Self Hraming: ಮದುವೆಯಾಗಲು ಒಪ್ಪದ ಯುವತಿ, ಪುರೋಹಿತ ಆತ್ಮಹತ್ಯೆ
ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇದೇ ಊರಿನ ಯುವತಿಯೊಂದಿಗೆ ಪ್ರೀತಿ ಹೊಂದಿದ್ದ ಎನ್ನಲಾಗಿದೆ. ಈ ಸಂಬಂಧವನ್ನು ವಿವಾಹವಾಗಿ ಮುಂದುವರಿಸಲು ಯುವಕ ಆಕೆಯ ಮೇಲೆ ಒತ್ತಾಯ ಹಾಕಿದ್ದಾನೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ.
ಮೃತ ಪವನ್ ಭಟ್ -
ಕಾರವಾರ, ಜ.07: ಉತ್ತರ ಕನ್ನಡದ (Uttara Kannada) ಅಂಕೋಲದಲ್ಲಿ ಪ್ರೀತಿಸಿದ (Love) ಯುವತಿ ವಿವಾಹಕ್ಕೆ (Marriage) ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ನಡೆದಿದೆ. ಅಂಕೋಲಾ (Ankola) ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆ ಮಾಡಿಕೊಂಡವನು ಪವನ್ ಭಟ್ (24) ಎಂಬ ಯುವಕನಾಗಿದ್ದಾನೆ.
ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇದೇ ಊರಿನ ಯುವತಿಯೊಂದಿಗೆ ಪ್ರೀತಿ ಹೊಂದಿದ್ದ ಎನ್ನಲಾಗಿದೆ. ಈ ಸಂಬಂಧವನ್ನು ವಿವಾಹವಾಗಿ ಮುಂದುವರಿಸಲು ಯುವಕ ಆಕೆಯ ಮೇಲೆ ಒತ್ತಾಯ ಹಾಕಿದ್ದಾನೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ. ಈ ನಿರಾಕರಣೆಯಿಂದ ಮನನೊಂದ ಪವನ್ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಮಾಹಿತಿ ಪಡೆದ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
ತುಮಕೂರು: ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ (Self Harming) ಘಟನೆ ತಾಲೂಕಿನ (Tumkur news) ಕ್ಯಾತಸಂದ್ರದ ಬಳಿ ಇರುವ ಸಿಂಗೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮಿ (26), ಮಕ್ಕಳಾದ ಚೈತನ್ಯ (6) ಚೇತನ್ (5) ಸಾವನ್ನಪ್ಪಿರುವ ದುರ್ದೈವಿಗಳು. ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ.
ಇಬ್ಬರು ಮಕ್ಕಳನ್ನ ಮೊದಲ ಸಂಪ್ ಗೆ ತಳ್ಳಿದ ತಾಯಿ ವಿಜಯಲಕ್ಷ್ಮೀ ಬಳಿಕ ತಾನೂ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿ ಶವವಾಗಿ ಪತ್ತೆ; ಮಾಜಿ ಗೆಳೆಯನೇ ಹತ್ಯೆ ಮಾಡಿ ಭಾರತಕ್ಕೆ ಪರಾರಿಯಾಗಿರುವ ಶಂಕೆ
ಸಿಂಗೋನಹಳ್ಳಿ ಗ್ರಾಮದಲ್ಲಿ ಮೃತ ವಿಜಯಲಕ್ಷ್ಮಿ ಕುಟುಂಬ ನೆಲಸಿತ್ತು. ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಒಟ್ಟಿಗೆ ಜೀವನ ಮಾಡುತ್ತಿದ್ದರು. ಆದರೆ ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ವಿಜಯಲಕ್ಷ್ಮೀ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರು ಮಕ್ಕಳನ್ನು ನೀರಿನ ಸಂಪ್ಗೆ ತಳ್ಳಿ ಬಳಿಕ ತಾನೂ ಸಂಪ್ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಇಡೀ ಸಿಂಗೋನಹಳ್ಳಿಯನ್ನೇ ಬೆಚ್ಚಿ ಬೀಳಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನೀರಿನ ಸಂಪ್ ನಿಂದ ಮೃತ ದೇಹಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮೇಲೆತ್ತಿದ್ದಾರೆ.