Sirsi Bus Accident: ಶಿರಸಿ ಬಳಿ ಕೆಎಸ್‌ಆರ್‌ಟಿಸಿ- ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಸ್ತೆಯ ಕೊಳಗಿಬೀಸ್ ಬಳಿ ಅಪಘಾತ ನಡೆದಿದೆ. ಗಾಯಾಳುಗಳನ್ನು ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿರಸಿ-ಕುಮಟಾ ರಸ್ತೆಯ ಕೊಳಗಿಬೀಸ್ ಬಳಿ ಬಸ್‌ಗಳ ಅಪಘಾತ. -
ಕಾರವಾರ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಸ್ತೆಯ ಕೊಳಗಿಬೀಸ್ ಬಳಿ ನಡೆದಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಅಪಘಾತ ನಡೆದಿದೆ.
ಗಾಯಾಳುಗಳನ್ನು ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಡಿಕ್ಕಿಯಾದ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇದರಿಂದ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು.
ಚಿಕ್ಕಬಳ್ಳಾಪುರದಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ನವವಿವಾಹಿತೆ ಸಾವು, ಪತಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ಮುಂದೆ ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಹೊಡೆದಿದೆ. ಪರಿಣಾಮ ಇಬ್ಬರು ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಶೆಟ್ಟಿಗೆರೆ ಕ್ರಾಸ್ ಬಳಿ ಇಂದು ನಡೆದಿದೆ.
ರಕ್ಷಿತಾ ರೆಡ್ಡಿ (23), ಪವನ್ ರೆಡ್ಡಿ (30) ಮೃತಪಟ್ಟವರು. ರಕ್ಷಿತಾ ರೆಡ್ಡಿ ಪತಿ ರಾಜಶೇಖರ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ರಕ್ಷಿತಾ ರೆಡ್ಡಿ (23) ಮತ್ತು ರಾಜಶೇಖರ್ ರೆಡ್ಡಿ ಕಳೆದ 5 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಇದೀಗ ಅಪಘಾತದಲ್ಲಿ ಪತ್ನಿ ಕೊನೆಯುಸಿರೆಳೆದಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ರಾಜಶೇಖರ್ ರೆಡ್ಡಿ, ನವೆಂಬರ್ ತಿಂಗಳಲ್ಲಿ ರಕ್ಷಿತಾ ರೆಡ್ಡಿಯನ್ನ ಮದುವೆಯಾಗಿದ್ದರು. ಇಬ್ಬರೂ ಬೆಂಗಳೂರಿನಲ್ಲಿ ವಾಸವಾಗಿದ್ದರು. ಸ್ನೇಹಿತ ಪವನ್ ರೆಡ್ಡಿ ಜತೆ ದಂಪತಿ ಹಿಂದೂಪುರದ ಅವಳಗಿ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.