ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sirsi Marikamba Jatre 2026: ಫೆ. 24ರಿಂದ ದಕ್ಷಿಣ ಭಾರತದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ

ಜಾಗೃತ ಶಕ್ತಿ ಪೀಠಗಳಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆಯನ್ನು ಫೆ. 24ರಿಂದ ಮಾ. 4ರವರೆಗೆ ಒಂಬತ್ತು ದಿನಗಳ ಕಾಲ ಅದ್ಧೂರಿಯಾಗಿ ನಡೆಸಲು ದೇಗುಲ ಆಡಳಿತ ಮಂಡಳಿ ನಿರ್ಧರಿಸಿದೆ. ಫೆ.24 ರಂದು ದೇವಿಯ ರಥದ ಕಲಶ ಪ್ರತಿಷ್ಠೆ ಮತ್ತು ಜಾತ್ರಾ ಕಲ್ಯಾಣ ಪ್ರತಿಷ್ಠೆ, ಫೆ.25 ರಂದು ಬೆಳಗ್ಗೆ 7.27ಕ್ಕೆ ರಥೋತ್ಸವ ನಡೆಯಲಿದೆ.

ಫೆ. 24ರಿಂದ ದಕ್ಷಿಣ ಭಾರತದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ

ಶಿರಸಿ ಶ್ರೀ ಮಾರಿಕಾಂಬಾ ದೇವಿ ದೇಗುಲ. -

Prabhakara R
Prabhakara R Dec 21, 2025 11:35 PM

ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ (Sirsi Marikamba Jatre 2026) ದಿನಾಂಕ ನಿಗದಿಯಾಗಿದೆ. ಈ ಬಾರಿ ಫೆ. 24ರಿಂದ ಮಾ. 4ರವರೆಗೆ ಒಂಬತ್ತು ದಿನಗಳ ಕಾಲ ವೈಭವದಿಂದ ಮಾರಿಕಾಂಬಾ ಜಾತ್ರೆ ನಡೆಸಲು ದೇವಾಲಯದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ 7ರಿಂದಲೇ ದೇವಿಯ ಪ್ರತಿಷ್ಠಾ ಮಂಟಪ ಕಳಚುವುದು, ಹೊರಬೀಡು, ರಥದ ಮರಕ್ಕೆ ಪೂಜೆ ಸೇರಿ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ.

ಫೆ.24 ರಂದು ದೇವಿಯ ರಥದ ಕಲಶ ಪ್ರತಿಷ್ಠೆ ಮತ್ತು ಜಾತ್ರಾ ಕಲ್ಯಾಣ ಪ್ರತಿಷ್ಠೆ, ಫೆ.25 ರಂದು ಬೆಳಗ್ಗೆ 7.27ಕ್ಕೆ ರಥೋತ್ಸವ ಹಾಗೂ ಫೆ.26ರಂದು ಗದ್ದುಗೆ ಸೇವೆಗಳು ನಡೆಯಲಿವೆ. ಮಾರ್ಚ್‌ 4ರಂದು ಜಾತ್ರೆ ಮುಕ್ತಾಯವಾಗಲಿದ್ದು, ಮಾರ್ಚ್‌ 19ರಂದು ಯುಗಾದಿ ಪ್ರತಿಷ್ಠೆ ನೆರವೇರಲಿದೆ.

ದೇವಾಲಯದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಜಾತ್ರಾ ದಿನಾಂಕ ಮತ್ತು ಧಾರ್ಮಿಕ ಚಟುವಟಿಕೆಗಳ ಮಾಹಿತಿಯ ರಾಯಸ ಪತ್ರಿಕೆಯನ್ನು ವಿದ್ವಾನ್ ಶರಣಾಚಾರ್ಯರು ಓದಿದರು. ಜಾತ್ರೆಯನ್ನು ಸುಗಮವಾಗಿ ನಡೆಸಲು ಸಾರ್ವಜನಿಕರು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಶಾಸಕ ಭೀಮಣ್ಣ ಟಿ ನಾಯ್ಕ, ಎಸಿ ಕಾವ್ಯರಾಣಿ, ಡಿವೈಎಸ್‌ಪಿ ಗೀತಾ ಪಾಟೀಲ್, ದೇವಾಲಯದ ಅಧ್ಯಕ್ಷ ರವೀಂದ್ರ ಗಣಪತಿ ನಾಯ್ಕ, ಉಪಾಧ್ಯಕ್ಷ ಸುದೇಶ ಜೋಗಳೆಕರ್, ಧರ್ಮದರ್ಶಿಗಳಾದ ಸುಧೀರ ಹಂದ್ರಾಳ, ಪ್ರಮುಖ ಬಾಬುದಾರರಾದ ಜಗದೀಶ ಗೌಡ್ರು, ಪೌರಾಯುಕ್ತರಾದ ಪ್ರಕಾಶ ಚನ್ನಪ್ಪನವರ್, ಅಧಿಕಾರಿಗಳು, ಬಾಬುದಾರರು ಮತ್ತು ಸಾರ್ವಜನಿಕರು ಭಾಗಿಯಾಗಿದ್ದರು.