ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Sirsi Marikamba Jatre 2026: ಶಿರಸಿ ಮಾರಿಕಾಂಬಾ ಜಾತ್ರೆ ಹಿನ್ನೆಲೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು; ಇಲ್ಲಿದೆ ವೇಳಾಪಟ್ಟಿ

ಯಶವಂತಪುರ ಮತ್ತು ತಾಳಗುಪ್ಪ ನಡುವೆ ಸಂಚರಿಸುವ ಈ ವಿಶೇಷ ರೈಲು (06587) ಫೆ.27ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 5.05ಕ್ಕೆ ತಾಳಗುಪ್ಪ ತಲುಪಲಿದೆ. ಅದೇ ರೀತಿ ರೈಲು (06588) ಫೆ.28ರಂದು ಬೆಳಗ್ಗೆ 9.30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ಸೇರಲಿದೆ.

ಶಿರಸಿ ಜಾತ್ರೆ ಹಿನ್ನೆಲೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು

ಶಿರಸಿ ಮಾರಿಕಾಂಬಾ ದೇವಿ. -

Prabhakara R
Prabhakara R Feb 25, 2026 4:26 PM

ಹುಬ್ಬಳ್ಳಿ: ಶಿರಸಿಯ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ (Sirsi Marikamba Jatre 2026) ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು (Yeshwanthpur-Talguppa Special train) ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಈ ವಿಶೇಷ ರೈಲು (06587) ಫೆ.27ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 5.05ಕ್ಕೆ ತಾಳಗುಪ್ಪ ತಲುಪಲಿದೆ. ಅದೇ ರೀತಿ ರೈಲು (06588) ಫೆ.28ರಂದು ಬೆಳಗ್ಗೆ 9.30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ಸೇರಲಿದೆ.

ಈ ವಿಶೇಷ ರೈಲು ಒಟ್ಟು 20 ಬೋಗಿ ಹೊಂದಿರಲಿದ್ದು, ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ) ಬೋಗಿಗಳು ಇರಲಿವೆ. ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ, ಹಾರನಹಳ್ಳಿ, ಕುಂಸಿ, ಅರಸಾಳು, ಕೆಂಚನಾಳು, ಆನಂದಪುರಂ, ಅಡೇರಿ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಇನ್ನು ಜಾತ್ರೆಯ ಅಂಗವಾಗಿ ಯಶವಂತಪುರ-ಶಿವಮೊಗ್ಗ ನಡುವೆ ಸಂಚರಿಸುವ ರೈಲನ್ನು (16581/16582) ತಾತ್ಕಾಲಿಕವಾಗಿ ತಾಳಗುಪ್ಪದವರೆಗೆ ವಿಸ್ತರಿಸಲು ನಿರ್ಧರಿಸಿದೆ. ಯಶವಂತಪುರದಿಂದ ಹೊರಡುವ ರೈಲು ಶಿವಮೊಗ್ಗದ ಬದಲಾಗಿ ತಾಳಗುಪ್ಪವರೆಗೆ ಸಂಚರಿಸಲಿದೆ. ಈ ರೈಲು ಶಿವಮೊಗ್ಗದ ಬದಲು ತಾಳಗುಪ್ಪದಿಂದಲೇ ಪ್ರಯಾಣ ಆರಂಭಿಸಲಿದೆ. ಈ ವಿಸ್ತರಣೆಯು ಒಂದು ಟ್ರಿಪ್‌ಗೆ ಮಾತ್ರ ಅನ್ವಯಿಸಲಿದೆ.

ಮಾರ್ಚ್ 1ರಂದು ಯಶವಂತಪುರದಿಂದ ರಾತ್ರಿ 12.15ಕ್ಕೆ ಹೊರಟು ಬೆಳಗ್ಗೆ 9 ಗಂಟೆಗೆ ತಾಳಗುಪ್ಪ ತಲುಪಲಿದೆ. ಅದೇ ದಿನ ರಾತ್ರಿ 10 ಗಂಟೆಗೆ ತಾಳಗುಪ್ಪದಿಂದ ಹೊರಟು, ಮರುದಿನ ಬೆಳಿಗ್ಗೆ 4.45ಕ್ಕೆ ಯಶವಂತಪುರ ತಲುಪಲಿದೆ. ಶಿವಮೊಗ್ಗದಿಂದ ಮುಂದಕ್ಕೆ ಕೊನಗವಳ್ಳಿ, ಹಾರನಹಳ್ಳಿ, ಕುಂಸಿ, ಅರಸಾಳು, ಕೆಂಚನಾಳು, ಆನಂದಪುರಂ, ಅಡೇರಿ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.