ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Guest Teachers: ಅತಿಥಿ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಿ; ಶಿರಸಿ ಶೈಕ್ಷಣಿಕ ಜಿಲ್ಲಾಧ್ಯಕ್ಷೆ ರಿಹಾನಾ ಶೇಖ್ ಆಗ್ರಹ

Sirsi News: ಪ್ರತಿ ವರ್ಷ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮೆರಿಟ್ ಪದ್ಧತಿ ಕೈಬಿಟ್ಟು ಮೊದಲು ಕಾರ್ಯ ನಿರ್ವಹಿಸಿದವರಿಗೆ ಮೊದಲ ಆದ್ಯತೆ ನೀಡಬೇಕು. ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳ, ಸೇವಾಭದ್ರತೆ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘದ ಶಿರಸಿ ಶೈಕ್ಷಣಿಕ ಜಿಲ್ಲಾಧ್ಯಕ್ಷೆ ರಿಹಾನಾ ಶೇಖ್ ಒತ್ತಾಯಿಸಿದ್ದಾರೆ.

ಶಿರಸಿ: ಪ್ರತಿ ವರ್ಷ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮೆರಿಟ್ ಪದ್ಧತಿ ಕೈಬಿಟ್ಟು ಮೊದಲು ಕಾರ್ಯ ನಿರ್ವಹಿಸಿದವರಿಗೆ ಮೊದಲ ಆದ್ಯತೆ ನೀಡಬೇಕು. ಗೌರವ ಧನ ಹೆಚ್ಚಳ, ಅತಿಥಿ ಶಿಕ್ಷಕರ ಸೇವಾ ಭದ್ರತೆ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅ.5ರಂದು ಶಿರಸಿಯ ಅಂಬೇಡ್ಕರ್‌ ಭವನದಲ್ಲಿ ಅತಿಥಿ ಶಿಕ್ಷಕರ ಜಿಲ್ಲಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘದ ಶಿರಸಿ ಶೈಕ್ಷಣಿಕ ಜಿಲ್ಲಾಧ್ಯಕ್ಷೆ ರಿಹಾನಾ ಶೇಖ್ ಹೇಳಿದರು.

ಶಿರಸಿಯ (Sirsi News) ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಿಕ್ಷಕರಂತೆ ಬೇಸಿಗೆಯ ರಜೆಯನ್ನು ಸೇರಿ 12 ತಿಂಗಳು ವೇತನವನ್ನು ನೀಡುವುದರ ಜತೆಗೆ ಸೇವೆಯ-ಮುಂದುವರಿಸಿ ನೇಮಕಾತಿಯಲ್ಲಿ ಪ್ರತಿ ವರ್ಷ 5% ಕೃಪಾಂಕ ನೀಡಬೇಕು. ವೇತನವನ್ನು ಹೆಚ್ಚಿಸುವುದು ಮತ್ತು ಸರ್ಕಾರವು ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸಿ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ನೀಡಬೇಕು.



ಅತಿಥಿ ಶಿಕ್ಷಕರಿಗೆ ದೆಹಲಿ, ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶ ಸರ್ಕಾರಗಳು ಕೈಗೊಂಡ ನಿರ್ಣಯಗಳನ್ನು ನಮ್ಮ ಸರ್ಕಾರವು ಕೈಗೊಂಡು ಅತಿಥಿ ಶಿಕ್ಷಕರನ್ನು ಕಾಯಂಗೊಳಿಸಬೇಕು. ಪ್ರತಿ ವರ್ಷ ಸೇವೆ ಸಲ್ಲಿಸಿದ ಶಾಲೆಗಳಲ್ಲಿ ಪ್ರತಿವರ್ಷ ಸೇವಾ ಪ್ರಮಾಣ ಪತ್ರವನ್ನು ನೀಡಬೇಕು.

ಸರ್ಕಾರಿ ಶಿಕ್ಷಕರಂತೆ ಅತಿಥಿ ಶಿಕ್ಷಕ/ಶಿಕ್ಷಕಿಯರಿಗೆ ಎಲ್ಲಾ ಸೌಲಭ್ಯಗಳು ದೊರಕಬೇಕು. ಪ್ರತಿ ತಿಂಗಳ ಅತಿಥಿ ಶಿಕ್ಷಕರಿಗೆ ವೇತನವನ್ನು ನೇರವಾಗಿ ಅತಿಥಿ ಶಿಕ್ಷಕರ ಖಾತೆಗೆ ಜಮಾ ಮಾಡಬೇಕು. ಅತಿಥಿ ಶಿಕ್ಷಕ ಎಂಬ ಪದವನ್ನು ತೆಗೆದುಹಾಕಿ ಗೌರವ ಅರೆಕಾಲಿಕ ಶಿಕ್ಷಕ ಎಂದು ನಮೂದಿಸಬೇಕು. ಕಾಯಂ ಶಿಕ್ಷಕರಂತೆ ನಮಗೂ ಸ್ಥಾನಮಾನ ಹಾಗೂ ವಿವಿಧ ತರಬೇತಿಗಳಿಗೆ ಅವಕಾಶ ನೀಡಬೇಕು ಮತ್ತು ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಅತಿಥಿ ಶಿಕ್ಷಕರ ಹಾಜರಾತಿಯನ್ನು ಸೇರ್ಪಡೆಗೊಳಿಸಬೇಕು.

ಈ ಸುದ್ದಿಯನ್ನೂ ಓದಿ | EMRS Recruitment 2025: ಏಕಲವ್ಯ ಮಾಡೆಲ್‌ ರೆಸಿಡೆಯ್ಶಿಯಲ್‌ ಸ್ಕೂಲ್‌ನಲ್ಲಿದೆ 7,267 ಹುದ್ದೆ; ಎಸ್‌ಎಸ್‌ಎಲ್‌ಸಿ ಪಾಸಾದವರು ಅಪ್ಲೈ ಮಾಡಿ

ಅತಿಥಿ ಶಿಕ್ಷಕ/ಶಿಕ್ಷಕಿಯರಿಗೆ ಜೀವ ವಿಮೆ ಸೌಲಭ್ಯ ಒದಗಿಸಬೇಕು. ಹೆಚ್ಚುವರಿ ಶಿಕ್ಷಕರು ಬಂದಾಗ ಅತಿಥಿ ಶಿಕ್ಷಕರನ್ನು ಕೈ ಬಿಡದೆ ಬದಲಿ ವ್ಯವಸ್ಥೆ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ದರ್ಶನ್ ಮರಾಠೆ, ಶಹನಾಜ್ ಶೇಖ್ ಉಪಸ್ಥಿತರಿದ್ದರು.‌