ಶಿರಸಿ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ಅಬ್ದುಲ್ ರಜಾಕ್ ಅಬ್ದುಲ್ ಮುನಾಫ್ ಬಾಗಲಕೋಟೆ (30) ಬಂಧಿತ ವ್ಯಕ್ತಿ. ಈತ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಗಾಂಜಾ ಖರೀದಿಸಿ, ಅಕ್ರಮವಾಗಿ ಶಿರಸಿಗೆ ಸಾಗಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಶಿರಸಿಯ ಹೊಸ ಬಸ್ ನಿಲ್ದಾಣದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಶಿರಸಿ ನಗರ ಠಾಣೆ ಪಿ.ಎಸ್.ಐ ನಾಗಪ್ಪ.ಬಿ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.
ಬಂಧಿತನಿಂದ 6 ಸಾವಿರ ರೂ. ಮೌಲ್ಯದ 108 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ತನಿಖಾ ಪಿ.ಎಸ್.ಐ ನಾರಾಯಣ ರಾಥೋಡ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್.ಎಂ.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಿ.ಕೃಷ್ಣಮೂರ್ತಿ, ಜಗದೀಶ್.ಎಂ, ಶಿರಸಿ ಡಿಎಸ್ಪಿ ಗೀತಾ ಪಾಟೀಲ್, ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ಶಿರಸಿ ನಗರ ಪೊಲೀಸ್ ಠಾಣೆಯ ಪಿಎಸ್ಐ ನಾಗಪ್ಪ.ಬಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಸದ್ದಾಂ ಹುಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ರಾಮಯ್ಯ ಪೂಜಾರಿ, ಹನುಮಂತ ಮಾಕಾಪುರ, ರಾಜಶೇಖರ, ಸುನೀಲ್ ಹಡಲಗೆ, ರಾಜು.ಎಂ, ಸುದರ್ಶನ ನಾಯ್ಕ ಭಾಗವಹಿಸಿದ್ದರು.
ಈ ಸುದ್ದಿಯನ್ನೂ ಓದಿ: Sirsi News: ಶಿರಸಿ ನಗರ ಠಾಣೆ ಪೊಲೀಸರಿಂದ ಕಾರ್ಯಾಚರಣೆ; 41 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು ಸಿಸಿಬಿ ಪೊಲೀಸರಿಂದ ಗಾಂಜಾ ಆರೋಪಿಗಳ ಸೆರೆ
ನಗರದ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆ ಭಾಗವಾಗಿ ಶುಕ್ರವಾರ 123 ಕೆ. ಜಿ. ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದೆ. ಗಾಂಜಾ ಸಾಗಾಟಕ್ಕೆ ಬಳಸಲಾದ ವಾಹನವನ್ನು ಜಪ್ತಿ ಮಾಡಲಾಗಿದೆ. ಕೇರಳ ರಾಜ್ಯದ ಕಾಸರಗೋಡು ತಾಲೂಕಿನ ಮಸೂದ್ ಎಂ. ಕೆ (45), ಮೊಹಮ್ಮದ್ ಆಶಿಕ್ (24) ಮತ್ತು ಸುಬೇರ್ (30) ಬಂಧಿತ ಆರೋಪಿಗಳು. ಆರೋಪಿಗಳು ಆಂಧ್ರಪ್ರದೇಶದಿಂದ ಗಾಂಜಾ ಸಾಗಿಸುತ್ತಿದ್ದರು. ಎರಡು ಕಾರುಗಳಲ್ಲಿ ಸುಮಾರು 123 ಕೆಜಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದರು.