ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sirsi News: ಶಿರಸಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಶಿರಸಿ ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ರಸ್ತೆ ಗುಂಡಿ ಮುಚ್ಚುವುದು, ಬಸ್ ಸಮಸ್ಯೆ, ಮಳೆ ಮಾಪನ ಯಂತ್ರ ದುರಸ್ತಿ ಸೇರಿದಂತೆ ಸಾರ್ವಜನಿಕರ ಮೂಲಭೂತ ಸೌಕರ್ಯದ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ, ಗುರುವಾರ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನೂರಾರು ಜನರು ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನಾ ಧರಣಿ ನಡೆಸಿದರು.

ಶಿರಸಿ: ಶಿರಸಿ ನಗರ ಮತ್ತು ಗ್ರಾಮಾಂತರ ಭಾಗದಲ್ಲಿ (Sirsi News) ರಸ್ತೆ ಗುಂಡಿ ಮುಚ್ಚುವುದು, ಬಸ್ ಸಮಸ್ಯೆ, ಮಳೆ ಮಾಪನ ಯಂತ್ರ ದುರಸ್ತಿ ಸೇರಿದಂತೆ ಸಾರ್ವಜನಿಕರ ಮೂಲಭೂತ ಸೌಕರ್ಯದ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ, ಗುರುವಾರ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನೂರಾರು ಜನರು ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನಾ ಧರಣಿ ನಡೆಸಿ, ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.

ಅನಂತಮೂರ್ತಿ ಹೆಗಡೆ ಮಾತನಾಡಿ, ʼʼಶಿರಸಿಯಲ್ಲಿ ಪ್ರತಿದಿನ ಸಾರ್ವಜನಿಕರು ರಸ್ತೆಯಲ್ಲಿನ ಗುಂಡಿಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಳ್ಳುತ್ತಿದ್ದಾರೆ. ಬಸ್‌ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿವೆ. ಪದೇ ಪದೆ ಬಸ್ ಅಪಘಾತಗಳು ಸಂಭವಿಸುತ್ತಿವೆ. ಇದು ಯಾರೊಬ್ಬರ ಹೋರಾಟ ಅಲ್ಲ, ಯಾವ ಪಕ್ಷದ ಹೋರಾಟವಲ್ಲ, ಇದು ಜನಪರವಾದ ಹೋರಾಟ. ಸಮಸ್ಯೆ ಬಗೆಹರಿಸುವಂತೆ ನಾವೆಲ್ಲರೂ ಶಾಸಕರನ್ನು ಈ ಮೂಲಕ ಆಗ್ರಹಿಸುತ್ತೇವೆʼʼ ಎಂದು ತಿಳಿಸಿದರು.

ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷೆ ಉಷಾ ಹೆಗಡೆ ಮಾತನಾಡಿ, ʼʼಶಿರಸಿ ತಾಲೂಕಿನಲ್ಲಿ ಗ್ರಾಮೀಣ ಹಾಗೂ ನಗರದ ರಸ್ತೆಗಳು ಓಡಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ದಿನದಿಂದ ದಿನಕ್ಕೆ ಈ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಕೂಡಲೇ ರಸ್ತೆಗಳನ್ನು ದುರಸ್ತಿಪಡಿಸಬೇಕು. ಕೆಎಸ್‌ಆರ್‌ಟಿಸಿ ಬಸ್‌ಗಳನ್ನೂ ಸರಿಯಾದ ಸಮಯಕ್ಕೆ ಬಿಡುವ ಮತ್ತು ಸರಿಯಾಗಿ ನಿರ್ವಹಣೆ ಮಾಡುವ ಕೆಲಸವನ್ನು ಮಾಡಬೇಕು. ಬೆಳೆ ವಿಮೆ ರೈತರಿಗೆ ಸರಿಯಾಗಿ ಸಿಗಲು ಮಳೆಮಾಪನ ಯಂತ್ರವನ್ನು ಸರಿಪಡಿಸಬೇಕುʼʼ ಎಂದು ಆಗ್ರಹಿಸಿದರು.

ಬಿಜೆಪಿಯ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಹಾದಿಮನಿ, ಸಾಮಾಜಿಕ ಮುಖಂಡ ರಾಮು ಕಿಣಿ, ಹುತ್ಗಾರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ನಾಯ್ಕ, ಹಿರಿಯ ಹೋರಾಟಗಾರ ಜಯಶೀಲ ಗೌಡರ್, ಯುವ ಮುಖಂಡ ಮಂಜುನಾಥ ಪಾಟೀಲ್ ದಾಸನಕೊಪ್ಪ ಮತ್ತಿತರರು ಮಾತನಾಡಿದರು.‌

ಈ ಸುದ್ದಿಯನ್ನೂ ಓದಿ | CSA Recruitment 2025: ದೇಶಾದ್ಯಂತ ಬರೋಬ್ಬರಿ 10,277 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ IBPS; ಪದವಿ ಪೂರೈಸಿದವರು ಅಪ್ಲೈ ಮಾಡಿ

ಮುಖಂಡರಾದ ಅನಿಲ ಕರಿ, ಚಂದ್ರಕಾಂತ ಹೆಗಡೆ ಕೊಳಗಿಬೀಸ್, ರವಿ ಹೆಗಡೆ ಹಳದೋಟ, ಪವಿತ್ರ ಹೊಸುರು, ಅನಸೂಯಾ ಕಡಬಾಳ, ಜಿ.ವಿ.ಹೆಗಡೆ ಓಣಿಕೇರಿ, ಪ್ರಭಾವತಿ ಗೌಡ, ದೀಪಾ‌ ನಾಯ್ಕ, ರಾಮು ಕಿಣಿ, ವಿ.ಎಂ. ಹೆಗಡೆ ಕಬ್ಬೆ, ನಾಗೇಂದ್ರ ತೆಪ್ಪಾರ್, ವಿಶ್ವನಾಥ ಬನವಾಸಿ, ಸಂತೋಷ ಗೌಡರ್, ಆದರ್ಶ ಪೈ, ಗಿರೀಶ ಸೋವಿನಕೊಪ್ಪ, ನಿರ್ಮಲಾ ಶೆಟ್ಟಿ ರಾಜು ಹೆಗಡೆ ಸೇರಿದಂತೆ 250ಕ್ಕೂ ಅಧಿಕ ಪ್ರಮುಖರು ಭಾಗಿಯಾಗಿದ್ದರು.