀಪದ ಪೆರಂಡಪಲ್ಲಿಯ ಬೆಂಗಳೂರು – ಚೆನ್ನೈ ಹೈವೇಯಲ್ಲಿ (Bengaluru-Chennai Highway) ಲಾರಿ ಹಾಗೂ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ (Accident) ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಿಂದ ಸಂಪೂರ್ಣವಾಗಿ ಕಾರುಗಳು ನಜ್ಜುಗುಜ್ಜಾಗಿವೆ.

ಮುಸುಕಿದ ಮಂಜಿನ ಪರಿಣಾಮ ರಸ್ತೆ ಸರಿಯಾಗಿ ಕಾಣಿಸದೆ ಇದ್ದುದರಿಂದ ಅಪಘಾತ ಸಂಭವಿಸಿರಬಹುದು ಎಂದು ತರ್ಕಿಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಕ್ರೇನ್ ಮೂಲಕ ಕಾರುಗಳನ್ನ ರಸ್ತೆಯಿಂದ ತೆರವು ಮಾಡಿದ್ದಾರೆ. ಗಾಯಾಳುಗಳನ್ನ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಕರ ಅಪಘಾತ, ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ಸಾವು

ಹರೀಶ್‌ ಕೇರ

View all posts by this author