ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಶಿರಸಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಶ್ರೀ ಮಾರಿಕಾಂಬಾ ದೇವಿ ರಥೋತ್ಸವ

Sirsi News: ಶಿರಸಿಯ ಅಧಿದೇವತೆ ಶ್ರೀ ಮಾರಿಕಾಂಬಾ ದೇವಿಯ ದ್ವೈವಾರ್ಷಿಕ ಮಾರಿಹಬ್ಬ ಬುಧವಾರ ಅತ್ಯಂತ ಸಡಗರ-ಸಂಭ್ರಮದಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರ ಹರ್ಷೋದ್ಗಾರಗಳ ನಡುವೆ ಅದ್ಧೂರಿ ರಥೋತ್ಸವ ಜರುಗಿತು. ಇಂದಿನಿಂದ ಆರಂಭಗೊಂಡು ಮುಂದಿನ ಒಂಬತ್ತು ದಿನಗಳ ಕಾಲ ದೇವಿಯು ಗದ್ದುಗೆಯ ಮೇಲೆ ವಿರಾಜಮಾನಳಾಗಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ.

ಶಿರಸಿಯ ಶ್ರೀ ಮಾರಿಕಾಂಬಾ ದೇವಿ ರಥೋತ್ಸವ

ಶಿರಸಿ, ಫೆ.25: ಉತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶಿರಸಿಯಲ್ಲಿ ಅಧಿದೇವತೆ ಶ್ರೀ ಮಾರಿಕಾಂಬಾ ದೇವಿಯ (Sirsi Sri Marikamba Devi) ದ್ವೈವಾರ್ಷಿಕ ಮಾರಿಹಬ್ಬ ಬುಧವಾರ ಅತ್ಯಂತ ಸಡಗರ-ಸಂಭ್ರಮದಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರ ಹರ್ಷೋದ್ಗಾರಗಳ ನಡುವೆ ಬುಧವಾರ ಬೆಳಗ್ಗೆ ಅದ್ಧೂರಿ ರಥೋತ್ಸವ ಜರುಗಿದ್ದು, ತಾಯಿ ಮಾರಿಕಾಂಬೆ ವೈಭವದಿಂದ ಇಂದು ಗದ್ದುಗೆ ಏರಿದ್ದಾಳೆ. ಮಾರ್ಚ್‌ 3ರವರಗೆ ದೇವಿ ಗದ್ದುಗೆಯಲ್ಲಿ ಭಕ್ತರಿಗೆ ದರುಶನ ನೀಡಲಿದ್ದಾಳೆ.

ಅಲಂಕೃತಗೊಂಡ ಬೃಹತ್ ರಥದಲ್ಲಿ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ, ಮಾರುಕಟ್ಟೆಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಭಕ್ತರು ಹಣ್ಣು-ಕಾಯಿ ಅರ್ಪಿಸಿ ದೇವಿಯ ಕೃಪೆಗೆ ಪಾತ್ರರಾದರು.

ರಥಬೀದಿಯ ಮೂಲಕ ಸಾಗಿದ ಮೆರವಣಿಗೆಯು ಅಂತಿಮವಾಗಿ ನಗರದ ಬಿಡ್ಕಿ ಬೈಲಿನ ಜಾತ್ರಾ ಗದ್ದುಗೆಯನ್ನು ತಲುಪಿತು. ಅಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ದೇವಿಯನ್ನು ಗದ್ದುಗೆ ಏರಿಸಲಾಯಿತು.

Sirsi Marikamba Jatre 2026: ಶಿರಸಿ ಮಾರಿಕಾಂಬಾ ಜಾತ್ರೆ ಹಿನ್ನೆಲೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು; ಇಲ್ಲಿದೆ ವೇಳಾಪಟ್ಟಿ

ರಾಜ್ಯದ ವಿವಿಧ ಮೂಲೆಗಳಿಂದ ಮಾತ್ರವಲ್ಲದೆ ನೆರೆರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸಿದ್ದು, ಶಿರಸಿ ನಗರವು ಜಗಮಗಿಸುವ ವಿದ್ಯುತ್ ದೀಪಗಳಿಂದ ಶೃಂಗಾರಗೊಂಡು ಹಬ್ಬದ ವಾತಾವರಣ ತುಂಬಿ ತುಳುಕುತ್ತಿದೆ. ಇಂದಿನಿಂದ ಆರಂಭಗೊಂಡು ಮುಂದಿನ ಒಂಬತ್ತು ದಿನಗಳ ಕಾಲ ದೇವಿಯು ಗದ್ದುಗೆಯ ಮೇಲೆ ವಿರಾಜಮಾನಳಾಗಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ.